ಬೆಂಗಳೂರು, ಅಕ್ಟೋಬರ್ 26: ವರ್ಗಾವಣೆಗೆ ಡೋಂಟ್ ಕೇರ್ ಎಂದ 27 ಅಧಿಕಾರಿಗಳಿಗೆ ಗೇಟ್‌ಪಾಸ್ (suspension) ನೀಡಲಾಗಿದೆ. ವರ್ಗಾವಣೆ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪ ಹಿನ್ನೆಲೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ 5 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, 7 ಸಹಾಯಕ ಎಂಜನಿಯರ್‌ಗಳು ಮತ್ತು 15 ಮಂದಿ ಜೂನಿಯರ್ ಎಂಜನಿಯರ್ಗಳಿಗೆ ಗೇಟ್‌ಪಾಸ್ ನೀಡಲಾಗಿದೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.
ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿನೆ ನೀಡಲಾಗಿದೆ.
ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಇತ್ತೀಚಿಗೆ ಮಾತನಾಡಿದ್ದು, ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದಿದ್ದರು.
ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ
ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:37 pm, Thu, 26 October 23