ಚಿನ್ನ ಬೆನ್ನಲ್ಲೇ ಡಿಆರ್​ಐ ಅಧಿಕಾರಿಗಳ ಮತ್ತೊಂದು ಕಾರ್ಯಾಚರಣೆ: 38.4 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು 3.2 ಕೆಜಿ ಕೊಕೇನ್ ಅನ್ನು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ 38.4 ಕೋಟಿ ರೂಪಾಯಿಗಳು. ಘಾನಾ ಮೂಲದ ಜೆನ್ನಿಫರ್ ಅಬ್ಬೇ ಎಂಬ ಮಹಿಳೆಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಕತಾರ್‌ನಿಂದ ಬೆಂಗಳೂರಿಗೆ ಬಂದಿದ್ದರು. ಇದು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಬೆನ್ನಲ್ಲೇ ನಡೆದಿದೆ.

ಚಿನ್ನ ಬೆನ್ನಲ್ಲೇ ಡಿಆರ್​ಐ ಅಧಿಕಾರಿಗಳ ಮತ್ತೊಂದು ಕಾರ್ಯಾಚರಣೆ: 38.4 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಸಾಂದರ್ಭಿಕ ಚಿತ್ರ
Edited By:

Updated on: Mar 19, 2025 | 9:48 AM

ಬೆಂಗಳೂರು, ಮಾರ್ಚ್​ 19: ಚಿನ್ನ ಕಳ್ಳಸಾಗಾಣಿಕೆ ಪ್ರಕರಣವನ್ನು ಪತ್ತೆ ಹಚ್ಚಿದ ಬೆನ್ನಲ್ಲೇ ಆದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಡ್ರಗ್ಸ್​ (Drugs) ಸಾಗಾಣಿಕೆ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೊಬ್ಬರಿ 38.4 ಕೋಟಿ ರೂ. ಮೌಲ್ಯದ 3.2 ಕೆಜಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಘಾನಾ ಮೂಲದ ಜೆನ್ನಿಫರ್ ಅಬ್ಬೇ ಎಂಬುವರು ಕತಾರ್​ನ ದೋಹಾದಿಂದ ಬೆಂಗಳೂರಿಗೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಅಧಿಕಾರಿಗಳು ಜೆನ್ನಿಫರ್ ಅಬ್ಬೇಯನ್ನು ತಪಾಸಣೆಗೆ ಒಳಪಡಿಸಿದಾಗ ಕೊಕೇನ್ ಡ್ರಗ್ಸ್​ ಪತ್ತೆಯಾಗಿದೆ. ಕೂಡಲೇ ಡಿಆರ್​ಐ ಅಧಿಕಾರಿಗಳು ಜೆನ್ನಿಫರ್ ಅಬ್ಬೇಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿದ್ದಾರೆ.

ಸುಲಿಗೆಕೋರರ ಬಂಧನ

ವಾಹನ ಚಾಲಕನಿಂದ ಹಣ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಶಿವಾನಂದ, ನಿಖಿಲ್ ಬಂಧಿತ ಆರೋಪಿಗಳು. ಕಳೆದ ಶುಕ್ರವಾರ ಮಾರ್ಚ್​ 14 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಂಗಳೂರಿನ ನಂದಿನಿ ಬೂತ್​ಗಳಿಗೆ ಹಾಲು, ಮೊಸರು ಪೂರೈಸುತ್ತಿದ್ದ ರಾಮ ಎಂಬುವರಿಂದ ಹಣ ಸುಲಿಗೆ ಮಾಡಿದ್ದಾರೆ. ಚಾಲಕ ರಾಮ ಅಂದು ಹಣ ಸಂಗ್ರಹಿಸಿ ಚಿಕ್ಕಬಿದರಕಲ್ಲು ಕಡೆಯಿಂದ ತುಮಕೂರಿಗೆ ಹೊರಟಿದ್ದರು.

ಇದನ್ನೂ ಓದಿ
11 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರಿನ ಯುವಕ ಅರೆಸ್ಟ್​
ಬೆಂಗಳೂರು: 17 ಲಕ್ಷ ಮೌಲ್ಯದ ಡ್ರಗ್ಸ್​ ವಶ: ಇಬ್ಬರು ವಿದೇಶಿಗರ ಬಂಧನ
ಕರಾವಳಿ ಭದ್ರತೆಗೆ ಗಂಭೀರ ಅಪಾಯ ತಂದಿಟ್ಟ ಸರ್ಕಾರದ ಹೊಸ ಆದೇಶ
ಬೆಂಗಳೂರು: 36 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಕಸ್ಟಮ್ಸ್

ಈ ವೇಳೆ ಬೈಕ್, ಆಟೋದಲ್ಲಿ ಬಂದು ಅಡ್ಡಗಟ್ಟಿದ್ದ ಐವರು, ರಾಮ ಬಳಿ ಇದ್ದ 1.28 ಲಕ್ಷ ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಚಾಲಕ ರಾಮ ಮಾದನಾಯಕನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಕಾರ್ಯಾಚರಣೆ: 75 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ

3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ

ಇತ್ತೀಚಿಗೆ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಿದ್ದರು. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ ಮಾಡಿದ್ದರು. ಆರೋಪಿಗಳು ಸೋಲದೇವನಹಳ್ಳಿ ಬಳಿ ಡ್ರಗ್ಸ್ ಸಂಗ್ರಹಿಸಿದ್ದರು.ಈ ವಿಚಾರ ತಿಳಿಸಿದ ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿತ್ತು. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದರು.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ