AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್​​ ಕೆಎಂಎಫ್​​ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್​ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಇದು ಶುದ್ಧ ಸುಳ್ಳು ಎಂದಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.​

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ
ಕೆಎಂಎಫ್‌ ಉತ್ಪನ್ನಗಳುImage Credit source: deccanherald
ವಿನಯ್​ ಕಾಶಪ್ಪನವರ್​
| Edited By: |

Updated on: Feb 19, 2026 | 3:21 PM

Share

ಬೆಂಗಳೂರು, ಫೆಬ್ರವರಿ 19: ಕೆಎಂಎಫ್​​ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್. ಕೆಎಂಎಫ್​​​ ಉತ್ಪನ್ನಗಳು (KMF Products) ದೇಶ-ವಿದೇಶಗಳಿಗೆ ಸರಬರಾಜು ಆಗುತ್ತದೆ. ಇದೀಗ ಈ ಬ್ರ್ಯಾಂಡ್​​ ಮೇಲೆ ಕಿಡಿಗೇಡಿಗಳ ಕಣ್ಣು ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಂದಿನ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ ಹರಿಬಿಡಲಾಗುತ್ತಿದೆ. ಆ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಕೆಎಂಎಫ್​​ ಸಜ್ಜಾಗಿದ್ದು, ಸುಳ್ಳು ಸುದ್ದಿ ಹರಿಬಿಡುತ್ತಿರುವವರ ಮೇಲೆ ಕ್ರಿಮಿನಲ್ ಕೇಸ್​​ ದಾಖಲಿಸಲು ಮುಂದಾಗಿದೆ.

ಇದು ಶುದ್ಧ ಸುಳ್ಳು ಎಂದ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ

ಕೆಎಂಎಫ್‌ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತೆ ಅಂತಾ ಡಾ.ಶರಣ್ಯ ಸಂತೋಷ್‌ ಎಂಬುವವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಇನ್ನು ಈ ಬಗ್ಗೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಮಾತನಾಡಿದ್ದು, ಇದು ಶುದ್ಧ ಸುಳ್ಳು ಕೆಎಂಎಫ್‌ ಉತ್ಪನ್ನ ನೈಸರ್ಗಿಕವಾಗಿ ತಯಾರಿಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್​ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್

ಇದುವರೆಗೂ ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಕೆಎಂಎಫ್‌ ಉತ್ಪನ್ನಗಳಿಗೆ ಯಾವುದೇ ಕೆಮಿಕಲ್ ಹಾಕಲ್ಲ. ಈಗಾಗಲೇ ಡಾ.ಶರಣ್ಯ ಸಂತೋಷ್‌ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ, ಜನರ ದಿಕ್ಕು ತಪ್ಪಿಸುವ ಕೆಲಸಬೇಡ. ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರೆ ಕ್ರಮಕೈಗೊಳ್ಳಲಾಗುತ್ತದೆ. ಕೆಎಂಎಫ್‌ ಉತ್ಪನ್ನಗಳು ತುಂಬಾ ಸೇಫ್‌, ಯಾವುದೇ ಭಯವಿಲ್ಲದೆ ಬಳಸುವಂತೆ ಗ್ರಾಹಕರಿಗೆ ಬಿ.ಶಿವಸ್ವಾಮಿ ಮನವಿ ಮಾಡಿದ್ದಾರೆ.

ಕೆಎಂಎಫ್​​ನ ಎಲ್ಲಾ ಉತ್ಪನ್ನಗಳು ಸೇಫ್​ ಎಂದ ಆರೋಗ್ಯ ಇಲಾಖೆ

ಇನ್ನು ಕೆಎಂಎಫ್ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಉತ್ಪನ್ನಗಳು ಸೇಫ್​​ ಎಂಬ ವರದಿ ಬಂದಿದೆ. ಮೈಸೂರು ಪಾಕ್, ಮಿಲ್ಕ್ ಪೇಡಾ, ಪನ್ನೀರ್, ವೆನಿಲಾ ಮಿಲ್ಕ್ ಸೇಕ್​​ ಸೇರಿದಂತೆ ಎಲ್ಲಾ ಉತ್ಪನ್ನಗಳು ಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್