ಜೆಸಿ ನಗರ ಪೊಲೀಸರ ವಶದಲ್ಲಿದ್ದ ಡ್ರಗ್ಸ್ ಆರೋಪಿ, ವಿದೇಶಿ ಪ್ರಜೆ ಸಾವು

| Updated By: ಆಯೇಷಾ ಬಾನು

Updated on: Aug 02, 2021 | 10:07 AM

ಜೆಸಿ ನಗರ ಠಾಣೆ ಪೊಲೀಸರ ವಶದಲ್ಲಿದ್ದಾಗಲೇ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು, ದಾಳಿ ನಡೆಸಿ 5 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಆರೋಪಿಯನ್ನೂ ಅರೆಸ್ಟ್ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಾಗ ಆರೋಪಿ ನನಗೆ ಎದೆನೋವು ಮತ್ತು ಶೀತ ಇದೆ ಎಂದು ಹೇಳಿದ್ದ.

ಜೆಸಿ ನಗರ ಪೊಲೀಸರ ವಶದಲ್ಲಿದ್ದ ಡ್ರಗ್ಸ್ ಆರೋಪಿ, ವಿದೇಶಿ ಪ್ರಜೆ ಸಾವು
ಜೆಸಿ ನಗರ ಠಾಣೆ
Follow us on

ಬೆಂಗಳೂರು: ಜೆಸಿ ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡ್ರಗ್ಸ್ ಕೇಸ್ ಸಂಬಂಧ ಆರೋಪಿಯನ್ನು ಪೊಲೀಸರು ಕರೆ ತಂದಿದ್ದರು. ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ವಿದೇಶಿ ಪ್ರಜೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ.

ಜೆಸಿ ನಗರ ಠಾಣೆ ಪೊಲೀಸರ ವಶದಲ್ಲಿದ್ದಾಗಲೇ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು, ದಾಳಿ ನಡೆಸಿ 5 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಆರೋಪಿಯನ್ನೂ ಅರೆಸ್ಟ್ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಾಗ ಆರೋಪಿ ನನಗೆ ಎದೆನೋವು ಮತ್ತು ಶೀತ ಇದೆ ಎಂದು ಹೇಳಿದ್ದ. ಹೀಗಾಗಿ ತಕ್ಷಣ ಚಿರಾಯು ಖಾಸಗಿ ಆಸ್ಪತ್ರೆಗೆ ಪೊಲೀಸರು ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ. ಇನ್ನೂ ಮೃತ ಆಫ್ರಿಕಾ ಪ್ರಜೆ ಗುರುತು ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಇದನ್ನೂ ಓದಿ: ವಿಕ್ಕಿ ಜೈನ್​ ತುಟಿಗೆ ಮುತ್ತಿಟ್ಟು ದುಬಾರಿ ಗಿಫ್ಟ್​ ನೀಡಿದ ಸುಶಾಂತ್ ಸಿಂಗ್​ ಮಾಜಿ ಪ್ರೇಯಸಿ ಅಂಕಿತಾ