ಕರ್ನಾಟಕ ಲೇಖಕಿಯರ ಸಂಘದ ನಾಗಮಣಿ ಎಸ್.ರಾವ್ ದತ್ತಿನಿಧಿ ಪ್ರಶಸ್ತಿಗೆ ಡಾ.ಆರ್.ಪೂರ್ಣಿಮಾ ಆಯ್ಕೆ
ಆಕಾಶವಾಣಿಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ನಾಗಮಣಿ ಎಸ್.ರಾವ್.ಅವರು ತಮ್ಮ ಹೆಸರಿನ ದತ್ತಿನಿಧಿಯನ್ನು ಕರ್ನಾಟಕ ಲೇಖಕಿಯರ ಸಂಘದಲ್ಲಿ ಸ್ಥಾಪಿಸಿದ್ದು, ಮೊದಲನೇ ಪ್ರಶಸ್ತಿಗೆ ಪತ್ರಕರ್ತೆ ಆರ್.ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ಟಿಎಸ್ಆರ್ ಪ್ರಶಸ್ತಿ ಪುರಸ್ಕೃತೆ ನಾಗಮಣಿ ಎಸ್.ರಾವ್ ದತ್ತಿನಿಧಿ ಪ್ರಶಸ್ತಿಗೆ (Nagamani S. Rao Endowment Award) ಹಿರಿಯ ಪತ್ರಕರ್ತೆ ಡಾ. ಆರ್.ಪೂರ್ಣಿಮಾ (Dr. R. Poornima) ಅವರನ್ನು ಆಯ್ಕೆಮಾಡಲಾಗಿದೆ ಎಂದು ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ ಅವರು ತಿಳಿಸಿದ್ದಾರೆ.
ಆಕಾಶವಾಣಿಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ನಾಗಮಣಿ ಎಸ್.ರಾವ್.ಅವರು ತಮ್ಮ ಹೆಸರಿನ ದತ್ತಿನಿಧಿಯನ್ನು ಕರ್ನಾಟಕ ಲೇಖಕಿಯರ ಸಂಘದಲ್ಲಿ ಈ ವರ್ಷದಿಂ ಆರಂಭಿಸಲಾಗಿದೆ. ಅದರಂತೆ ಮೊದಲನೇ ಪ್ರಶಸ್ತಿಗೆ ಆರ್.ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಸಮಾರಂಭವು ಜುಲೈ 8 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಜರುಗಲಿದ್ದು, ಹಿರಿಯ ಸಾಹಿತಿ ನಾಡೋಜ ಪ್ರೊ.ಕಮಲಾ ಹಂಪನಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಇದನ್ನೂ ಓದಿ: Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ
ಕನ್ನಡ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯವಾಗಿ ಕೆಲಸ ಮಾಡಿರುವ ಪತ್ರಕರ್ತೆಯೊಬ್ಬರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಬೇಕು ಮತ್ತು ಅವರು ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರಬೇಕು ಎಂಬುದು ನಾಗಮಣಿ ಎಸ್.ರಾವ್ ಅವರ ಆಶಯವಾಗಿತ್ತು. ಈ ಆಶಯದಂತೆ ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 40 ವರ್ಷಗಳಿಗೂ ಅಧಿಕ ಕಾಲ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತೆ ಡಾ. ಆರ್.ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪಾ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ನಾಗಮಣಿ ಎಸ್.ರಾವ್, ಸಂಘದ ಕಾರ್ಯದರ್ಶಿಗಳಾದ ಭಾರತಿ ಹೆಗಡೆ, ಖಜಾಂಚಿ ಮಂಜುಳಾ ಶಿವಾನಂದ ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ