Dr CN Manjunath: ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ ಸಿಎನ್​​ ಮಂಜುನಾಥ್​ ಮುಂದುವರಿಕೆ: ರಾಜ್ಯ ಸರ್ಕಾರ ಆದೇಶ

ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್​ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರಿಸಲು ನಿರ್ಧರಿಸಲಾಗಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Dr CN Manjunath: ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ ಸಿಎನ್​​ ಮಂಜುನಾಥ್​ ಮುಂದುವರಿಕೆ: ರಾಜ್ಯ ಸರ್ಕಾರ ಆದೇಶ
ಡಾ.ಸಿ.ಎನ್.ಮಂಜುನಾಥ್​
Follow us
Poornima Agali Nagaraj
| Updated By: ಗಂಗಾಧರ​ ಬ. ಸಾಬೋಜಿ

Updated on:Jul 17, 2023 | 6:48 PM

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ (Dr CN Manjunath)​ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ ಮುಂದುವರಿಯುವಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 2007ರಿಂದ ಡಾ.ಮಂಜುನಾಥ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷವೇ ಡಾ.ಮಂಜುನಾಥ್ ಅಧಿಕಾರ ಅವಧಿ ಮುಕ್ತಾಯವಾಗಿತ್ತು. ಆದರೆ ರೋಗಿಗಳು ಮತ್ತು ಸಿಬ್ಬಂದಿ ಒತ್ತಾಯದ ಮೇರೆಗೆ 1 ವರ್ಷ ಮುಂದುವರಿಸಲಾಗಿತ್ತು. ಸದ್ಯ ಅದರಂತೆಯೇ ಇನ್ನೂ 6 ತಿಂಗಳು ನಿರ್ದೇಶಕರಾಗಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ಹಣಕ್ಕಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ಡೀಲ್: ಹೆಚ್​ಡಿ ಕುಮಾರಸ್ವಾಮಿ ಆರೋಪ

ಜಯದೇವ ಸಂಸ್ಥೆಯ ಆಡಳಿತ ಮಂಡಳಿ ಜತೆ ಸಿಎಂ ಸಿದ್ಧರಾಮಯ್ಯ ಇಂದು ಮಹತ್ವದ ಸಭೆ ನಡೆಸಿದ್ದರು. ಜಯದೇವ ಆಸ್ಪತ್ರೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಬಗ್ಗೆ ಮತ್ತು ಜಯದೇವ ಆಸ್ಪತ್ರೆ ನಿರ್ದೇಶಕರ ಆಯ್ಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​ ಸೇರುವಂತೆ ಮಾಜಿ ಸಿಎಂ ಬೊಮ್ಮಾಯಿಗೆ ಆಹ್ವಾನ ನೀಡಿದ ಸಚಿವ ಎಂಬಿ ಪಾಟೀಲ್

ಜುಲೈ 19ರಂದು ನಿರ್ದೇಶಕ ಡಾ.C.N.ಮಂಜುನಾಥ್ ಅವಧಿ ಪೂರ್ಣಗೊಳ್ಳುವ ಹಿನ್ನೆಲೆ ಅವರ ಸೇವಾವಧಿ ಮುಂದುವರಿಸಬೇಕಾ? ಅಥವಾ ಹೊಸ ನಿರ್ದೇಶಕರ ಆಯ್ಕೆ ಮಾಡಬೇಕಾ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:29 pm, Mon, 17 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ