AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Police: ಕುಡಿದು ವಾಹನ ಚಲಾಯಿಸುತ್ತಿದ್ದ 9 ಖಾಸಗಿ ಬಸ್​ ಚಾಲಕರ ವಿರುದ್ಧ ಕ್ರಿಮಿನಲ್​ ಕೇಸ್​

ಬೆಂಗಳೂರು ನಗರದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಈ ಅಪಘಾತಗಳಿಗೆ ಹಲವು ಕಾರಣಗಳಿವೆ. ಇವುಗಳಲ್ಲಿ ಒಂದು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಟ್ರಾಫಿಕ್​ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಗುರುವಾರ ಬರೊಬ್ಬರಿ 881 ಖಾಸಗಿ ಬಸ್​ಗಳ ಚಾಲಕರನ್ನು ಪರಿಶೀಲನೆ ಮಾಡಿದ್ದರು.

Bengaluru Traffic Police: ಕುಡಿದು ವಾಹನ ಚಲಾಯಿಸುತ್ತಿದ್ದ 9 ಖಾಸಗಿ ಬಸ್​ ಚಾಲಕರ ವಿರುದ್ಧ ಕ್ರಿಮಿನಲ್​ ಕೇಸ್​
ಬೆಂಗಳೂರು ಸಂಚಾರ ಪೊಲೀಸ್​
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ|

Updated on: Jan 26, 2024 | 11:59 AM

Share

ಬೆಂಗಳೂರು, ಜನವರಿ 26: ಖಾಸಗಿ ಬಸ್ (Private Bus) ಚಾಲಕರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿದ್ದೇವೆ. ಖಾಸಗಿ ಬಸ್​ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದಾರೆಯೇ (Drink And Drive) ಎಂದು ಪರಿಶೀಲನೆ ಗುರುವಾರ ನಡೆಸಿದ್ದೇವು. 881 ಬಸ್​ಗಳ ಚಾಲಕರನ್ನು ಪರಿಶೀಲನೆ ಮಾಡಿದೇವು. ಅದರಲ್ಲಿ 9 ಮಂದಿ ಚಾಲಕರು ಪಾನಮತ್ತರಾಗಿ ಚಾಲನೆ ಮಾಡಿದ್ದು ಕಂಡುಬಂದಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ (Bengaluru Traffic Joint Commissioner of Police MN Anucheth) ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇವಲ ವೈಲೇಷನ್ ಎಂದು ಮಾತ್ರ ಪರಿಗಣಿಸುವುದಿಲ್ಲ. ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದೇವೆ. ಡಿಎಲ್ ಸಸ್ಪೆನ್ಷನ್​ಗೆ ಪತ್ರ ಬರೆಯಲಾಗಿದೆ. ಬಸ್ ಮಾಲೀಕರಿಗೂ ನೋಟಿಸ್ ಕೊಡಲಾಗಿದೆ. ಒಂದೊಂದು ಬಸ್​ನಲ್ಲಿ 50-55 ಜನ ಇರುತ್ತಾರೆ. ಕುಡಿದು ವಾಹನ ಚಲಾಯಸಿದರೇ ಎಲ್ಲರಿಗೂ ಅಪಾಯ ಎಂದರು.

ಕಳೆದ ವರ್ಷ 24 ಖಾಸಗಿ ಬಸ್ ಅಪಘಾತವಾಗಿವೆ. ಇದರಲ್ಲಿ ಹೆಚ್ಚಾಗಿ ಪಾದಚಾರಿಗಳು ಮರಣ ಹೊಂದಿದ್ದಾರೆ. ರಸ್ತೆ ಸುರಕ್ಷತೆ ಹೆಚ್ಚಿಸಲು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಆಟೋ ಚಾಲಕರು ಹೆಚ್ಚಿನ ಹಣ ಕೇಳುತ್ತಾರೆ. ಹೇಳಿದ ಕಡೆ ಬರುವುದಿಲ್ಲ ಅಡ್ಡಾದಿಡ್ಡಿಯಾಗಿ ಓಡಿಸುತ್ತಾರೆಂಬ ದೂರು ಬಂದಿತ್ತು. ಅಪರಾಧ ವಿಮರ್ಶೆ ಕೂಡ ಮಾಡಿದ್ದೇವೆ. ಯಾವ್ಯಾವ ವಾಹನದಿಂದ ಅಪಘಾತ ಆಗಿದೆ ಎಂದು ನೋಡಿದ್ದೇವೆ. ಹೆಚ್ಚಾಗಿ ಖಾಸಗಿ ವಾಹನ, ವಾಟರ್ ಟ್ಯಾಂಕರ್, ಬಿಬಿಎಂಪಿ ಕಸದ ಲಾರಿಯಿಂದ ಆಗಿದೆ. ಅವರ ಮೇಲೆ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು: ಟ್ರಾಫಿಕ್​ ಪೊಲೀಸ್​​​ ಕಾನ್ಸ್‌ಟೇಬಲ್ ಕಾರ್ಯಕ್ಕೆ ಕಮಿಷನರ್ ಬಿ ದಯಾನಂದ್ ಶ್ಲಾಘನೆ

ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು

ಬೆಂಗಳೂರು ನಗರ ಸಂಚಾರಿ ಪೊಲೀಸರು ಮಂಗಳವಾರ ಬೆಳಗ್ಗೆ 7 ರಿಂದ 9.30ರವರೆಗೆ ಶಾಲಾ ವಾಹನಗಳ ತಪಾಸಣೆ ನಡೆಸಿದ್ದರು. ಈ ವೇಳೆ ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು ಸಿಕ್ಕಿಬಿದ್ದಿದ್ದರು. ಸುಮಾರು 3,414 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದು ಈ ಪೈಕಿ 16 ಚಾಲಕರು ಮದ್ಯಸೇವಿಸಿ ಶಾಲಾ ವಾಹನ ಚಾಲನೆ ಮಾಡಿದ್ದು ಬೆಳಕಿಗೆ ಬಂದಿತ್ತು. 16 ಶಾಲಾ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕೇಸ್ ದಾಖಲಿಸಿದ್ದರು. ಕುಡಿದು ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿತ್ತು. 16 ಚಾಲಕರ ವಾಹನ ಪರವಾನಗಿ ಪತ್ರ ಆರ್​ಟಿಒ ಕಚೇರಿಗೆ ರವಾನಿಸಲಾಗಿತ್ತು.

ಮಕ್ಕಳ ಸುರಕ್ಷತೆಗೆ ಹೊಸ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಶಾಲಾ ವಾಹನಗಳಲ್ಲಿ ಕಾರ್ಯ ನಿರ್ವಹಿಸುವ ಚಾಲಕರು ಹಾಗೂ ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಆಗುತ್ತಿದೆ ಎಂಬ ಪ್ರಕರಣ ಸಂಬಂಧ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆಯ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮಕ್ಕೆ ಈ ಹಿಂದೆ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಹೊಸ ಸುತ್ತೋಲೆಯನ್ನು ಹೊರಡಿಸಿತ್ತು. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಎಲ್ಲಾ ಚಾಲಕರು ಪೊಲೀಸ್ ಠಾಣೆಗಳಿಂದ ಅವರ ನಡತೆಯ ಬಗ್ಗೆ ನಡವಳಿಕೆ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲು ಶಿಕ್ಷಣ ಇಲಾಖೆ ಆದೇಶಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ