Dr K Sudhakar: ಸಿಎಂ ಬೊಮ್ಮಾಯಿಗೆ ಕೊರೊನಾ ಬೆನ್ನಲ್ಲೇ ಸ್ವಯಂಪ್ರೇರಿತ ಐಸೋಲೇಷನ್​ಗೆ ಒಳಗಾದ ಆರೋಗ್ಯ ಸಚಿವ ಡಾ. ಸುಧಾಕರ್

ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಪ್ರಾಥಮಿಕ ಸಂಪರ್ಕಿತನಾಗಿದ್ದೆ. ಹೀಗಾಗಿ ಸ್ವಯಂಪ್ರೇರಿತನಾಗಿ ಐಸೋಲೇಷನ್ ಆಗಿದ್ದೇನೆ. 2 ದಿನ ನನ್ನನ್ನು ಭೇಟಿಯಾಗಲು ಯಾರೂ ಬರಬೇಡಿ ಎಂದು ಟ್ವೀಟ್ ಮಾಡಿ ಆರೋಗ್ಯ ಸಚಿವ ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

Dr K Sudhakar: ಸಿಎಂ ಬೊಮ್ಮಾಯಿಗೆ ಕೊರೊನಾ ಬೆನ್ನಲ್ಲೇ ಸ್ವಯಂಪ್ರೇರಿತ ಐಸೋಲೇಷನ್​ಗೆ ಒಳಗಾದ ಆರೋಗ್ಯ ಸಚಿವ ಡಾ. ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೆ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಯಂಪ್ರೇರಿತನಾಗಿ ಐಸೋಲೇಷನ್ ಆಗುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಪ್ರಾಥಮಿಕ ಸಂಪರ್ಕಿತನಾಗಿದ್ದೆ. ಹೀಗಾಗಿ ಸ್ವಯಂಪ್ರೇರಿತನಾಗಿ ಐಸೋಲೇಷನ್ ಆಗಿದ್ದೇನೆ. 2 ದಿನ ನನ್ನನ್ನು ಭೇಟಿಯಾಗಲು ಯಾರೂ ಬರಬೇಡಿ ಎಂದು ಟ್ವೀಟ್ ಮಾಡಿ ಆರೋಗ್ಯ ಸಚಿವ ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಸದ್ಯ ನನ್ನ ಎಲ್ಲ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು. 2 ದಿನದ ಬಳಿಕ RT-PCR ಪರೀಕ್ಷೆ ವರದಿ ಬರಲಿದೆ. ಅಲ್ಲಿಯವರೆಗೂ ವರ್ಚುವಲ್ ಮೂಲಕ ಸಭೆ ನಡೆಸುತ್ತೇನೆ. ವರದಿಯಲ್ಲಿ ನೆಗೆಟಿವ್ ಬಂದರೆ ಕೆಲಸ ಕಾರ್ಯದಲ್ಲಿ ಭಾಗಿಯಾಗುತ್ತೇನೆ. ಬುಧವಾರದಿಂದ ಎಂದಿನಂತೆ ಕೆಲಸದಲ್ಲಿ ಭಾಗಿಯಾಗುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಕೊರೊನಾ ಸೋಂಕು ದೃಢವಾಗಿದೆ (Covid19 Positive). ಹೋಮ್ ಕ್ವಾರಂಟೈನ್ನಲ್ಲಿರುವ ಬಸವರಾಜ ಬೊಮ್ಮಾಯಿ, ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ (Coronavirus) ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ‌ ಕೊವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆ ಸಿಎಂ ಅಧಿಕೃತ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ ಕಾವೇರಿ ಕಾಮಗಾರಿ ಪರಿಶೀಲನಾ ಸಭೆಗಳು ಕೂಡಾ ರದ್ದುಗೊಂಡಿವೆ.

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಜನವರಿ 10ರಂದು ಸಿಎಂ ಬೊಮ್ಮಾಯಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಸಾಹಿತಿ ಡಾ. ಚಂದ್ರಶೇಖರ ಪಾಟೀಲ ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದರು. ಬೂಸ್ಟರ್ ಡೋಸ್ ಕೊರೊನಾ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿದ್ದರು. ಆಡಳಿತ ಸುಧಾರಣೆ ಕುರಿತು ಸಭೆ ನಡೆಸಿದ್ದರು. ವಿಶ್ರಾಂತ ಕುಲಪತಿಗಳ ನಿಯೋಗದ ಜತೆ ಸಭೆಯಲ್ಲಿ ಭಾಗಿಯಾಗಿದ್ದರು. ಈ ಮಧ್ಯೆ, ಬಸವರಾಜ ಬೊಮ್ಮಾಯಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಈಗಾಗಲೇ ಕರ್ನಾಟಕ ಬಿಜೆಪಿಯ ಆರ್. ಅಶೋಕ್, ಬಿ.ಸಿ. ನಾಗೇಶ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೊವಿಡ್19 ಸೋಂಕಿತರಾಗಿದ್ದಾರೆ.

ಇದನ್ನೂ ಓದಿ: JP Nadda: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೊನಾ ಪಾಸಿಟಿವ್

Published On - 7:49 am, Tue, 11 January 22

Click on your DTH Provider to Add TV9 Kannada