ಡ್ರಿಂಕ್ ಆ್ಯಂಡ್ ಡ್ರೈವ್ ವಿಶೇಷ ಕಾರ್ಯಾಚರಣೆ; ಒಂದೇ ರಾತ್ರಿ 2,804 ವಾಹನಗಳ ತಪಾಸಣೆ ಮಾಡಿ 75 ಕೇಸ್ ದಾಖಲಿಸಿದ ಸಂಚಾರಿ ಪೊಲೀಸರು
ಇಯರ್ ಎಂಡ್‌ನಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ಹೆಚ್ಚಾಗುವ ಹಿನ್ನೆಲೆ ಬೆಂಗಳೂರು ಸಂಚಾರಿ ಪೊಲೀಸರು ಅಲರ್ಟ ಆಗಿದ್ದಾರೆ. ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದು ನಿನ್ನೆ ಒಂದೇ ರಾತ್ರಿ 2,804 ವಾಹನಗಳನ್ನು ಚೆಕ್ ಮಾಡಿದ್ದಾರೆ. 75 ಕೇಸ್ಗಳನ್ನು ದಾಖಲಿಸಿದ್ದಾರೆ. ಬೆಂಗಳೂರಿನ ನ್ಯೂ ಇಯರ್ ಹಾಟ್ ಸ್ಪಾಟ್ ಆಗಿರೋ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಸಿಸಿಟಿವಿ ಸಂಖ್ಯೆಯನ್ನ ಕೂಡ ಹೆಚ್ಚಿಸೋಕೆ ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ.
ಬೆಂಗಳೂರು, ಡಿ.22: ಡಿಸೆಂಬರ್ ತಿಂಗಳು ಮುಗಿಯುತ್ತ ಬರ್ತಿದ್ದಂತೆ ಇತ್ತ ಹೊಸ ವರ್ಷದ ತಯಾರಿ ಜೋರಾಗುತ್ತಿದೆ. ಹೊಸ ವರ್ಷಾಚರಣೆ (New Year) ಸಮೀಪಿಸುತ್ತಿದ್ದಂತೆ ಬೆಂಗಳೂರಿನ ಸಂಚಾರಿ ಪೊಲೀಸರು (Bengaluru Traffic Police) ಅಲರ್ಟ್ ಆಗಿದ್ದಾರೆ. ಇಯರ್ ಎಂಡ್‌ನಲ್ಲಿ ಡ್ರಿಂಕ್ ಌಂಡ್ ಡ್ರೈವ್ (Drink and Drive) ಹೆಚ್ಚಾಗುವ ಹಿನ್ನೆಲೆ ವಿಶೇಷ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈಗಾಗಲೇ ಫೀಲ್ಡ್ಗೆ ಇಳಿದಿರುವ ಪೊಲೀಸರು ಒಂದೇ ರಾತ್ರಿ 2,804 ವಾಹನಗಳ ತಪಾಸಣೆ ಮಾಡಿ 75 ಕೇಸ್ ದಾಖಲಿಸಿದ್ದಾರೆ.
ಇಯರ್ ಎಂಡ್‌ನಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ಹೆಚ್ಚಾಗುವ ಹಿನ್ನೆಲೆ ಬೆಂಗಳೂರು ಸಂಚಾರಿ ಪೊಲೀಸರು ಅಲರ್ಟ ಆಗಿದ್ದಾರೆ. ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದು ನಿನ್ನೆ ಒಂದೇ ರಾತ್ರಿ 2,804 ವಾಹನಗಳನ್ನು ಚೆಕ್ ಮಾಡಿದ್ದಾರೆ. 75 ಕೇಸ್ಗಳನ್ನು ದಾಖಲಿಸಿದ್ದಾರೆ. ನ್ಯೂಇಯರ್‌ವರೆಗೆ ಈ ಕಾರ್ಯಾಚರಣೆ ಮುಂದುವರಿಯಲಿದೆ.
ಈ ಬಾರೀ ಬೆಂಗಳೂರಿನ ನ್ಯೂ ಇಯರ್ ಹಾಟ್ ಸ್ಪಾಟ್ ಆಗಿರೋ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಸಿಸಿಟಿವಿ ಸಂಖ್ಯೆಯನ್ನ ಕೂಡ ಹೆಚ್ಚಿಸೋಕೆ ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಕಳೆದ 3 ವರ್ಷಗಳಿಂದ ಕೋವಿಡ್ ಇದ್ದ ಹಿನ್ನೆಲೆ ಕೇವಲ 200 ರಿಂದ 300 ಸಿಸಿಟಿವಿ ಅಳವಡಿಕೆ ಮಾಡಲಾಗ್ತಿತ್ತು. ಆದ್ರೆ ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರೋದರಿಂದ ಸುಮಾರು 800 ಸಿಸಿಟಿವಿ ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಬೆಂಗಳೂರಿಗೆ ಜೆಎನ್.1 ನ ಆತಂಕ; 45 ಸ್ಯಾಂಪಲ್ಗಳನ್ನು ಜೆನೆಮಿಕ್ ಸೀಕ್ವೆನ್ಸ್ಗೆ ಕಳಿಸಿದ ಆರೋಗ್ಯ ಇಲಾಖೆ
ನ್ಯೂ ಇಯರ್ ರೂಲ್ಸ್
- ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು
- ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ
- ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್
- ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ
- ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
- ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ
- ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
- ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ
- ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ
- ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ