AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುಮು ಚುಮು ಚಳಿ ಮಧ್ಯ ತುಂತುರು ಮಳೆ: ಬೆಂಗಳೂರು ಕೂಲ್.. ಕೂಲ್!

Bengaluru Weather: ರಾಜಧಾನಿ ಬೆಂಗಳೂರಿನಲ್ಲಿ ಚುಮು ಚುಮು ಚಳಿ ಆರಂಭವಾಗಿದ್ದು, ಸಂಜೆ ಆಗುತ್ತಿದ್ದಂತೆಯೇ ಶುರುವಾಗುವ ಚಳಿ ಮರುದಿನ ಸೂರ್ಯೋದಯದವರೆಗೂ ಹಾಗೆಯೇ ಇರುತ್ತದೆ. ಅವಧಿಗೂ ಮುನ್ನವೇ ಬೆಂಗಳೂರಿನಲ್ಲಿ ಭಾರೀ ಚಳಿ ಆರಂಭವಾಗಿತ್ತು. ಬಳಿಕ ಕೊಂಚ ಕಡಿಮೆಯಾಗಿತ್ತಾದರೂ ಬಳಿಕ ಬಂದ ಸೈಕ್ಲೋನ್​ನಿಂದ ಬಿಸಿಲೇ ಇಲ್ಲದಂತಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಫುಲ್​ ಕೂಲ್ ಕೂಲ್ ಆಗಿದೆ.

ಚುಮು ಚುಮು ಚಳಿ ಮಧ್ಯ ತುಂತುರು ಮಳೆ: ಬೆಂಗಳೂರು ಕೂಲ್.. ಕೂಲ್!
Bengaluru Weather
ರಮೇಶ್ ಬಿ. ಜವಳಗೇರಾ
|

Updated on:Dec 27, 2024 | 3:49 PM

Share

ಬೆಂಗಳೂರು, (ಡಿಸೆಂಬರ್ 27): ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್​ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ ಉತ್ತಮವಾಗಿದೆ. ಇದೀಗ ಚಳಿಗಾಲದಲ್ಲೂ ಸಹ ಮಳೆ ನಿಲ್ಲುತ್ತಿಲ್ಲ. ನಿನ್ನೆ (ಗುರುವಾರ) ಮಧ್ಯಾಹ್ನದ ವೇಳೆ ನಗರದ ಹಲವೆಡೆ ಜಿನಿ ಜಿನಿ ಮಳೆಯಾಗಿತ್ತು. ಅದೇ ಸರಿಯಾದ ಮಧ್ಯಾಹ್ನದ ಹೊತ್ತಿಗೆ ಇಂದು(ಡಿಸೆಂಬರ್ 27) ಸಹ ಜಿಟಿ ಜಿಟಿ ಮಳೆಯಾಗಿದೆ. ಬೆಂಗಳೂರಿನಲ್ಲಿ ವಾತಾವರಣ ಕೂಲ್ ಕೂಲ್ ಆಗಿದ್ದು, ಜನರು ನಡುಗುವಂತಾಗಿದೆ. ಇನ್ನೊಂದೆಡೆ ಬಿಟ್ಟು ಬಿಟ್ಟು ಬರುತ್ತಿರುವ ಮಳೆಗೆ ಜನರು ರೋಸಿಹೋಗಿದ್ದಾರೆ.

ಇನ್ನು  ಬಿಟ್ಟು ಬಿಟ್ಟು ಬರುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಬೀದಿ ವ್ಯಾಪಾರಿಗಳು ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದೆ. ಅತ್ತ ಜೋರಾಗಿ ಬರುತ್ತಿಲ್ಲ. ಇನ್ನೊಂದೆಡೆ ಆಕಡೆ ಹೋಗುತ್ತಿಲ್ಲ. ಆಗಾಗ ಜಿನಿ ಜಿನಿ ಮಳೆಯಾಗುತ್ತಿದೆ.

ಹವಾಮಾನ ಇಲಾಖೆಯಿಂದ ಮಳೆ ಅಲರ್ಟ್​

ಬಂಗಾಲ ಉಪಸಾಗರದ ನೈರುತ್ಯ ಭಾಗದಲ್ಲಿ ವಾಯ ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆಯ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಹೊರತುಪಡಿಸಿ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ.

ಇಂದು ಮತ್ತು ನಾಳೆ ಹಾಸನ, ಮೈಸೂರು, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ನಗರ ಜಿಲ್ಲೆ ಕರ್ನಾಟಕದ ಒಳಭಾಗದ ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ಮಂಜು ಇರಲಿದೆ. ನಾಳೆ ಬೆಳಿಗ್ಗೆ ಸಂದರ್ಭದಲ್ಲಿ ಬೆಂಗಳೂರು ಸುತ್ತಮುತ್ತ ಮಂಜು ಕವಿದ ವಾತಾವರಣ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚುಮು ಚುಮು ಚಳಿ ಜತೆ ಜಿನಿ ಜಿನಿ ಮಳೆ

ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭವಾಗಿದ್ದು, ಸಂಜೆ ಆಗುತ್ತಿದ್ದಂತೆಯೇ ಶುರುವಾಗುವ ಚಳಿ ಮರುದಿನ ಸೂರ್ಯೋದಯದವರೆಗೂ ಹಾಗೆಯೇ ಇರುತ್ತದೆ. ಅವಧಿಗೂ ಮುನ್ನವೇ ಬೆಂಗಳೂರಿನಲ್ಲಿ ಭಾರೀ ಚಳಿ ಆರಂಭವಾಗಿತ್ತು. ಬಳಿಕ ಕೊಂಚ ಕಡಿಮೆಯಾಗಿತ್ತಾದರೂ ಬಳಿಕ ಬಂದ ಸೈಕ್ಲೋನ್​ನಿಂದ ಬಿಸಿಲೇ ಇಲ್ಲದಂತಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ.

ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಜಿನುಗುತ್ತಿದೆ.

ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶೀತ, ಕೆಮ್ಮು ಜೋರು

ಚಳಿ ಜೊತೆ ತುಂತೂರು ಮಳೆಯಿಂದಾಗಿ ಬೆಂಗಳೂರಿನಲ್ಲಿ ಮೋಡ ಮುಸುಕಿಕೊಂಡಿದ್ದು, ಜನರು ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಜನರಿಗೆ ಶೀತ, ಕೆಮ್ಮು ಹಾಗೂ ಜ್ವರ ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ. ಬೆಚ್ಚನೆ ಬಟ್ಟೆ ಧರಿಸುವುದು ಉತ್ತಮ. ಸಾಧ್ಯವಾದಷ್ಟು ದೇಹವನ್ನು ಬೆಚ್ಚಗೆ ಕಾಪಾಡಿಕೊಳ್ಳಬೇಕು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Fri, 27 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್