ಮಟ್ರೋದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬೇಡಿಕೆ ಇಟ್ಟ ವೈದ್ಯನಿಗೆ ಫ್ರೀ ಚಿಕಿತ್ಸೆ ಕೊಡಿ ಎಂದ ನೆಟ್ಟಿಗ

ಸರ್ಕಾರಿ ಸಾರಿಗೆ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ನಮ್ಮ ಮೆಟ್ರೋದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಬೇಕೆಂದು ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ.

ಮಟ್ರೋದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬೇಡಿಕೆ ಇಟ್ಟ ವೈದ್ಯನಿಗೆ ಫ್ರೀ ಚಿಕಿತ್ಸೆ ಕೊಡಿ ಎಂದ ನೆಟ್ಟಿಗ
ನಮ್ಮ ಮೆಟ್ರೋ
Follow us
ರಮೇಶ್ ಬಿ. ಜವಳಗೇರಾ
|

Updated on: Jun 29, 2023 | 10:39 AM

ಬೆಂಗಳೂರು: ಕರ್ನಾಟಕದಲ್ಲಿ ಕೆಲವು ದಿನಗಳ ಹಿಂದಷ್ಟೇ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆಯನ್ನು (Shakthi Yojana) ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು(Women) ಹೆಚ್ಚಿನ ಸಂಂಖ್ಯೆಯಲ್ಲಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದರ ಮಧ್ಯೆ ಬೆಂಗಳೂರಿನ ನಮ್ಮ ಮೆಟ್ರೋ (Namma metro) ರೈಲಿನಲ್ಲೂ ಉಚಿತ ಪ್ರಯಾಣ ಕಲ್ಪಿಸುವಂತೆ ವೈದ್ಯರೊಬ್ಬರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ಅರ್ಧ ದಿನ ಕಳೆದರೂ 40 ರೂ ಬಾಡಿಗೆ ಬಂದಿಲ್ಲ- ಉಚಿತ ಭಾಗ್ಯದ ವಿರುದ್ಧ ಆಟೋ ಚಾಲಕನ ಗೋಳಾಟ, ವಿಡಿಯೋ ಟ್ವಿಟರ್‌ನಲ್ಲಿ ಚರ್ಚೆ

ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಸರ್ಕಾರ ನೀಡಬೇಕೆಂದು ಬೆಂಗಳೂರಿನ ಸಕ್ರಾ ವರ್ಲ್ಡ್ ಹಾಸ್ಪಿಟಲ್‌ನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ.ದೀಪಕ್ ಕೃಷ್ಣಮೂರ್ತಿ ಎನ್ನುವವರು ಒತ್ತಾಯಿಸಿದ್ದಾರೆ. ಅವರು ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ವಂಶಿ ಎನ್ನುವವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, ವೈದ್ಯರು ಎಲ್ಲಾ ಮಹಿಳೆಯರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಡಾ.ದೀಪಕ್ ಕೃಷ್ಣಮೂರ್ತಿ ಅವರ ಕಾಲೆಳೆದಿದ್ದಾರೆ. ಮತ್ತೋರ್ವ ವೈದ್ಯ ಡಾ.ಫಿಲೋಮತ್ ಎನ್ನುವರು ಟ್ವೀಟ್​ ಮಾಡಿ, ಹೆಣ್ಣುಮಕ್ಕಳು ಎಂಬ ಕಾರಣಕ್ಕೆ ಯಾವುದನ್ನೂ ಉಚಿತವಾಗಿ ನೀಡಬಾರದು ಎಂದಿದ್ದಾರೆ.

ಇನ್ನೋರ್ವ ನೆಟ್ಟಿಗ ಪ್ರತಿಕ್ರಿಯಿಸಿ, ವಿಮಾನದಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಬೇಕು ಎಂದು ಕಮೆಂಟ್ ಹಾಕಿದ್ದಾರೆ. ಇದರಿಂದ ನಮ್ಮ ಮೆಟ್ರೋನಲ್ಲೂ ಮಹಿಳೆಯರಿಗೆ ಉಚಿತ ಪ್ರಾಸ್ತಾಪ ಮಾಡಿದ ವೈದ್ಯ ಡಾ.ದೀಪಕ್ ಕೃಷ್ಣಮೂರ್ತಿ ಅವರ ಟ್ವೀಟ್​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಯಾಗುತ್ತಿದ್ದು, ಇದಕ್ಕೆ ನೆಟ್ಟಿಗರು ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ