ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆ ಜನರಿಂದ ಹೋರಾಟ; ಆರೋಗ್ಯ ಸಚಿವ ಡಾ ಕೆ ಸುಧಾಕರ್ ನೀಡಿದ ಭರವಸೆ ಏನು?
ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ, ಆದಷ್ಟು ಬೇಗ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗಾಗಿ (Multispeciality Hospital) ಉತ್ತರ ಕನ್ನಡ ಜಿಲ್ಲೆಯ ಜನರು ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (Dr K Sudhakar), ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ, ಆದಷ್ಟು ಬೇಗ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುತ್ತೇನೆ. ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ.
1/3
— Dr Sudhakar K (@mla_sudhakar) July 25, 2022
ಇದನ್ನೂ ಓದಿ: Lady Finger Benefits: ಬೆಂಡೆಕಾಯಿಯಿಂದ ಮಧುಮೇಹ ನಿಯಂತ್ರಣ ಸಾಧ್ಯ, ಇತರೆ ಪ್ರಯೋಜನಗಳನ್ನು ತಿಳಿಯಿರಿ
ಉತ್ತರ ಕನ್ನಡ ಜಿಲ್ಲೆಗೆ ಕನಿಷ್ಠ ಎರಡು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಸಾರ್ವಜನಿಕರು ನಡೆಸುತ್ತಿರುವ ಆಂದೋಲನವನ್ನು ಸರ್ಕಾರ ಪರಿಗಣಿಸಿದೆ. ಆಸ್ಪತ್ರೆ ನಿರ್ಮಾಣದ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಜೊತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿನ್ನೆ ಮಾತುಕತೆ ನಡೆಸಿದ್ದರು.
ರಕ್ತದಲ್ಲಿ ಪತ್ರ ಬರೆದು ಅಭಿಯಾನ: ಸುಸಜ್ಜಿತ ಆಸ್ಪತ್ರೆಗಾಗಿ ಜನರು ನಡೆಸುತ್ತಿರುವ ಹಕ್ಕೊತ್ತಾಯದ ಭಾಗವಾಗಿ ಅಗಸ್ಟ್ 1ರಿಂದ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನವನ್ನು ಉತ್ತರ ಕನ್ನಡ ಜಿಲ್ಲೆಯ ಜನರು ಆರಂಭಿಸಲಿದ್ದಾರೆ. ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಅಭಿಯಾನ ಶುರುಮಾಡಲು ಕಾರವಾರ ನಿವಾಸಿಗಳೂ ಸೇರಿದಂತೆ ಜಿಲ್ಲೆಯ ಜನರು ಮುಂದಾಗಿದ್ದಾರೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದ ಗಡಿಯಲ್ಲಿ ಶೂಟ್ ಮಾಡಿಕೊಂಡು ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆ
Published On - 11:21 am, Mon, 25 July 22