AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ: ಮತದಾರರ ಕರಡು ಪಟ್ಟಿ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದ ಬಿಬಿಎಂಪಿ, ಇಲ್ಲಿದೆ ವಿವರ

ಕರ್ನಾಟಕ ಹೈಕೋರ್ಟ್‌ನ ಆದೇಶದ ಮೇರೆಗೆ ನಗರಾಭಿವೃದ್ಧಿ ಇಲಾಖೆ (ಯುಡಿಡಿ) ಸೆಪ್ಟೆಂಬರ್ 25 ರಂದು 225 ವಾರ್ಡ್‌ಗಳ ಅಂತಿಮ ವಿಂಗಡಣೆಯನ್ನು ಹೊರಡಿಸಿದೆ. ಸರಕಾರ ಸದ್ಯ ವಾರ್ಡ್ ಮೀಸಲು ನಿಗದಿಗೆ ಮುಂದಾಗಿದ್ದು, ಈ ವರ್ಷ ನವೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಬಿಬಿಎಂಪಿ ಚುನಾವಣೆ: ಮತದಾರರ ಕರಡು ಪಟ್ಟಿ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದ ಬಿಬಿಎಂಪಿ, ಇಲ್ಲಿದೆ ವಿವರ
ಬಿಬಿಎಂಪಿ
TV9 Web
| Updated By: Ganapathi Sharma|

Updated on: Sep 28, 2023 | 2:56 PM

Share

ಬೆಂಗಳೂರು, ಸೆಪ್ಟೆಂಬರ್ 28: ಕೇಂದ್ರ ಚುನಾವಣಾ ಆಯೋಗದ (ECI) ನಿರ್ದೇಶನದ ಆಧಾರದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಕ್ಟೋಬರ್ 27 ರಂದು ಮತದಾರರ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಬಿಬಿಎಂಪಿಯ ಬಹು ನಿರೀಕ್ಷಿತ ಚುನಾವಣೆಯ ತಯಾರಿಯಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು 2024 ರ ಜನವರಿ 5 ರಂದು ಪ್ರಕಟಿಸಲು ನಿರ್ಧರಿಸಲಾಗಿದೆ.

ಬಿಬಿಎಂಪಿ ಪ್ರಕಾರ, ಕೇಂದ್ರ ಚುನಾವಣಾ ಆಯೋಗದ ಸೆಪ್ಟೆಂಬರ್ 25 ರ ನಿರ್ದೇಶನಗಳ ಆಧಾರದ ಮೇಲೆ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ,

  • ಮತದಾರರ ಕರಡು ಪಟ್ಟಿಯ ಪ್ರಕಟಣೆ ದಿನಾಂಕ: ಅಕ್ಟೋಬರ್ 27
  • ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯ: ಅಕ್ಟೋಬರ್ 27 ರಿಂದ ಡಿಸೆಂಬರ್ 9
  • ಆಕ್ಷೇಪಣೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ದಿನಾಂಕ: ಡಿಸೆಂಬರ್ 26
  • ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ: 2024 ರ ಜನವರಿ 5
  • ಈ ಪ್ರಕ್ರಿಯೆಯ ನಂತರ ಚುನಾವಣಾ ಆಯೋಗವು ಮತದಾನಕ್ಕೆ ಮುಂದಾಗಲಿದೆ.

ಬಿಬಿಎಂಪಿ ವಾರ್ಡ್ ಮೀಸಲಾತಿ

ಕರ್ನಾಟಕ ಹೈಕೋರ್ಟ್‌ನ ಆದೇಶದ ಮೇರೆಗೆ ನಗರಾಭಿವೃದ್ಧಿ ಇಲಾಖೆ (ಯುಡಿಡಿ) ಸೆಪ್ಟೆಂಬರ್ 25 ರಂದು 225 ವಾರ್ಡ್‌ಗಳ ಅಂತಿಮ ವಿಂಗಡಣೆಯನ್ನು ಹೊರಡಿಸಿದೆ. ಸರಕಾರ ಸದ್ಯ ವಾರ್ಡ್ ಮೀಸಲು ನಿಗದಿಗೆ ಮುಂದಾಗಿದ್ದು, ಈ ವರ್ಷ ನವೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಬಿಜೆಪಿ ಸರ್ಕಾರವು ಈ ಹಿಂದೆ ವಿಂಗಡಣೆ ಮಾಡಿದ 243 ವಾರ್ಡ್‌ಗಳಲ್ಲಿ ಲೋಪದೋಷಗಳಿವೆ ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ ನಂತರ ಕರ್ನಾಟಕ ಹೈಕೋರ್ಟ್ ಜೂನ್‌ನಲ್ಲಿ ಸರ್ಕಾರಕ್ಕೆ ವಿಂಗಡಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 12 ವಾರಗಳ ಕಾಲಾವಕಾಶವನ್ನು ನೀಡಿತ್ತು.

ಈ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈಗಾಗಲೇ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ನಾಳಿನ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರ: ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಮಾಜಿ ಕಾರ್ಪೊರೇಟರ್‌ಗಳನ್ನು ಸೆಳೆಯುವ ಮೂಲಕ ಕಾಂಗ್ರೆಸ್‌ ಪಕ್ಷವು ಚುನಾವಣೆಗೆ ಸಿದ್ಧತೆ ಆರಂಭಿಸಿದೆ.

ಸೆಪ್ಟೆಂಬರ್ 2020 ರಿಂದ ಬಿಬಿಎಂಪಿಯು ಚುನಾಯಿತ ಕೌನ್ಸಿಲ್ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ. ಬಿಬಿಎಂಪಿಯನ್ನು ಪ್ರಸ್ತುತ ಸರ್ಕಾರ ನೇಮಿಸಿದ ಆಡಳಿತಾಧಿಕಾರಿ ಮತ್ತು ಅಧಿಕಾರಿಗಳು ಮುನ್ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ