Gruha Jyothi Scheme: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗುತ್ತಾ? ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್​

ಗೃಹಜ್ಯೋತಿ ಯೋಜನೆ ಕುರಿತಾಗಿ ಹಲವು ಅನುಮಾನಗಳಿವೆ. ಜನರಲ್ಲಿ ಹಲವು ಗೊಂದಲ ಮತ್ತು ಪ್ರಶ್ನೆಗಳು ಮೂಡಿವೆ ಈ ಕುರಿತು ಇಂಧನ ಸಚಿವ ಕೆಜೆ ಜಾರ್ಜ ಸ್ಪಷ್ಟನೆ ನೀಡಿದ್ದಾರೆ.

Gruha Jyothi Scheme: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗುತ್ತಾ? ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್​
ಕೆಜೆ ಜಾರ್ಜ್​​

Updated on: Jun 03, 2023 | 12:50 PM

ಬೆಂಗಳೂರು: ರಾಜ್ಯ ಸರ್ಕಾರ (Karnataka Government) 5 ಗ್ಯಾರೆಂಟಿ (5 Guarantee) ಯೋಜನೆಗಳಲ್ಲಿ ಮೊದಲ ಗ್ಯಾರಂಟಿಯಾಗಿರುವ ಗೃಹಜ್ಯೋತಿ (Gruha Jyothi Scheme) ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ನಿನ್ನೆ (ಜೂ.2) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸುದ್ದಿಗೋಷ್ಠಿ ನಡೆಸಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿದರು. ಇನ್ನು ಗೃಹಜ್ಯೋತಿ ಯೋಜನೆ ಕುರಿತಾಗಿ ಹಲವು ಅನುಮಾನಗಳಿವೆ. ಜನರಲ್ಲಿ ಹಲವು ಗೊಂದಲ ಮತ್ತು ಪ್ರಶ್ನೆಗಳು ಮೂಡಿವೆ ಈ ಕುರಿತು ಇಂಧನ ಸಚಿವ ಕೆಜೆ ಜಾರ್ಜ (KJ George) ಸ್ಪಷ್ಟನೆ ನೀಡಿದ್ದಾರೆ. ಯಾವ ಬಾಡಿಗೆದಾರರೂ ವಿದ್ಯುತ್ ಬಿಲ್ ಕಟ್ಟಬೇಕಿಲ್ಲ. ನಾವು ಆರ್​​ಆರ್ ಸಂಖ್ಯೆ ಆಧಾರದ ಮೇಲೆ ಯುನಿಟ್​​ ಪರಿಗಣಿಸುತ್ತೇವೆ ಎಂದು ಹೇಳಿದರು.

ಬೆಂಗಳೂರಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ಬಾಡಿಗೆದಾರರನ್ನು ಪ್ರತ್ಯೇಕವಾಗಿ ಗುರುತಿಸುವ ಪ್ರಶ್ನೆಯೇ ಬರುವುದಿಲ್ಲ. ಮಾಲೀಕರಿರಲಿ, ಬಾಡಿಗೆದಾರಿರಲಿ ಆರ್ ಆರ್ ಸಂಖ್ಯೆ ಆಧಾರದ ಮೀಟರ್​​ ರೀಡ್​ ಮಾಡಲಾಗುತ್ತದೆ. ಅಲ್ಲಿ 200 ಯುನಿಟ್​​ ಒಳಗಡೆ ಬಳಸಿದ್ದರೇ ಉಚಿತ ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಅಡಿ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗೆ? ಇಲ್ಲಿದೆ ಸ್ಪಷ್ಟ ಚಿತ್ರಣ

ಅಲ್ಲದೇ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಹೆಚ್ಚುವರಿ ಬಿಲ್ ಮಾತ್ರ ಕಟ್ಟಬೇಕು. ಅಂದರೆ ವಾರ್ಷಿಕ ಸರಾಸರಿ 10% ಗಿಂತ ಹೆಚ್ವು ಬಳಸಿದರೆ ಮಾತ್ರ ಬಿಲ್ ಕಟ್ಟಬೇಕು. ಉದಾಹರಣೆಗೆ ವಾರ್ಷಿಕ ಸರಾಸರಿ ಬಳಕೆಯು 100 ಯೂನಿಟ್‌ ಇದೆ ಎಂದಿಟ್ಟುಕೊಳ್ಳೋಣ (ಮಾಸಿಕ ವಿದ್ಯುತ್ ಬಳಕೆಯನ್ನು ಒಟ್ಟು ಲೆಕ್ಕ ಹಾಕಿ 12 ರಿಂದ ಭಾಗಿಸುವ ಮೂಲಕ ಇದನ್ನು ಪಡೆಯಲಾಗಿದೆ). ಒಟ್ಟು ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ 10 ರಷ್ಟನ್ನು ಒದಗಿಸಲಾಗುತ್ತದೆ. ಇದರೊಂದಿಗೆ, ಶೇ 110 ಯೂನಿಟ್ ವರೆಗೆ ವಿದ್ಯುತ್ ಬಳಸಿದರೆ ಬಿಲ್ ಪಾವತಿಸಬೇಕಿಲ್ಲ.

ಇದಕ್ಕಿಂತ ಹೆಚ್ಚಿಗೆ ಬಳಸಿದರೇ ಮಾತ್ರ ಬಿಲ್​ ಕಟ್ಟಬೇಕು. ಮತ್ತು ಈ ಯೋಜನೆ ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ