ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆ ಆರೋಪ

ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ದಂಪತಿ ವಾಸವಾಗಿದ್ದು, ಮೂರು ವರ್ಷದ ಮುದ್ದಾದ ಹೆಣ್ಣು ಮಗು ಇದೆ. ನಿನ್ನೆ (ಜ.22) ಮಗುವಿನ ತಾಯಿ ರಂಜಿತಾ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಶವ ಪತ್ತೆಯಾಗಿದೆ. ನಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ರಂಜಿತಾ ಪೋಷಕರು ಆರೋಪ ಮಾಡಿದ್ದಾರೆ.

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆ ಆರೋಪ
ಮೃತ ರಂಜಿತಾ
Follow us
Jagadisha B
| Updated By: ವಿವೇಕ ಬಿರಾದಾರ

Updated on: Jan 23, 2024 | 7:30 AM

ಬೆಂಗಳೂರು, ಜನವರಿ 23: ಜ್ಞಾನಭಾರತಿ (Jnanabharathi) ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿನ ಮನೆಯೊಂದರಲ್ಲಿ ಓರ್ವ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಜಿತಾ (27) ಮೃತ ದುರ್ದೈವಿ. ಮಗಳನ್ನು ಕೊಲೆ ಮಾಡಲಾಗಿದೆ ಎಂದು ರಂಜಿತಾ ಪೋಷಕರ ಆರೋಪ ಮಾಡಿದ್ದಾರೆ. ಅಲ್ಲದೇ ಪತ್ನಿ ರಜಿತಾಗೆ ಪತಿ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ (Dowry) ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ರಂಜಿತಾ ಅವರು ತುಮಕೂರು ಜಿಲ್ಲೆ ತುರುವೇಕೆರೆ ಮೂಲದ ಮಧು ಅವರನ್ನು ಐದು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ರಂಜಿತಾ ವೃತ್ತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರು. ಇನ್ನು ಪತಿ ಮಧು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಮದುವೆಯಾದಗಿನಿಂದಲೂ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ನೀಡಿಲ್ಲವೆಂದು ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆಂದು ರಂಜಿತಾ ಪೋಷಕರು ಆರೋಪ ಮಾಡಿದ್ದಾರೆ. ವರದಕ್ಷಿಣೆ ಕಿರುಕುಳದ ಬಗ್ಗೆ ರಂಜಿತಾ ಆಗಾಗ ತಾಯಿ ಬಳಿ ಹೇಳಿದ್ದರು. ಅಲ್ಲದೆ ರಂಜಿತಾ ಸಾವಿಗೂ ಮುನ್ನ ತಾಯಿಗೆ ವಿಡಿಯೋ ಕಾಲ್ ಮಾಡಿದ್ದರು. ಬಳಿಕ ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 13 ವರ್ಷ ಪ್ರೀತಿಸಿ ಮದುವೆಯಾಗಿದ್ದರು: ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆ, ಕೊಲೆ ಎಂದು ಪತಿ ವಿರುದ್ದ ದೂರು

ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ಮಹಿಳೆ ಶವ ಪತ್ತೆ

ಮಂಡ್ಯ: ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ಮಹಿಳೆ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮೇಲುಕೋಟೆ‌ಯಲ್ಲಿ ಘಟನೆ ನಡೆದಿದೆ. ದೀಪಿಕಾ (28) ಕೊಲೆಯಾದ ಮಹಿಳೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾದ ದೀಪಿಕಾ ಮೇಲುಕೋಟೆಯ ಎಸ್​ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಜನವರಿ 20 ರಂದು ಶಾಲೆಗೆ ಹೋದವರು ಸಂಜೆ ಮನೆಗೆ ವಾಪಸ್​ ಆಗಿಲ್ಲ. ಇದರಿಂದ ಗಾಭರಿಗೊಂಡ ಕುಟುಂಬಸ್ಥರು ಅಂದು ಸಂಜೆ ಮೇಲುಕೋಟೆ ‌ಪೊಲೀಸ್ ಠಾಣೆಗೆ ‌ದೂರು ನೀಡಿದ್ದರು. ನಿನ್ನೆ (ಜ.22) ಸಂಜೆ ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಮಂಡ್ಯ ಎಸ್​ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್