ಡ್ರಗ್ ​​ವಿರುದ್ಧ ಸಮರ: ಬೆಂಗಳೂರಿನ ಅಂಚೆ ಕಚೇರಿ, ಕೋರಿಯರ್ ಏಜೆನ್ಸಿಯಲ್ಲಿ ಸಿಸಿಬಿ ​​ತಪಾಸಣೆ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ನಗರದಲ್ಲಿನ ಕೊರಿಯರ್ ಸೇವೆ ಮತ್ತು ಅಂಚೆ ಕಚೇರಿಗಳ ಮೇಲೆ ದಾಳಿ ಮಾಡಿದರು. ಸಂಪಂಗಿ ರಾಮನಗರದ ಕೊರಿಯರ್​ ಏಜೆನ್ಸಿಯಲ್ಲಿ ಸಿಸಿಬಿ ಮತ್ತು ಶ್ವಾನದಳ ಪಾರ್ಸೆಲ್​ಗಳ ಪರಿಶೀಲನೆ ನಡೆಸಿತು.

ಡ್ರಗ್ ​​ವಿರುದ್ಧ ಸಮರ: ಬೆಂಗಳೂರಿನ ಅಂಚೆ ಕಚೇರಿ, ಕೋರಿಯರ್ ಏಜೆನ್ಸಿಯಲ್ಲಿ ಸಿಸಿಬಿ ​​ತಪಾಸಣೆ
ಶ್ವಾನದಳ ಪರಿಶೀಲನೆ
Follow us
Jagadisha B
| Updated By: ವಿವೇಕ ಬಿರಾದಾರ

Updated on: Dec 07, 2024 | 3:07 PM

ಬೆಂಗಳೂರು, ಡಿಸೆಂಬರ್​ 07: ಹೊಸ ವರ್ಷಾಚರಣೆ (New Year) ಹಿನ್ನೆಲೆಯಲ್ಲಿ ಡ್ರಗ್ (Drug)​ ಜಾಲದ ಮೇಲೆ ಬೆಂಗಳೂರು ನಗರ ಪೊಲೀಸರು (Bengaluru City Police) ಮತ್ತು ಸಿಸಿಬಿ (CCB) ಪೊಲೀಸರು ಕಣ್ಣಿಟ್ಟಿದ್ದಾರೆ. ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ಈಗಾಗಲೆ ಕೋಟ್ಯಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಶನಿವಾರ (ಡಿಸೆಂಬರ್​ 07) ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿದರು. ಬೆಂಗಳೂರಿನ ಕೊರಿಯರ್​ ಏಜೆನ್ಸಿ ಮತ್ತು ಅಂಚೆ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಂಪಂಗಿ ರಾಮನಗರದ ಕೊರಿಯರ್​ ಏಜೆನ್ಸಿಯಲ್ಲಿ ಸಿಸಿಬಿ ಮತ್ತು ಶ್ವಾನದಳ ಪಾರ್ಸೆಲ್​ಗಳ ಪರಿಶೀಲನೆ ನಡೆಸಿತು.

ಈ ವಿಚಾರವಾಗಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾತನಾಡಿ, ವಿದೇಶದಿಂದ ಬರುತ್ತಿದ್ದ ಪಾರ್ಸಲ್‌ಗಳಲ್ಲಿ ಡ್ರಗ್ಸ್​ ಪತ್ತೆಯಾಗಿತ್ತು. ಹೀಗಾಗಿ, ಒಟ್ಟು ಏಳು ಕಡೆ ಪರಿಶೀಲನೆ ನಡೆಸಲಾಗಿದೆ. ಹೊಸ ವರ್ಷ ಹಿನ್ನೆಲೆ ಡ್ರಗ್ಸ್ ಹೆಚ್ಚಾಗಿ ಪೂರೈಸುತ್ತಿರುವ ಮಾಹಿತಿ ಇದೆ. ತಪ್ಪು ವಿಳಾಸ ಕೊಟ್ಟು ಕೊರಿಯರ್​ಗಳಲ್ಲಿ ಸರಬರಾಜು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊರಿಯರ್​ ಕಚೇರಿ, ಅಂಚೆ ಕಚೇರಿಗಳಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿದರು.

10 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

ಮಂಗಳೂರು ಸಿಸಿಬಿ ಪೊಲೀಸರು ಕೂಡ ಶನಿವಾರ ಕಾರ್ಯಾಚರಣೆ ನಡೆಸಿದ್ದು, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಮ್​ಡಿಎಮ್​ಎ ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ದರ್ಶನ್ ಕೆ.ಜಿ (25), ನೈಜೀರಿಯಾ ಮೂಲದ ಚಿಕ ಜೋಸೇಫ್ ಇಝಿ (26) ಬಂಧಿತ ಆರೋಪಿಗಳು.

ಇತ್ತಿಚೆಗೆ ಮಾದಕವಸ್ತು ಮಾರಾಟ ಆರೋಪದಲ್ಲಿ ಬಜ್ಪೆ ಪೊಲೀಸರು ಇಕ್ಬಾಲ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಡ್ರಗ್ ಪೆಡ್ಲರ್​ಗಳ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಪಡೆದಿದ್ದರು. ಖಚಿತ ಮಾಹಿತಿ ಆಧರಿಸಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಬೆಂಗಳೂರಿನಲ್ಲಿದ್ದುಕೊಂಡು ಡ್ರಗ್ ಮಾರಾಟ, ಸಾಗಾಟ ಮಾಡುತ್ತಿದ್ದರು.

ಆರೋಪಿ ಚಿಕ ಜೋಸೆಫ್ ಇಝಿ 2023ರಲ್ಲಿ ಉದ್ಯೋಗ ವೀಸಾದಲ್ಲಿ ಭಾರತಕ್ಕೆ ಬಂದಿದ್ದನು. ಚಿಕ ಜೋಸೆಫ್ ಬೆಂಗಳೂರಿನ ಯಲಹಂಕದಲ್ಲಿ ಹೇರ್ ಕಟ್ಟಿಂಗ್ ಉದ್ಯೋಗ ಮಾಡಿಕೊಂಡಿದ್ದನು. ಈಗಾಗಲೇ ಈತನ ವಿರುದ್ಧ ಬೆಂಗಳೂರು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿ, ಬಂಧಿತನಾಗಿದ್ದನು. ನಾಲ್ಕು ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದನು. ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

ಸಿಸಿಬಿ ಪೊಲೀಸರು ಎಮ್​ಡಿಎಮ್​ಎ ಜೊತೆಗೆ ಕಾರು, 5 ಮೊಬೈಲ್ ಫೋನ್, ಡೆಬಿಟ್ ಕಾರ್ಡ್, ಏಳು ಸಿಮ್ ಕಾರ್ಡ್​​ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಒಟ್ಟು 18 ಲಕ್ಷ 25 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ