ಶಿಕ್ಷಣವನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳಬೇಡಿ: ಸರ್ಕಾರಕ್ಕೆ ಶಿಕ್ಷಣ ತಜ್ಞ ನಿರಂಜನಾರಾಧ್ಯ ಮನವಿ

ಶಿಕ್ಷಣವನ್ನು ರಾಜಕೀಯ ದಾಳವನ್ನಾಗಿ ಬಳಕೆ ಮಾಡದೇ ಸಾಮಾಜಿಕ ಒಳಿತು ಮತ್ತು ಪರಿವರ್ತನೆ ಸಾಧನವಾಗಿಸಬೇಕಿದೆ. ಈ ಹಿನ್ನೆಲೆ ಶಿಕ್ಷಣಕ್ಕೆ ಸಂಬಂಧಿಸಿದ ಕೆಲ ಹಕ್ಕೊತ್ತಾಯ ಜಾರಿಗೊಳಿಸುವಂತೆ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಸಿಎಂ ಸಿದ್ಧರಾಮಯ್ಯಗೆ ಮನವಿ ಮಾಡಿದ್ದಾರೆ.

ಶಿಕ್ಷಣವನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳಬೇಡಿ: ಸರ್ಕಾರಕ್ಕೆ ಶಿಕ್ಷಣ ತಜ್ಞ ನಿರಂಜನಾರಾಧ್ಯ ಮನವಿ
ಸಿಎಂ ಸಿದ್ಧರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on: May 29, 2023 | 8:34 PM

ಬೆಂಗಳೂರು: ಈ ಹಿಂದಿನ ಬಿಜೆಪಿ (BJP) ಸರ್ಕಾರ ಶಿಕ್ಷಣವನ್ನು ಸಂಪೂರ್ಣವಾಗಿ ರಾಜಕಾರಣಕ್ಕೆ ಬಳಸಿಕೊಳ್ಳುವ ಮೂಲಕ ಹಾಳು ಮಾಡಿದ್ದಲ್ಲದೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಪಠ್ಯ ಪರಿಷ್ಕರಣೆ ವಿಚಾರ ಸಾಕಷ್ಟು ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ಆಗ ಟಿಪ್ಪು ಸುಲ್ತಾನ್ ಸೇರಿದಂತೆ ಕೆಲವರ ಬಗೆಗಿನ ಪಾಠ ಕೈಬಿಡಲಾಗಿದೆ ಎಂಬ ಆರೋಪಗಳು, ಬಿಸಿ ಬಿಸಿ ಚರ್ಚೆಗಳು ನಡೆದಿದ್ದವು. ಆದರೆ ಸದ್ಯ ನೂತನ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಶಿಕ್ಷಣವನ್ನು ರಾಜಕೀಯ ದಾಳವನ್ನಾಗಿ ಬಳಕೆ ಮಾಡದೇ ಸಾಮಾಜಿಕ ಒಳಿತು ಮತ್ತು ಪರಿವರ್ತನೆ ಸಾಧನವಾಗಿಸಬೇಕಿದೆ. ಈ ಹಿನ್ನೆಲೆ ಶಿಕ್ಷಣಕ್ಕೆ ಸಂಬಂಧಿಸಿದ ಕೆಲ ಹಕ್ಕೊತ್ತಾಯ ಜಾರಿಗೊಳಿಸುವಂತೆ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ. ಪಿ ಸಿಎಂ ಸಿದ್ಧರಾಮಯ್ಯಗೆ ಮನವಿ ಮಾಡಿದ್ದಾರೆ.

ರಾಜ್ಯಾಂದ್ಯಂತ ಇಂದು ಶಾಲೆಗಳು ಪ್ರಾರಂಭವಾಗಲಿದ್ದು, ಸರ್ಕಾರ ಶಿಕ್ಷಣದ ವಿಷಯವನ್ನು ಅತ್ಯಂತ ಜರೂರಿನ ವಿಷಯವನ್ನಾಗಿ ಪರಿಗಣಿಸಿ, ಎಲ್ಲಾ ರೀತಿಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಅವುಗಳಲ್ಲಿ ತಕ್ಷಣದ ಆದ್ಯತೆ ಈ ಕೆಳಗಿನಂತಿವೆ.

ಇದನ್ನೂ ಓದಿ: Textbook Controversy: ಶಾಲಾರಂಭಕ್ಕೂ ಮುನ್ನವೇ ಮತ್ತೆ ಶುರುವಾಯ್ತು ಪಠ್ಯ ಪರಿಷ್ಕರಣೆ ದಂಗಲ್, ಹೆಡ್ಗೆವಾರ್ ಪಾಠಕ್ಕೆ ಬೀಳುತ್ತಾ ಬ್ರೇಕ್?

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

  • ಈಗಾಗಲೇ ಮುದ್ರವಾಗಿ ಬಿಇಒ ಕಚೇರಿಗಳನ್ನು/ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಯಥಾವತ್ತಾಗಿ ಮಕ್ಕಳಿಗೆ ವಿತರಿಸದಿರಲು ಸ್ಪಷ್ಟ ಸೂಚನೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಬೇಕು.
  • ಈ ಪಠ್ಯಪುಸ್ತಕಗಳಲ್ಲಿ ಬದಲಾಗಿದ್ದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಈ ಪುಸ್ತಕಗಳಿಂದ ತೆಗೆದು ಹಾಕಿ ವಿತರಿಸಲು ಅಯಾ ವ್ಯಾಪ್ತಿಯ ಸಿಆರ್​ಪಿ ಮತ್ತು ಶಾಲೆಯ ಶಿಕ್ಷಕರನ್ನು ಹೊಣೆ ಮಾಡಬೇಕು.
  • ಈ ಎಲ್ಲಾ ಪುಸ್ತಕಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು.
  • ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿ ಮಕ್ಕಳ ಕಲಿಕೆಯನ್ನು ಪೂರ್ಣವಾಗಿ ಹಳಿ ತಪ್ಪಿಸಿದೆ. 2021-22 ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಸರಿ ಸುಮಾರು1,41,358. ಈ ಪೈಕಿ 13,352 ಖಾಯಂ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಮುಗಿದಿದ್ದು ಮುಂದಿನ ಒಂದು ವಾರದ ಒಳಗಾಗಿ ಈ ಶಿಕ್ಷಕರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸುವುದು.
  • ಸರ್ಕಾರಿ ಶಾಲೆಯಲ್ಲಿ ಮಕ್ಕಳಿದ್ದರೂ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಈ ಖಾಯಂ ಶಿಕ್ಷಕರ ನೇಮಕವಾಗಬೇಕು.
  • ಬಾಕಿ ಖಾಲಿ ಉಳಿಯುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಜೂನ್‌ 15ರ ಒಳಗಾಗಿ ನೇಮಿಸಿಕೊಳ್ಳಲು ಯುದ್ಧೋಪಾದಿಯಲ್ಲಿ ಕ್ರಮ ವಹಿಸುವುದು.
  • ಶಾಲೆ ಪ್ರಾರಂಭಕ್ಕೆ ಮುನ್ನ ಎಲ್ಲಾ ಮಕ್ಕಳಿಗೆ ದೊರೆಯಬೇಕಾದ ಉತ್ತೇಜಕಗಳಾದ ಪಠ್ಯಪುಸ್ತಕ, ಸಮವಸ್ತ್ರ , ಷೂ ಮತ್ತು ಸಾಕ್ಸ್‌ ಗಳನ್ನು ತಕ್ಷಣ ಸಕಾಲಕ್ಕೆ ಒದಗಿಸುವುದು.
  • ಶುದ್ಧ ಕುಡಿಯುವ ನೀರು, ಮಕ್ಕಳ ಶೌಚಾಲಯ, ತರಗತಿ ಕೋಣೆ ಸೇರಿದಂತೆ ಮೂಲಭೂತ ಸೌಕರ್ಯಗಳು ಪ್ರಥಮ ಆದ್ಯತೆಯಾಗಬೇಕು.

ಉನ್ನತ ಹಾಗು ಕಾಲೇಜು ಹಂತದ ಶಿಕ್ಷಣ

  • ಕೇಂದ್ರ ಸರ್ಕಾರ ಅಸಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕವಾಗಿ ಪಾರದರ್ಶಕತೆಯೇ ಇಲ್ಲದೆ ಗೌಪ್ಯವಾಗಿ ಸಂವಿಧಾನ ಪ್ರತಿಪಾದಿಸುವ ಬಹುತ್ವದ ರಾಷ್ಟ್ರೀಯತೆಗೆ ಬದಲಾಗಿ ಧರ್ಮಾಧಾರಿತ ಕೋಮುವಾದಿ ನೆಲೆಯ ಹಿಂದುತ್ವ ರಾಷ್ಟ್ರೀಯತೆಯನ್ನು ಸಾಧಿಸಲು ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಸಾರಾಸಗಟಾಗಿ ತಿರಸ್ಕರಿಸುವ ನಿರ್ಣಯ ಕೈಗೊಳ್ಳಬೇಕು.
  • ಎಲ್ಲಾ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು.
  • ವಿಶ್ವವಿದ್ಯಾಲಯಗಳಿಗೆ ಕುಲಪತಿ ಹಾಗು ಕುಲಸಚಿವರನ್ನು ಆಯ್ಕೆ ಮಾಡುವಾಗ ವಿಷಯ ಪರಿಣಿತರು ಮತ್ತು ಪ್ರಾಮಾಣಿಕರನ್ನು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಂವಿಧಾನದ ಮೌಲ್ಯಗಳಲ್ಲಿ ಪೂರ್ಣ ನಂಬಿಕೆ ಇರುವವರನ್ನು ಆಯ್ಕೆ ಮಾಡಬೇಕು ಇತ್ಯಾದಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?