AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಮುಂದಿನ ಆದೇಶದವರೆಗೂ ಮರುಪರೀಕ್ಷೆಯ ದಿನಾಂಕ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಮುಂದಿನ ಆದೇಶದವರೆಗೆ 545 ಪಿಎಸ್ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

PSI Recruitment Scam: ಮುಂದಿನ ಆದೇಶದವರೆಗೂ ಮರುಪರೀಕ್ಷೆಯ ದಿನಾಂಕ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: ವಿವೇಕ ಬಿರಾದಾರ|

Updated on:Sep 28, 2022 | 10:17 PM

Share

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ (PSI Recruitment Scam) ನಡೆದಿದ್ದು, ಮುಂದಿನ ಆದೇಶದವರೆಗೆ 545 ಪಿಎಸ್ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮರುಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಪಿಎಸ್​ಐ ಹುದ್ದೆಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

ಎಪ್ರಿಲ್​ ತಿಂಗಳಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿ  ಕರ್ನಾಟಕದಲ್ಲಿ ಪಿಎಸ್​ಐ ಹುದ್ದೆಗೆ   ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಬೆಂಗಳೂರಿನ ಕೇಂದ್ರದಲ್ಲೂ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು. ಆರೋಪಿಗಳಿಗೆ ಮರು ಪರೀಕ್ಷೆಯಲ್ಲಿ ಅವಕಾಶ ಸಿಗುವುದಿಲ್ಲ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ಹೇಳಿದ್ದರು.

ಪಿಎಸ್​ಐ ನೇಮಕಾತಿ ಪ್ರಕರಣ, ಅಕ್ಟೋಬರ್​ನಲ್ಲಿ ಎಲ್ಲ ಪ್ರಕರಣಗಳ ಚಾರ್ಜ್​ಶೀಟ್

ಕರ್ನಾಟಕದ 454 ಸಬ್​ ಇನ್​ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಆಗಿರುವ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಅಕ್ಟೋಬರ್​ನಲ್ಲಿ ಎಲ್ಲ ಪ್ರಕರಣಗಳಿಗೆ ಚಾರ್ಜ್​ಶೀಟ್  ಹಾಕಲಾಗುವುದು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್​ ಸೂದ್  ಹೇಳಿದರು. ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ ನಂತರ ಮರು ಪರೀಕ್ಷೆಯ ದಿನಾಂಕ ಘೋಷಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳ ಒಳಗೆ ಚಾರ್ಜ್​ಶೀಟ್ ಸಲ್ಲಿಸಬೇಕಿದೆ ಎಂದು ತಿಳಿಸಿದ್ದರು.

ಮರು ಪರೀಕ್ಷೆ ರದ್ದುಗೊಳಿಸುವಂತೆ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ, ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ

 ಮರು ಪರೀಕ್ಷೆ ಯನ್ನು ಕೈಬಿಡುವಂತೆ ಒತ್ತಾಯಿಸಿ ಮೇನಲ್ಲಿ  ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರಿಗೆ ಬೆಂಬಲ ನೀಡುವ ಸಲುವಾಗಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಕೂಡಲೇ ನಿರ್ಧಾರದಿಂದ ಹಿಂದೆಸರಿದು ಪ್ರಾಮಾಣಿಕವಾಗಿ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಪತ್ರ ನೀಡುವಂತೆ ಅಭ್ಯರ್ಥಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಭ್ಯರ್ಥಿಗಳು ಒಬ್ಬೊಬ್ಬರಾಗಿಯೇ ಫ್ರೀಡಂಪಾರ್ಕ್​ಗೆ ಆಗಮಿಸಿ ಪ್ರತಿಭಟನೆ ಆರಂಭಿಸಿದ್ದು, 300ಕ್ಕೂ ಹೆಚ್ಚು ಮಂದಿ ಜಮಾಯಿಸಿದ್ದಾರೆ. ಇವರಿಗೆ ಸಮತಾ ಸೈನಿಕ ದಳ, ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಬೆಂಬಲ ಸೂಚಿಸಿದ್ದರು.

ಈಗಲೇ ಭರವಸೆ ನೀಡಲು ಸಾಧ್ಯವಿಲ್ಲ

ಮರು ಪರೀಕ್ಷೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಅವರು ಭೇಟಿ ನೀಡಿ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಅಭ್ಯರ್ಥಿಗಳು ಮರು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಪಿಎಸ್​ಐ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯುವವರೆಗೂ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ತಾಳ್ಮೆಯಿಂದ ಇರಬೇಕು. ನೀವು ನೀಡಿದ ಮನವಿ ಪತ್ರವನ್ನು ನಾನು ಪರಿಶೀಲಿಸುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:04 pm, Wed, 28 September 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ