AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಹುಲಿ ಉಗುರಿನ ಪೆಂಡೆಂಟ್ ಕೂಡ ಧರಿಸಬೇಡಿ: ಸಚಿವ ಈಶ್ವರ ಖಂಡ್ರೆ ಮನವಿ

Tiger Claw Locket Row: ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ನಕಲಿ ಪೆಂಡೆಂಟ್ ಕೂಡ ಧರಿಸಬಾರದು ಎಂದು ಮನವಿ ಮಾಡಿದ್ದಾರೆ.

ನಕಲಿ ಹುಲಿ ಉಗುರಿನ ಪೆಂಡೆಂಟ್ ಕೂಡ ಧರಿಸಬೇಡಿ: ಸಚಿವ ಈಶ್ವರ ಖಂಡ್ರೆ ಮನವಿ
ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ
ಗಂಗಾಧರ​ ಬ. ಸಾಬೋಜಿ
|

Updated on: Oct 26, 2023 | 5:32 PM

Share

ಬೆಂಗಳೂರು, ಅಕ್ಟೋಬರ್​​ 26: ಚಿತ್ರನಟರು, ಗಣ್ಯರು ನಕಲಿ ಹುಲಿ ಉಗುರಿನ ಲಾಕೆಟ್ ಕೂಡ ಧರಿಸಿದರೂ ಇತರರಿಗೆ ಪ್ರೇರಣೆ ಸಿಗುತ್ತದೆ. ಅವರು ಕೂಡ ತಮ್ಮ ನಾಯಕನಂತೆ ಹುಲಿ ಉಗುರಿನ ಲಾಕೆಟ್ ಧರಿಸಲು ಬಯಸುತ್ತಾರೆ. ಆಗ ಬೇಡಿಕೆ ಹೆಚ್ಚುತ್ತದೆ. ವನ್ಯಜೀವಿಗಳ ಹತ್ಯೆ ಆಗುತ್ತದೆ. ಇದಕ್ಕೆ ಪರೋಕ್ಷ ಕುಮ್ಮಕ್ಕು ನೀಡಿದಂತೆ ಆಗುತ್ತದೆ. ಹೀಗಾಗಿ ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ನಕಲಿ ಪೆಂಡೆಂಟ್ ಕೂಡ ಧರಿಸಬಾರದು ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಹೇಳಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನು ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದರು.

ಹುಲಿ ಉಗುರಿನ ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹುಲಿ ಉಗುರು ವಿವಾದ: ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೇ ಅವಕಾಶ ನೀಡಲು ಚಿಂತನೆ; ಸಚಿವ ಈಶ್ವರ ಖಂಡ್ರೆ

ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ, ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗುತ್ತದೆ ಎಂದರು.

ಇದನ್ನೂ ಓದಿ: ಹುಲಿ ಉಗುರು ವಿವಾದ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ.

1926 ಹೆಲ್ಪ್ ಲೈನ್ ನಂಬರ್ 

ಅರಣ್ಯ ಇಲಾಖೆಗೆ 1926 ಎಂಬ ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಲು, ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಚಿನ್ನಾಭರಣ ತಯಾರಕರಿಗೆ ಮನವಿ

ಎಲ್ಲ ಚಿನ್ನಾಭರಣ ಮಳಿಗೆಗಳಲ್ಲಿ ತಮ್ಮಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ. ಇದು ಶಿಕ್ಷಾರ್ಹ ಅಪರಾಧ ಎಂಬ ಫಲಕ ಹಾಕುವಂತೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.

ಹುಲಿ ಬೇಟೆಗಾರನ ಸೆರೆ

ಇತ್ತೀಚೆಗೆ ಬೆಳಗಾವಿ ವಿಭಾಗದಲ್ಲಿ ಖಾನಾಪುರ ಬಳಿಯ ಜಳಗಾ ಅರಣ್ಯದ ವ್ಯಾಪ್ತಿಯಲ್ಲಿ ಮಧ್ಯಪ್ರದೇಶದ ಚಿಕ್ಕಾಅಲಿಯಾಸ್ ಕೃಷ್ಣಾ ಪಾಟ್ಲೆ ಪವಾರ್ ಎಂಬುವನನ್ನು ಬಂಧಿಸಲಾಗಿದ್ದು, ಆತ ಹುಲಿ ಕಳ್ಳಬೇಟೆಗಾರನಾಗಿದ್ದು, ಆತನ ವಿರುದ್ಧ ಹಲವು ರಾಜ್ಯಗಳಲ್ಲಿ ದೂರು ದಾಖಲಾಗಿದೆ. ಅರಣ್ಯ ಇಲಾಖೆ ಕಳ್ಳಬೇಟೆ ನಿಗ್ರಹಕ್ಕೂ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?