ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌

ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ.

ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌
ಪ್ರಾತಿನಿಧಿಕ ಚಿತ್ರImage Credit source: en.m.wikipedia
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 26, 2023 | 8:46 PM

ಬೆಂಗಳೂರು, ಅಕ್ಟೋಬರ್​​​ 26: ವರ್ಗಾವಣೆಗೆ ಡೋಂಟ್ ಕೇರ್ ಎಂದ 27 ಅಧಿಕಾರಿಗಳಿಗೆ ಗೇಟ್‌ಪಾಸ್​ (suspension) ನೀಡಲಾಗಿದೆ. ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್‌ ಎಂಜನಿಯರ್​​ಗಳಿಗೆ ಗೇಟ್‌ಪಾಸ್ ನೀಡಲಾಗಿದೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿನೆ ನೀಡಲಾಗಿದೆ.

ಎರಡು ವರ್ಷಗಳಿಗೊಮ್ಮೆ ವರ್ಗಾವಣೆ: ಗೃಹಸಚಿವ ಡಾ.ಜಿ.ಪರಮೇಶ್ವರ

ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಇತ್ತೀಚಿಗೆ ಮಾತನಾಡಿದ್ದು, ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದಿದ್ದರು.

ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:37 pm, Thu, 26 October 23