ಕೊವಿಡ್ ಸೋಂಕಿತರಿಂದ ದುಪ್ಪಟ್ಟು ಶುಲ್ಕ ವಸೂಲಿ; ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ಆರೋಪ
ಅಧಿಕ ಶುಲ್ಕ ಪಡೆದಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಬೆಳಗಾವಿ ಅಧಿವೇಶದಲ್ಲಿ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ತಿಳಿಸಿದ್ದಾರೆ. ಆದರೆ ಅಂದು ಆರೋಗ್ಯ ಇಲಾಖೆ ಮಾಹಿತಿ ನೀಡಿರಲಿಲ್ಲ. ಇದೀಗ ಸೋಂಕಿತರ ಚಿಕಿತ್ಸೆಗೆ ದುಪ್ಪಟ್ಟು ಹಣ ವಸೂಲಿ ಮಾಡಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ.
ಬೆಂಗಳೂರು: ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ (Private hospital) ಕೊವಿಡ್ (covid 19) ಸೋಂಕಿತರಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಣಿಪಾಲ್, ಅಪೋಲೊ ಸಮೂಹ, ಕೊಲಂಬಿಯ ಏಷಿಯಾ, ವಿಕ್ರಂ ಸೇರಿ 100ಕ್ಕೂ ಹೆಚ್ಚು ಆಸ್ಪತ್ರೆಗಳ ವಿರುದ್ಧ ಹೆಚ್ಚಿನ ಹಣ ವಸೂಲಿಯ ಆರೋಪ ಮಾಡಲಾಗಿದೆ. ಕೊವಿಡ್ ಸಮಯದಲ್ಲಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕ ಪಡೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೂರು ನೀಡಲಾಗಿದೆ. ದೂರಿನನ್ವಯ ಆರೋಗ್ಯ ಇಲಾಖೆ ಇಂದು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಪರಿಶೀಲನೆಗೆ ಮುಂದಾಗಿದೆ.
ಅಧಿಕ ಶುಲ್ಕ ಪಡೆದಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಬೆಳಗಾವಿ ಅಧಿವೇಶದಲ್ಲಿ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ತಿಳಿಸಿದ್ದಾರೆ. ಆದರೆ ಅಂದು ಆರೋಗ್ಯ ಇಲಾಖೆ ಮಾಹಿತಿ ನೀಡಿರಲಿಲ್ಲ. ಇದೀಗ ಸೋಂಕಿತರ ಚಿಕಿತ್ಸೆಗೆ ದುಪ್ಪಟ್ಟು ಹಣ ವಸೂಲಿ ಮಾಡಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ.
ಇದನ್ನೂ ಓದಿ: Omicron: 7 ತಿಂಗಳ ನಂತರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲು; 3,000 ಗಡಿ ದಾಟಿದ ಒಮಿಕ್ರಾನ್