AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನೊಳಗೆ ಡ್ರಗ್ ಪೆಡ್ಲಿಂಗ್​, ವಿದ್ಯಾರ್ಥಿಯಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಡ್ರಗ್ ಭೇಟೆಗೆ ಇಳಿದ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಶಾಕ್​ ಆಗಿದ್ದು, ಪ್ರತಿಷ್ಠಿತ ಕಾಲೇಜುಗಳ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಂಧಿಸಲಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನೊಳಗೆ ಡ್ರಗ್ ಪೆಡ್ಲಿಂಗ್​, ವಿದ್ಯಾರ್ಥಿಯಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಆರೋಪಿ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 26, 2023 | 7:26 AM

Share

ಬೆಂಗಳೂರು,ಜು.26: ರಾಜ್ಯಾದ್ಯಂತ ಮಾದಕ ವಸ್ತು ಮಾರಾಟ ಹೆಚ್ಚಾಗಿರುವ ಹಿನ್ನಲೆ ಇತ್ತೀಚೆಗಷ್ಟೇ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇದರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಾಕೀತು ಮಾಡಿದ್ದರು. ಅದರ ಬೆನ್ನಲ್ಲೆ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಅಕ್ರಮಕ್ಕೆ ಬ್ರೇಕ್​ ಹಾಕಲು ಮುಂದಾಗಿದ್ದಾರೆ. ಅದರಂತೆ ಇದೀಗ ಡ್ರಗ್(Drug) ಭೇಟೆಗೆ ಇಳಿದ ಬೆಂಗಳೂರು(Bengaluru) ದಕ್ಷಿಣ ವಿಭಾಗದ ಪೊಲೀಸರು ಶಾಕ್​ ಆಗಿದ್ದಾರೆ. ಹೌದು ಪ್ರತಿಷ್ಠಿತ ಕಾಲೇಜುಗಳ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಂಧಿಸಲಾಗಿದೆ.

ಡ್ರಗ್ ಪೆಡ್ಲಿಂಗ್​ನಲ್ಲಿ ಭಾಗಿಯಾದ ಕೆಲ ಕಾಲೇಜಿನ ವಿದ್ಯಾರ್ಥಿಗಳು

ಮೈಸೂರು ರಸ್ತೆಯ ಕೆಲ ಕಾಲೇಜುಗಳಲ್ಲಿ ಡ್ರಗ್​ ಮಾರಾಟ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನಲೆ ದಾಳಿ ಮಾಡಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಯಿಂದಲೇ ಇತರ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟವಾಗುತ್ತಿರುವುದು ತಿಳಿದು ಬಂದಿದೆ. ಅದರಂತೆ ಕೇರಳ ಮೂಲದ ಪೆಡ್ಲರ್ ಆಗಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿ ಬಿಸ್ಟೀನ್ ರಾಯ್ ಎಂಬಾತ ಬಸವನಗುಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಇನ್ನು ಆರೋಪಿ ಬಂಧನದ ವೇಳೆ 20 ಲಕ್ಷ ರೂ ಮೌಲ್ಯದ ಡ್ರಗ್ ಪತ್ತೆಯಾಗಿದೆ.

ಇದನ್ನೂ ಓದಿ:ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು

ಎಂಡಿಎಂಎ ಡ್ರಗ್ ಮಾರಾಟ ಮಾಡುತಿದ್ದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು

ಇನ್ನು ತಮ್ಮದೇ ಟೀಮ್ ಹೊಂದಿದ್ದ ಬಂಧಿತ ಆರೋಪಿಯ ಗುಂಪು. ಪ್ರತಿಷ್ಠಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಹೊರಗಿನಿಂದ ಡ್ರಗ್ ತರಿಸಿಕೊಂಡು, ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಓರ್ವನನ್ನ ಬಂಧಿಸಿದ ಬಸವನಗುಡಿ ಪೊಲೀಸರು. ಆತನ ಬಂಧನದ ಬಳಿಕ ಉಳಿದ ಏಳು ಮಂದಿ ನಾಪತ್ತೆಯಾಗಿದ್ದು, ಇದೀಗ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್