ಅನ್ಯಧರ್ಮಕ್ಕೆ ಮತಾಂತರಗೊಳ್ಳುವ SC, STಯವರಿಗೆ ಮೀಸಲಾತಿ ನೀಡಬೇಡಿ: ಸರ್ಕಾರಕ್ಕೆ VHP ರಾಷ್ಟ್ರೀಯ ಕಾರ್ಯಾಧ್ಯಕ್ಷ ಮನವಿ

ಹಿಂದೂ ಧರ್ಮದಲ್ಲಿರುವ SC, STಯವರಿಗೆ ಮಾತ್ರ ಮೀಸಲಾತಿ ನೀಡಿ. ಅನ್ಯ ಧರ್ಮಕ್ಕೆ ಮತಾಂತರಗೊಂಡು ಮೀಸಲಾತಿ ಪಡೆಯುತ್ತಿದ್ದಾರೆ. ಇದರಿಂದ ಹಿಂದೂ ಧರ್ಮದಲ್ಲಿರುವ ದಲಿತರಿಗೆ ಅನ್ಯಾಯ ಆಗಲಿದೆ ಎಂದು ವಿಹೆಚ್​​ಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅಭಿಪ್ರಾಯ ಪಟ್ಟರು.

ಅನ್ಯಧರ್ಮಕ್ಕೆ ಮತಾಂತರಗೊಳ್ಳುವ SC, STಯವರಿಗೆ ಮೀಸಲಾತಿ ನೀಡಬೇಡಿ: ಸರ್ಕಾರಕ್ಕೆ VHP ರಾಷ್ಟ್ರೀಯ ಕಾರ್ಯಾಧ್ಯಕ್ಷ ಮನವಿ
VHP ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 16, 2022 | 3:21 PM

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಂದ (SC, ST) ಅನ್ಯಧರ್ಮಕ್ಕೆ ಮತಾಂತರಗೊಂಡವರಿಗೆ ಮೀಸಲಾತಿ ನೀಡಬಾರದು ಎಂದು ವಿಹೆಚ್​​ಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮತಾಂತರಗೊಳ್ಳುವ SC, STಯವರಿಗೆ ಮೀಸಲಾತಿ ನೀಡಬೇಡಿ. ಹಿಂದೂ ಧರ್ಮದಲ್ಲಿರುವ SC, STಯವರಿಗೆ ಮಾತ್ರ ಮೀಸಲಾತಿ ನೀಡಿ. ಅನ್ಯ ಧರ್ಮಕ್ಕೆ ಮತಾಂತರಗೊಂಡು ಮೀಸಲಾತಿ ಪಡೆಯುತ್ತಿದ್ದಾರೆ. ಇದರಿಂದ ಹಿಂದೂ ಧರ್ಮದಲ್ಲಿರುವ ದಲಿತರಿಗೆ ಅನ್ಯಾಯ ಆಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಭಾರತದ ನಿವೃತ್ತ ಮುಖ್ಯ ನ್ಯಾಯ ಮೂರ್ತಿ ಕೆ.ಜಿ ಬಾಲಕೃಷ್ಣನ್ ನೇತೃತ್ವದಲ್ಲಿ ಮೀಸಲಾತಿ ಕಮಿಟಿ ರಚನೆ ಮಾಡಿದೆ‌. ಮೀಸಲಾತಿ ಸಮಿತಿ ಬಗ್ಗೆ ಕೇಂದ್ರ ಸರ್ಕಾರ ವಿಸ್ತೃತ ಸಮಾಲೋಚನೆ ಆಗಬೇಕಿದೆ ಎಂದು VHP ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದರು.

ತುಮಕೂರಲ್ಲಿ ಮತಾಂತರಗೊಂಡಿದ್ದ 15 ಜನರು ಹಿಂದೂ ಧರ್ಮಕ್ಕೆ ವಾಪಸ್​​:

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನೆಲಗುಂದನಹಟ್ಟಿ ಗ್ರಾಮದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 15 ಜನರು ಹಿಂದೂ ಧರ್ಮಕ್ಕೆ ಘರ್ ವಾಪಸಿಯಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ, 35 ಕುಟುಂಬದ 68 ಜನರು ಕೆಲ ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಮತಾಂತರಗೊಂಡ 68 ಜನರು ಎಸ್​ಸಿ ಪ್ರಮಾಣ ಪತ್ರ ಹೊಂದಿದ್ದಾರೆ. ನಿನ್ನೆ (ಅ.15) ನವಭಾರತ ಹಿಂದೂ ದಲಿತ ಸಂಘ 68 ರಲ್ಲಿ 15 ಜನರಿಗೆ ಆಣೆ ಪ್ರಮಾಣ ಮಾಡಿಸುವ ಮೂಲಕ ಮರಳಿ ಹಿಂದೂ ಧರ್ಮಕ್ಕೆ ಕರೆತಂದಿದೆ. ಈ 68 ಜನರು ಮೂಲಭೂತ ಸೌಲಭ್ಯಕ್ಕಾಗಿ ಪರದಾಡುತ್ತಿರುವಾಗ, ಸೌಲಭ್ಯ ನೀಡುವುದಾಗಿ ಆಮಿಷವೊಡ್ಡಿ ಮತಾಂತರ ಮಾಡಿರುವ ಆರೋಪ ಕೇಳಿಬಂದಿದೆ.

ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿದ ನೂರಾರು ಜನ

ಯಾದಗಿರಿ: ಹಿಂದು ಧರ್ಮದಲ್ಲಿ ದಲಿತರನ್ನು ಇಂದಿಗೂ ಕೀಳಾಗಿ ಕಾಣುತ್ತಿದ್ದಾರೆ. ಅಸ್ಪೃಶ್ಯತೆ ನಮ್ಮಲ್ಲಿ ಇನ್ನು ಜೀವಂತವಾಗಿದೆ. ಇದರಿಂದ ಕೆಳವರ್ಗದವರಿಗೆ ಅನ್ಯಾಯಗಳಾಗುತ್ತಿವೆ. ಹೀಗಾಗಿ ಸ್ವಿಇಚ್ಛೆಯಿಂದಾಗಿ ಬೌದ್ಧ ಧರ್ಮ ಸ್ವೀಕರ ಮಾಡುತ್ತಿದ್ದೇವೆ. ಇದು ಮತಾಂತರವಲ್ಲ, ದೀಕ್ಷೆಯಾಗಿದೆ ಎಂದು ಗೋಲ್ಡನ್ ಕೇವ್ ಬುದ್ಧ ವಿಹಾರ ಟ್ರಸ್ಟ್ ಅಧ್ಯಕ್ಷ ವೆಂಕಟೇಶ್ ಹೊಸಮನಿ ಹೇಳಿದರು. ಹಿಂದು ಧರ್ಮ ತ್ಯಜಿಸಿ ದಲಿತ ಸಮುದಾಯದ ನೂರಾರು ಜನ ಬೌದ್ಧ ಧರ್ಮ ಸ್ವೀಕರ ಮಾಡಿರುವಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು.

ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ ಪ್ರತಿಪಾಧಿಸಿದ 22 ಪ್ರತಿಜ್ಞಾ ವಿಧಿಗಳನ್ನ ಬೋಧಿಸಲಾಯಿತು. ಪ್ರತಿಜ್ಞಾ ವಿಧಿ ಪಡೆದು ಹಿಂದೂ ಧರ್ಮಕ್ಕೆ ವಿದಾಯ ಹೇಳಿ ಬೌದ್ಧ ಧರ್ಮ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭಾಗಿಯಾದ ಬಹುತೇಕರು ಬೌದ್ಧ ಧರ್ಮ ಸ್ವೀಕರ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:10 pm, Sun, 16 October 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ