AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರಿಂದಲೇ ಕಿರುಕುಳ ಆರೋಪ: ವಿಧಾನಸೌಧ ಎದುರೇ ವ್ಯಕ್ತಿ ಆತ್ಮಹತ್ಯೆ ಯತ್ನ

ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಪೊಲೀಸರೇ ಕಿರುಕುಳ ನೀಡಿದ್ದು, ಇಂದು (ಜನವರಿ 24) ಬೆಳಗ್ಗೆ ಬೆಂಗಳೂರಿನ ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಪಂದಿಸಿದ ಪೊಲೀಸರು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರಿಂದಲೇ ಕಿರುಕುಳ ಆರೋಪ: ವಿಧಾನಸೌಧ ಎದುರೇ ವ್ಯಕ್ತಿ ಆತ್ಮಹತ್ಯೆ ಯತ್ನ
ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ!
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jan 24, 2026 | 1:10 PM

Share

ಬೆಂಗಳೂರು, ಜನವರಿ 24:  ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರೇ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡಾ. ನಾಗೇಂದ್ರ ಎಂಬವರು ವಿಧಾನಸೌಧದ   (Vidhana Soudha) ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಅಕ್ರಮ ವಲಸಿಗರನ್ನು ಪತ್ತೆ ಮಾಡಿದ್ದಕ್ಕೆ ನಾಗೇಂದ್ರ ಮತ್ತು ಪುನೀತ್

ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ. ಡಾ. ನಾಗೇಂದ್ರಪ್ಪ ಮತ್ತು ಪುನೀತ್ ಕೆರೆಹಳ್ಳಿ ಇಬ್ಬರೂ ನಗರದಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ತೋರಿಸಿದ್ದರು.

ವಿಷ ಸೇವಿಸುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು

ಈ ಹಿನ್ನಲೆಯಲ್ಲಿ ದೂರು ನೀಡಿದವರ ವಿರುದ್ಧವೇ ಪ್ರಕರಣ ದಾಖಲಾಗಿತ್ತು ಎಂದು ಹೇಳಲಾಗಿದೆ. ಅದಾದ ನಂತರ ಸೂಲದೇವನಹಳ್ಳಿ ಪೊಲೀಸರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಅವರು ಮನನೊಂದು ಈ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ. ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ವಿಷದ ಬಾಟಲಿಯನ್ನು ಕಿತ್ತುಕೊಂಡು, ಡಾ. ನಾಗೇಂದ್ರಪ್ಪ ಅವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಮಾಹಿತಿ ಸಿಕ್ಕ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು  ಆರೋಪಿಸಿ ಪುನೀತ್ ಕೆರೆಹಳ್ಳಿ  ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆ, ಬಾಗಲಗುಂಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:31 pm, Sat, 24 January 26