AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ದಿವಂಗತ ನಟ ಡಾ.ಪುನೀತ್ ರಾಜ್​ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
Rakesh Nayak Manchi
|

Updated on:Mar 23, 2023 | 9:39 PM

Share

ಬೆಂಗಳೂರು: ದಿವಂಗತ ನಟ ಡಾ.ಪುನೀತ್ ರಾಜ್​ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು (Dr Puneeth Rajkumar Multispeciality Hospital) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯೊಳಗೆ ಸ್ಥಾಪಿಸಲಾಗಿರುವ ಪುನೀತ್ ಪುತ್ಥಳಿಯನ್ನು ಕೂಡ ಮುಖ್ಯಮಂತ್ರಿಯವರು ಅನಾವರಣಗೊಳಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಉದ್ಘಾಟನೆ ವೇಳೆ ನಟ, ಪುನೀತ್ ಸಹೋದರ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar), ವಸತಿ ಸಚಿವ ವಿ. ಸೋಮಣ್ಣ (V. Somanna), ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಂ‌ಎಲ್‌ಸಿ ಅ ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲರ ಸಹಕಾರದಿಂದ ಬೆಂಗಳೂರಿಗೆ ಉತ್ತಮ ಹೆಸರು ಬರಲಿದೆ. ಈಗಾಗಲೇ ಬೆಂಗಳೂರಿಗೆ ಬ್ರಾಂಡ್ ಹೆಸರಿದ್ದು, ಬ್ರ್ಯಾಂಡ್ ಬೆಂಗಳೂರು ಹೆಸರನ್ನು ಯಾರೂ ಕೆಡಿಸಲು ಆಗುವುದಿಲ್ಲ. ಬೇರೆ ನಗರಗಳಿಗೆ ಹೋಲಿಸಿಕೊಂಡರೆ ಬೆಂಗಳೂರು ಹತ್ತು ಪಟ್ಟು ಹೆಚ್ಚು ಅಭಿವೃದ್ಧಿ ಆಗಿದೆ ಎಂದರು. ಇದೇ ವೇಳೆ ಸೋಮಣ್ಣ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ ಅವರು, ಸೋಮಣ್ಣ ಅವರು ಅಧಿಕಾರದ ಕೆಲಸ ಮಾಡಿಲ್ಲ, ಅವರು ಸದಾ ಜನರ ಕೆಲಸ ಮಾಡಿದವರು. ಅದು ಇದು ಅಭಿವೃದ್ಧಿ ಅಂತ ಬಂದು ಹೋಗುತ್ತಿರುತ್ತಾರೆ. ಸ್ಲಂ ಜನಕ್ಕೆ ಮನೆ ಕೊಡಬೇಕು ಅಂತ ಬರುತ್ತಾರೆ. ಗೋವಿಂದರಾಜನಗರಕ್ಕೆ ಸೋಮಣ್ಣ ಬರುವ ಮುನ್ನ ಹೇಗಿತ್ತು? ಈಗ ಹೇಗಿದೆ ಅಂತ ನೋಡಬೇಕು ಎಂದರು.

ಇದನ್ನೂ ಓದಿ: Yadgir: ಬೊಮ್ಮಾಯಿ ತಾವೇ ಸಿಎಂ ಆಗುತ್ತೇನೆಂದು ಹೇಳಿದ್ದನ್ನು ಮಾಧ್ಯಮದವರು ಗಮನಕ್ಕೆ ತಂದಾಗ ತೇಜಸ್ವೀ ಸೂರ್ಯ ಪ್ರತಿಕ್ರಿಯಿಸಲು ತಡವರಿಸಿದರು!

ಬಳಿಕ ಮಾತನಾಡಿದ ಸೋಮಣ್ಣ, ಪಂತರಪಾಳ್ಯ ವ್ಯಾಪ್ತಿಯ ಸುತ್ತಮುತ್ತಲಿನ ನಿವಾಸಿಗಳಿಗೆ ಪುನೀತ್ ಅವರ ಸ್ಮರಣೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಸ್ಥಳೀಯರ ಆಶೀರ್ವಾದವೂ ಇದೆ. ಸಾಮಾನ್ಯ ಜನರ ಒಡನಾಡಿಯಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ನಾಯಂಡಹಳ್ಳಿ ಕೆರೆಯನ್ನು ಅಭಿವೃದ್ದಿಗೊಳಿಸಿದ್ದೇವೆ ಎಂದು ತಿಳಿಸಿದರು. ನಾನು ಏಳೆಂಟು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ ಅನುಭವ ಇದೆ. ಬಸವರಾಜ ಬೊಮ್ಮಾಯಿ ಅವರ ತಂದೆ ಜೊತೆಗೂ ಕೆಲಸ ಮಾಡಿದ್ದೇನೆ. ಆದರೆ ಬೊಮ್ಮಾಯಿಯಷ್ಟು ಜನಪರ ಸಿಎಂ ನಾನು ನೋಡಿಯೇ ಇಲ್ಲ ಎಂದು ಹೇಳುವ ಮೂಲಕ ಸೋಮಣ್ಣ ಅವರು ಬೊಮ್ಮಾಯಿಯನ್ನು ಹಾಡಿ ಹೊಗಳಿದರು.

ಇದೇ ವೇಳೆ ಮಾತನಾಡಿದ ನಟ ರಾಘವೇಂದ್ರ ರಾಜ್​ಕುಮಾರ್ ಅವರು ಪುನೀತ್ ರಾಜ್​ಕುಮಾರ್ ಸವಿನೆನಪಿನಲ್ಲಿ ಇಂತಹ ಆಸ್ಪತ್ರೆಯನ್ನು ಕಟ್ಟಿಸಿದ ಸಚಿವ ಸೋಮಣ್ಣ ಅವರಿಗೆ ಧನ್ಯವಾಗಳನ್ನು ಅರ್ಪಿಸಿದರು. ಈ ಆಸ್ಪತ್ರೆಯನ್ನು ದೇವಸ್ಥಾನ ಎಂದು ಭಾವಿಸಿ ಶುಚಿಯಾಗಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Thu, 23 March 23

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!