AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಡಿ.ಕೆ. ಶಿವಕುಮಾರ್​ಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಪ್ಪಟ ಸುಳ್ಳು ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಡಿ.ಕೆ. ಶಿವಕುಮಾರ್​ಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿ .ಕೆ. ಶಿವಕುಮಾರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 09, 2021 | 1:04 PM

ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ. ಸಿ. ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು (ಅಕ್ಟೋಬರ್​ 9) ಸರಣಿ ಟ್ವೀಟ್ ಮಾಡಿರುವ ಅವರು, ಡಿ.ಕೆ. ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಕಟುವಾಗಿ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಟ್ವೀಟ್​ನ ಪೂರ್ಣ ವಿವರ ಇಲ್ಲಿದೆ ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ಅನೈತಿಕ ಎಂಬುವುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಪ್ಪಟ ಸುಳ್ಳು ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ದಿವಂಗತ ನಾಯಕ ಎಂಸಿ ಮನಗೂಳಿ ನಿಧನರಾಗುವುದಕ್ಕೆ 15 ದಿನ ಮೊದಲು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ. ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ, ಕೊವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

ಜನವರಿ 9 ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28 ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು? ಅವರ ಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ: ಎಚ್​ಡಿ ಕುಮಾರಸ್ವಾಮಿ ಅರೋಪ

‘ಕುಮಾರಸ್ವಾಮಿ ಕುರುಡು ಕಣ್ಣಿನಿಂದ RSS ನೋಡಿದ್ದಾರೆ’- ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ವಾಗ್ದಾಳಿ

Published On - 12:29 pm, Sat, 9 October 21

ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ