ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಸಿಎಂ ಸಿದ್ದರಾಮಯ್ಯಗೆ ಶಿಫಾರಸು: ಕೃಷ್ಣ ಬೈರೇಗೌಡ

161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಸಿಎಂ ಸಿದ್ದರಾಮಯ್ಯಗೆ ಶಿಫಾರಸು: ಕೃಷ್ಣ ಬೈರೇಗೌಡ
ಕೃಷ್ಣ ಭೈರೇಗೌಡ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Sep 13, 2023 | 2:52 PM

ಬೆಂಗಳೂರು ಸೆ.13: ರಾಜ್ಯದ 195 ತಾಲೂಕುಗಳಲ್ಲಿ ಬರ (Drought) ಪರಿಸ್ಥಿತಿ ಇದ್ದು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಶಿಫಾರಸು ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದರು. ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದಾರೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಗೆ ಅಧಿಸೂಚನೆ ಹೊರಡಿಸುತ್ತೇವೆ. ಬಳಿಕ 10 ದಿನದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.

ಮೊದಲ ಬರ ಘೋಷಣೆ ಮಾಡಬೇಕು, ಬಳಿಕ ಪರಿಹಾರ ಘೋಷಣೆ ಮಾಡಲಾಗುವುದು. ಮೊದಲು 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಿದ್ದೇವು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಿದ್ದೇವು ಎಂದು ತಿಳಿಸಿದರು.

ಈಗ ಎಲ್ಲ ಜಿಲ್ಲೆಗಳಿಂದ ಬೆಳೆ ಸಮೀಕ್ಷೆ ವರದಿ ಬಂದಿದೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ತನ್ನ ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಬರ ಘೋಷಣೆ ಮನವಿಗೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದೇವೆ. ಎಲ್ಲ ಬರ ಪೀಡಿತ ತಾಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದೇವೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೆಚ್ಚಿನ ಉದ್ಯೋಗ ನೀಡಬೇಕು ಅಂತ ಸೂಚನೆ ನೀಡಿದ್ದೇವೆ. ಮಲೆನಾಡು ಭಾಗದಲ್ಲಿ ಶೇ 40ಕ್ಕಿಂತ ಹೆಚ್ಚು ಮಳೆ ಕೊರತೆ ಇದೆ. ಕಾವೇರಿ ಜಲಾಯನ ಪ್ರದೇಶದಲ್ಲೂ ನೀರಿನ ಕೊರತೆ ಆಗಿದೆ. ದಕ್ಷಿಣ ಒಳನಾಡಿನಲ್ಲೂ ಸಾಕಷ್ಟು ಮಳೆ ಕೊರತೆ ಇದೆ. ಇನ್ನು ಬರ ಘೋಷಣೆ ಶಿಫಾರಸು ಪಟ್ಟಿ ಇದೇ ಅಂತಿಮ ಅಲ್ಲ. ಬಾಕಿ ಉಳಿದ 40 ತಾಲೂಕುಗಳಲ್ಲಿ ಕೂಡ 15 ದಿನಗಳ ಬಳಿಕ ಬೆಳೆ ಸಮೀಕ್ಷೆ ಮಾಡುತ್ತೇವೆ. ಅವು ಕೂಡ ಮಾರ್ಗಸೂಚಿಗಳ ಒಳಪಟ್ಟರೆ ಅವುಗಳನ್ನು ಮತ್ತೆ ಬರ ಪೀಡಿತ ತಾಲೂಕು ಅಂತ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:28 pm, Wed, 13 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ