ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಬಿಬಿಎಂಪಿ ಅನುಮತಿ ನೀಡುವುದು ಅನುಮಾನ

ಚಾಮರಾಜಪೇಟೆ  ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಲು ಅನುಮತಿ ನೀಡುವಂತೆ ಬಿಬಿಎಂಪಿಗೆ ಹಿಂದೂಪರ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಆದರೆ ಮನವಿಗೆ ಬಿಬಿಎಂಪಿ ಅನುಮತಿ ನೀಡುವುದು ಅನುಮಾನ ಎನ್ನಲಾಗುತ್ತಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಬಿಬಿಎಂಪಿ ಅನುಮತಿ ನೀಡುವುದು ಅನುಮಾನ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 13, 2022 | 9:52 PM

ಬೆಂಗಳೂರು: ಚಾಮರಾಜಪೇಟೆ (Chamrajpete)  ಈದ್ಗಾ ಮೈದಾನದಲ್ಲಿ (Idga Ground) ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಲು ಅನುಮತಿ ನೀಡುವಂತೆ ಬಿಬಿಎಂಪಿಗೆ ಹಿಂದೂಪರ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಆದರೆ ಮನವಿಗೆ ಬಿಬಿಎಂಪಿ ಅನುಮತಿ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಹಿಂದೂಪರ ಸಂಘಟನೆಗಳು ಈಗಾಗಲೆ ಡೆಡ್ ಲೈನ್ ನೀಡಿವೆ ಆದರೂ ಕೂಡಾ ಅನುಮತಿ ಸಿಗೋದು ಕಷ್ಟ ಎನ್ನಲಾಗುತ್ತಿದೆ. ಈ ಸಂಬಂಧ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಮಾತನಾಡಿ ನಮ್ಮ ದಾಖಲೆಗಳಲ್ಲಿ ಬಿಬಿಎಂಪಿ ಆಟದ ಮೈದಾನ ಅಂತಿದೆ. ಆಟ ಆಡೋಕೆ ಯಾವುದೇ ಅಭ್ಯಂತರ ಇಲ್ಲ. ಆದರೆ ಸಂಘಟನೆಗಳು ಕೇಳಿರೋದು ಸ್ವಾತಂತ್ರ್ಯ, ಯೋಗಾ ದಿನಾಚರಣೆಗೆ ಮಾಡಲು ಅನುಮತಿ ಕೇಳಿವೆ. ಮತ್ತೊಂದು ಕಡೆ ವಕ್ಫ್ ಬೋರ್ಡ್ ನಿಂದ ನಮಗೆ ಪತ್ರ ಬಂದಿದೆ. ಚಾಮರಾಜಪೇಟೆ ಮೈದಾನ ನಮ್ಮ ವ್ಯಾಪ್ತಿಗೆ ಬರುತ್ತೆ ಅಂತಿದ್ದಾರೆ. ಇದನ್ನ ಪರಿಶೀಲನೆ ನಡೆಸಲು ಮುಖ್ಯ ಕಚೇರಿಗೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ.

ಬಿಬಿಎಂಪಿಗೆ ಹಿಂದುಪರ ಸಂಘಟನೆಗಳ ಮನವಿ 

ಚಾಮರಾಜಪೇಟೆಯ ಈದ್ಗಾ ಮೈದಾನಲ್ಲಿ ಯೋಗ ಆಚರಣೆ ಮಾಡಲು ಒಪ್ಪಿಗೆ ನೀಡುವಂತೆ ಹಿಂದುತ್ವ ಪರ ಸಂಘಟನೆಗಳು ಬಿಬಿಎಂಪಿಗೆ ಮನವಿ ಮಾಡಿವೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ, ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವು ಆಚರಣೆಗಳಿಗೆ ಅನುಮತಿ ಕೋರಿ ಮನವಿ ಪತ್ರ ಸಲ್ಲಿಸಿವೆ. ಸದ್ಯ ಮೈದಾನ ನೀಡುವ ವಿಚಾರದಲ್ಲಿ ಬಿಬಿಎಂಪಿ ತಟಸ್ಥವಾಗಿದೆ. ನಮಗೆ ಅವಕಾಶ ಕೊಡದಿದ್ದರೆ ಯಾರಿಗೂ ಕೊಡಬೇಡಿ. ನಮಾಜ್​ಗೆ ಅನುಮತಿ ಕೊಟ್ಟರೆ ನಮಗೂ ಕೊಡಿ. ಇಲ್ಲವಾದರೆ ಯಾವ ಧರ್ಮದವರಿಗೆ ಅನುಮತಿ ಕೊಡಬೇಡಿ ಎಂದು ಹಿಂದುತ್ವವಾದಿ ಸಂಘಟನೆಗಳು ಆಗ್ರಹಿಸಿವೆ.

ಇದನ್ನು ಓದಿ: ಚಾಮರಾಜಪೇಟೆ ಈದ್ಗಾ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ, ಸ್ವಾತಂತ್ರ್ಯ ದಿನಾಚರಣೆ ಅನುಮತಿಗಾಗಿ ಹಿಂದುತ್ವವಾದಿ ಸಂಘಟನೆಗಳಿಂದ ಬಿಬಿಎಂಪಿಗೆ ಡೆಡ್​ಲೈನ್

ಈ ನಡುವೆ ಮೈದಾನದಲ್ಲಿ ನೆಟ್ಟಿದ್ದ ಮೂರು ಕಂಬಗಳು ಏಕಾಏಕಿ ನೆಲಸಮವಾಗಿದೆ. ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದ ಸ್ಥಳೀಯರೇ ಈ ಕೃತ್ಯ ಎಸಗಿದ್ದರಾ? ಅಥವಾ ಬೇರೆಯವರು ಬಂದು ಕಂಬ ಕಿತ್ತಿದ್ದಾರಾ ಎಂದು ತಿಳಿಯಲು ಪೊಲೀಸರು ಸಿಸಿ ಟಿವಿ ಫೂಟೇಜ್ ಪರಿಶೀಲನೆಗೆ ಮುಂದಾಗಿದ್ದಾರೆ. ನಿನ್ನೆ ಸಿಸಿ ಕ್ಯಾಮೆರಾ ಅಳವಡಿಕೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮೈದಾನಕ್ಕೆ ಪೊಲೀಸ್ ಬಂದೋಬಸ್ತ್​ ಹೆಚ್ಚಿಸಲಾಗಿದೆ. ಮೈದಾನದ ಬಳಿ ಪ್ರತಿಭಟನೆ, ಘೋಷಣೆಗೆ ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿಗೆ ಡೆಡ್​ಲೈನ್

ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ನೀಡುವ ಬಗ್ಗೆ ನಾಳೆ (ಜೂನ್ 14) ಮಧ್ಯಾಹ್ನ 3 ಗಂಟೆಯ ಒಳಗೆ ನಿಲುವು ತಿಳಿಸಬೇಕೆಂದು ಕೋರಿ ಹಿಂದುತ್ವ ಪರ ಸಂಘಟನೆಗಳು ಬಿಬಿಎಂಪಿಗೆ ಡೆಡ್​ಲೈನ್​ ಕೊಟ್ಟಿವೆ. ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೊಡದಿದ್ದರೆ ನ್ಯಾಯಾಲಯದ​ ಮೊರೆ ಹೋಗುವುದಾಗಿ ವಿಶ್ವ ಸನಾತನ ಪರಿಷತ್​​ ಅಧ್ಯಕ್ಷ ಭಾಸ್ಕರ್ ಎಚ್ಚರಿಸಿದ್ದಾರೆ.

ಇದನ್ನು ಓದಿ: ಮೊದಲ ಬಾರಿಗೆ ಮಗುವಿನ ಮುಖ ತೋರಿಸಿದ ನಟಿ ಕಾಜಲ್ ಅಗರ್​​ವಾಲ್​

ಆಗಸ್ಟ್​ 14 ಮತ್ತು 15ರಂದು ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೋಡಬೇಕು ಎಂದು ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಮಾಡಲಾಗಿದೆ. ಈ ಸಂಬಂಧ ಜೂನ್ 7ರಂದು ಮನವಿ ಸಲ್ಲಿಸಿದ್ದರೂ ಪ್ರತಿಕ್ರಿಯೆ ನೀಡಿಲ್ಲ. ಅನುಮತಿ ಕೊಡುವುದು ಅಥವಾ ಇಲ್ಲ ಎನ್ನುವ ಬಗ್ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಬೇಕು ಎಂದು ಅವರು ಕೋರಿದರು.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Mon, 13 June 22

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ