ಬೆಂಗಳೂರು: ಡಾ.ಅಂಬೇಡ್ಕರ್ ಕಾಲೇಜು, ಆಸ್ಪತ್ರೆ ಸಿಬ್ಬಂದಿಗಳಿಂದ ಧರಣಿ; ಕೆಲಸ ಖಾಯಂ ಮಾಡಿಲ್ಲವೆಂದು ಆಕ್ರೋಶ
ಡಾ.ಅಂಬೇಡ್ಕರ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಬ್ಬಂದಿಗಳು, ಕೊರಾನಾ ವಾರಿಯರ್ಸ್ ಅನ್ನು ರಕ್ಷಿಸಿ ಎಂದು ಘೋಷಣೆ ಕೂಗಿ, ಧರ್ಮದರ್ಶಿಗಳನ್ನು ನೇಮಿಸುವಂತೆ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು: ಡಾ.ಅಂಬೇಡ್ಕರ್ ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಡಾ.ಅಂಬೇಡ್ಕರ್ ಮೆಡಿಕಲ್ ಕಾಲೇಜು ಬಳಿ ಪ್ರತಿಭಟನೆ (Protest) ನಡೆಸಿದ್ದಾರೆ. ಬೆಂಗಳೂರಿನ ಆರ್.ಟಿ ನಗರದಲ್ಲಿರುವ ಡಾ.ಅಂಬೇಡ್ಕರ್ ಕಾಲೇಜಿನಲ್ಲಿ ಸಿಬ್ಬಂದಿ ಮೇಲೆ ದಬ್ಬಾಳಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಕೂಡ ನಮಗೆ ಉಚಿತವಾಗಿ ಚಿಕಿತ್ಸೆ ಸಿಗುತ್ತಿಲ್ಲ. ನೌಕರರು ಹಣ ಕೊಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು. ಕಾಲ ಕಾಲಕ್ಕೆ ಸರಿಯಾದ ಸೌಲಭ್ಯಗಳು ನಮಗೆ ದೊರೆಯುತ್ತಿಲ್ಲ ಎಂದು ಸಿಬ್ಬಂದಿಗಳು ಆರೋಪಿಸಿದ್ದು, ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಡಾ.ಅಂಬೇಡ್ಕರ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಬ್ಬಂದಿಗಳು, ಕೊರಾನಾ ವಾರಿಯರ್ಸ್ ಅನ್ನು ರಕ್ಷಿಸಿ ಎಂದು ಘೋಷಣೆ ಕೂಗಿ, ಧರ್ಮದರ್ಶಿಗಳನ್ನು ನೇಮಿಸುವಂತೆ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ನಮ್ಮ ಕೆಲಸವನ್ನು ಖಾಯಂ ಮಾಡಿಲ್ಲ, ತುಟ್ಟಿ ಭತ್ಯೆಯೂ ನೀಡಿಲ್ಲ. ಕಳೆದ ವರ್ಷದ ಮತ್ತು ಈ ವರ್ಷದ ಕೊರೊನಾ ಪ್ರೋತ್ಸಾಹ ಧನವನ್ನು ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲ. ಇದನ್ನು ಪ್ರಶ್ನೆ ಮಾಡಿದರೆ, ನೌಕರರನ್ನು ಅಮಾನತ್ತು ಮತ್ತು ವರ್ಗಾವಣೆ ಮಾಡಿ, ಆಡಳಿತ ಮಂಡಳಿ ದ್ವೇಷದ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಹತ್ತು ಹಲವಾರು ಆರೋಪ ಮಾಡಿದ ನೂರಕ್ಕೂ ಹೆಚ್ಚು ನೌಕರರು ಡ್ಯೂಟಿಗೆ ಹಾಜರಾಗದೆ ಕಪ್ಪು ಪಟ್ಟಿಧರಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೊಮ್ಮೆ ಪರೀಕ್ಷೆ ಬೇಡ, ಮರು ಮೌಲ್ಯಮಾಪನ ಮಾಡುವಂತೆ ಆಗ್ರಹ