ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ: ತುಂಡು ಬಟ್ಟೆ ಧರಿಸಿಕೊಂಡು ಬಂದ್ರೆ ದೇವಾಲಯದೊಳಗೆ ನೋ ಎಂಟ್ರಿ

ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ  ಇಂದಿನಿಂದ ಅಭಿಯಾನ ನಡೆಸಲಿದೆ.

ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ: ತುಂಡು ಬಟ್ಟೆ ಧರಿಸಿಕೊಂಡು ಬಂದ್ರೆ ದೇವಾಲಯದೊಳಗೆ ನೋ ಎಂಟ್ರಿ
ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 10, 2024 | 9:43 AM

ಬೆಂಗಳೂರು, ಜನವರಿ 10: ಇಂದಿನಿಂದ ರಾಜಧಾನಿಯ (Bengaluru) ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ (Dress Code) ಜಾರಿಯಾಗುತ್ತಿದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ  ಇಂದಿನಿಂದ ಅಭಿಯಾನ ನಡೆಸಲಿದೆ. ಇಂದು (ಜ.10) ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ.

ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಿದೆ.

ದೇವಾಲಯದ ಒಳಗೆ ವಸ್ತ್ರಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈ ಹಿಂದೆ ಒತ್ತಾಯಿಸಿತ್ತು. ಇದಕ್ಕೆ ಹಿಂದೂ ಸಂಘಟನೆಗು ಬೆಂಬಲ ವ್ಯಕ್ತಪಡಿಸಿದ್ದವು. ದೇವಾಲಯಗಳ ಒಳಗೆ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದೇವರ ದರ್ಶನಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದವು.

ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಈ ಸಂಬಂಧ ಕಳೆದ ತಿಂಗಳು ರಾಜ್ಯದ ಎಲ್ಲ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ನಡೆಸಿದ್ದರು. ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು. ಹೀಗಾಗಿ ಇಂದಿನಿಂದ ಬೆಂಗಳೂರಿನ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.

ಈ ವಸ್ತ್ರಸಂಹಿತೆ ಪ್ರಕಾರ ಪುರುಷರು ದೇವಲಾಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್​, ಎದೆ ಕಾಣುವ ಟಿಶರ್ಟ್​ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಬಂದರೇ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗ ಹೋಗುವಂತಿಲ್ಲ. ಈ ಬಗ್ಗೆ ಬಿಗಿಯಾದ ವಸ್ತ್ರ ಸಂಹಿತೆ ಜಾರಿಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:38 am, Wed, 10 January 24

ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಮಂಜಣ್ಣನ ಮಟನ್ ಪ್ರೀತಿಗೆ ಮನೆಯವರಿಂದ ವಿರೋಧ
ಮಂಜಣ್ಣನ ಮಟನ್ ಪ್ರೀತಿಗೆ ಮನೆಯವರಿಂದ ವಿರೋಧ
ಒಬ್ಬ ಭಯೋತ್ಪಾದಕನ ಹಾಗೆ ರವಿಯವರನ್ನು ನಡೆಸಿಕೊಂಡಿದ್ದಾರೆ: ವಿಜಯೇಂದ್ರ
ಒಬ್ಬ ಭಯೋತ್ಪಾದಕನ ಹಾಗೆ ರವಿಯವರನ್ನು ನಡೆಸಿಕೊಂಡಿದ್ದಾರೆ: ವಿಜಯೇಂದ್ರ
ಬಿಡುಗಡೆ ಬಳಿಕ ಸಿಟಿ ರವಿ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಡುಗಡೆ ಬಳಿಕ ಸಿಟಿ ರವಿ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
ಮೀರತ್‌ನಲ್ಲಿ ಪ್ರದೀಪ್ ಮಿಶ್ರಾ ಕಥಾ ಕಾರ್ಯಕ್ರಮದಲ್ಲಿ ಕಾಲ್ತುಳಿತ
ಮೀರತ್‌ನಲ್ಲಿ ಪ್ರದೀಪ್ ಮಿಶ್ರಾ ಕಥಾ ಕಾರ್ಯಕ್ರಮದಲ್ಲಿ ಕಾಲ್ತುಳಿತ
ರವಿಯವರ ಚಿಕ್ಕಮಗಳೂರು ಮನೆಬಳಿ ಕಾರ್ಯಕರ್ತರ ಸಂಭ್ರಮಾಚರಣೆ 
ರವಿಯವರ ಚಿಕ್ಕಮಗಳೂರು ಮನೆಬಳಿ ಕಾರ್ಯಕರ್ತರ ಸಂಭ್ರಮಾಚರಣೆ 
ಪಾಯಿಂಟ್ ಬ್ಲ್ಯಾಂಕ್ ರೇಂಜಲ್ಲಿ ಶೂಟ್ ಮಾಡುವಂತೆ ಹೇಳಿದ್ದು ನಿಜ: ಪ್ರಸಾದ್
ಪಾಯಿಂಟ್ ಬ್ಲ್ಯಾಂಕ್ ರೇಂಜಲ್ಲಿ ಶೂಟ್ ಮಾಡುವಂತೆ ಹೇಳಿದ್ದು ನಿಜ: ಪ್ರಸಾದ್
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ರವಿ ಮನೆಯಲ್ಲಿ ಪ್ರಾಣೇಶ್ ಜೊತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು
ರವಿ ಮನೆಯಲ್ಲಿ ಪ್ರಾಣೇಶ್ ಜೊತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು