AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಜಾಗದಲ್ಲಿ ಕಸ ಎಸೆದರೆ ಬೀಳುತ್ತೆ ದಂಡ: ನೈರುತ್ಯ ರೈಲ್ವೆಯಿಂದ ಕಠಿಣ ಕ್ರಮದ ಎಚ್ಚರಿಕೆ!

ರೈಲ್ವೆ ಜಾಗ ಮತ್ತು ಹಳಿಗಳ ಪಕ್ಕದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನೈರುತ್ಯ ರೈಲ್ವೆ ಎಚ್ಚರಿಸಿದೆ. ಜಿಬಿಎ ಮತ್ತು ಸ್ಥಳೀಯ ಪಾಲಿಕೆಗಳ ಸಹಯೋಗದೊಂದಿಗೆ ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರಿನ ರೈಲ್ವೆ ಮಾರ್ಗಗಳ ಸುತ್ತಲಿನ ಕಸ ತೆರವುಗೊಳಿಸಲು ಬೃಹತ್ ಕಾರ್ಯಾಚರಣೆ ಆರಂಭಿಸಲಾಗಿದೆ.

ರೈಲ್ವೆ ಜಾಗದಲ್ಲಿ ಕಸ ಎಸೆದರೆ ಬೀಳುತ್ತೆ ದಂಡ: ನೈರುತ್ಯ ರೈಲ್ವೆಯಿಂದ ಕಠಿಣ ಕ್ರಮದ ಎಚ್ಚರಿಕೆ!
ನೈರುತ್ಯ ರೈಲ್ವೆ
ಭಾವನಾ ಹೆಗಡೆ
|

Updated on:Jul 26, 2026 | 8:33 AM

Share

ಮುಖ್ಯಾಂಶಗಳು

  • ರೈಲ್ವೆ ಜಾಗದಲ್ಲಿ ಕಸ ಎಸೆದರೆ ಕಾನೂನು ಕ್ರಮ ಮತ್ತು ದಂಡ ಪ್ರಯೋಗ
  • ಮುಂದಿನ ಎರಡು ತಿಂಗಳಲ್ಲಿ ರೈಲ್ವೆ ಹಳಿಗಳ ಪಕ್ಕದ ತ್ಯಾಜ್ಯ ಸಂಪೂರ್ಣ ತೆರವು
  • ಕಸಕ್ಕೆ ಬೆಂಕಿ ಬಿದ್ದು ಸಿಗ್ನಲಿಂಗ್ ಕೇಬಲ್ ಹಾನಿಯಾಗುವ ಭೀತಿ ನಿವಾರಣೆಗೆ ಸಜ್ಜು

ಬೆಂಗಳೂರು, ಜುಲೈ 26: ರೈಲ್ವೆ ಹಳಿಗಳ ಪಕ್ಕದಲ್ಲಿ ಮತ್ತು ರೈಲ್ವೆಗೆ ಸೇರಿದ ಜಾಗದಲ್ಲಿ ಕಸ ಹಾಗೂ ಕಟ್ಟಡದ ತ್ಯಾಜ್ಯ (ಡೆಬ್ರಿಸ್) ಚೆಲ್ಲುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ನೈರುತ್ಯ ರೈಲ್ವೆ (SWR)ಎಚ್ಚರಿಕೆ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ನಗರದ ಐದು ಪಾಲಿಕೆಗಳ ಸಹಯೋಗದೊಂದಿಗೆ ಮುಂದಿನ ಎರಡು ತಿಂಗಳಲ್ಲಿ ರೈಲ್ವೆ ಹಳಿಗಳ ಸುತ್ತಲಿನ ಕಸ ತೆರವುಗೊಳಿಸಲು ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಕಾನೂನು ಕ್ರಮ ಮತ್ತು ದಂಡ ಪ್ರಯೋಗ!

ಶನಿವಾರ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಾತನಾಡಿ, ರೈಲ್ವೆ ಜಾಗದಲ್ಲಿ ಅನಧಿಕೃತವಾಗಿ ತ್ಯಾಜ್ಯ ಎಸೆಯುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ರೈಲ್ವೆ ಆಸ್ತಿಯನ್ನು ರಕ್ಷಿಸುವುದು ಮತ್ತು ಇರುವ ಕಸದ ರಾಶಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ. ಭವಿಷ್ಯದಲ್ಲಿ ಮತ್ತೆ ಕಸ ಎಸೆಯದಂತೆ ತಡೆಯಲು ಕಠಿಣ ಕಣ್ಗಾವಲು ವಹಿಸಲಾಗುತ್ತದೆ.

ಸಿಗ್ನಲಿಂಗ್ ವೈಯರ್ ನಾಶ!

ರೈಲ್ವೆ ಅಧಿಕಾರಿಗಳ ಪ್ರಕಾರ, ಹಳಿಗಳ ಪಕ್ಕದಲ್ಲಿ ಬೇಕಾಬಿಟ್ಟಿ ಕಸ ಎಸೆಯುವುದು ರೈಲುಗಳ ಸುರಕ್ಷಿತ ಸಂಚಾರಕ್ಕೆ ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಕಸದ ರಾಶಿಗೆ ಬೆಂಕಿ ಬಿದ್ದ ಪರಿಣಾಮ ಹಲವು ಬಾರಿ ಸಿಗ್ನಲಿಂಗ್ ಮತ್ತು ವಿದ್ಯುತ್ ಕೇಬಲ್ಗಳು ಸುಟ್ಟುಹೋಗಿ, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಲ್ಲದೆ, ಬೆಂಗಳೂರು-ಮೈಸೂರು ಮತ್ತು ಬೆಂಗಳೂರು-ಹೊಸೂರು ಮಾರ್ಗಗಳಲ್ಲಿ ತ್ಯಾಜ್ಯ ಪದೇ ಪದೇ ಶೇಖರಣೆಯಾಗುವುದರಿಂದ ರೈಲ್ವೆ ಗಡಿ ರೇಖೆಗಳು ಮರೆಯಾಗಿ, ಜಾಗ ಒತ್ತುವರಿಯಾಗುವ ಭೀತಿಯೂ ಎದುರಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 am, Sun, 26 July 26

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ