AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ

ಅವರು ವಿದೇಶಿ ಪ್ರಜೆಗಳು. ಮೆಡಿಕಲ್ ವಿಸಾದಲ್ಲಿ ಭಾರತಕ್ಕೆ ಬಂದಿದ್ದರು. ಬಂದ ಕೆಲಸ ಮುಗಿಸಿಕೊಂಡು ಹೋಗುವುದು ಬಿಟ್ಟು ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾ ಪ್ರಜೆಗಳಿಬ್ಬರು ಹೊಲಸು ಬುದ್ದಿ ತೋರಿಸಿ ಪೊಲೀಸರ ವಶವಾಗಿದ್ದಾರೆ. ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಬಚ್ಚಿಟ್ಟು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ ಪೊಲೀಸರು ದಾಖಲೆ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ
ಬಂಧಿತ ನೈಜೀರಿಯಾ ಪ್ರಜೆಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 08, 2025 | 9:24 AM

Share

ಬೆಂಗಳೂರು, ಜುಲೈ 8: ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ (Drugs) ಮಾರಾಟ ಮಾಡುತ್ತಿದ್ದ ನೈಜೀರಿಯಾ (Nigerians) ಪ್ರಜೆಗಳಿಬ್ಬರನ್ನು ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್​​ಡಮ್​ ಎಂದು ಗುರುತಿಸಲಾಗಿದೆ. ಇವರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್ಪೋರ್ಟ್ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು. ಅಲ್ಲದೆ, ಡ್ರಗ್ ಪೆಡ್ಲಿಂಗ್ ಮಾಡಬೇಕು ಎಂದು ಬಂದಿದ್ದ ಐನಾತಿಗಳು ನಂತರ ತಮ್ಮ ಅಸಲಿ ವರಸೆ ಶುರುವಿಟ್ಟುಕೊಂಡಿದ್ದರು. ಮನೆಯಲ್ಲಿಯೇ ಡ್ರಗ್ ಶೇಖರಿಸಿಕೊಟ್ಟು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.

ಡ್ರಗ್ ಮಾರಾಟ ಮಾಡಲು ಹಾಗೂ ಶೇಖರಿಸಿಡಲು ಆರೋಪಿಗಳು ಸಖತ್ ಪ್ಲಾನ್ ಮಾಡಿಕೊಂಡಿದ್ದರು. ರೆಡಿಮೇಡ್ ಬಟ್ಟೆಗಳು, ಅದರಲ್​ಲೂ ಮಹಿಳೆಯರ ಚೂಡಿದಾರದಂತಹ ಬಟ್ಟೆಗಳಲ್ಲಿ, ಹೊಸ ಶರ್ಟ್ , ಪ್ಯಾಂಟ್​ಗಳ ಪ್ಯಾಕ್ ಮಾಡುವಾಗ ನಡುವೆ ಬಳಸುವ ಕಾರ್ಡ್ ಬೋರ್ಡ್ ಮಧ್ಯೆ ಮಾದಕ ವಸ್ತು ತುಂಬಿ ಇಟ್ಟು ಮಾರಾಟ ಮಾಡುತ್ತಿದ್ದರು.

ಪೊಲೀಸರಿಗೆ ಈ ಆರೋಪಿಗಳ ಕಳ್ಳಾಟದ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಅದರಂತೆ, ಒಬ್ಬರು ಪೊಲೀಸ್ ಸಿಬ್ಬಂದಿ ಆರೋಪಿಗಳ ಬೆನ್ನು ಹತ್ತಿದ್ದರು. ಇದೇ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸುವ ಸಾದ್ಯತೆ ಕಂಡುಬಂದಿದ್ದು, ತಕ್ಷಣವೇ 112 ಗೆ ಕರೆ ಮಾಡಿ ಇಆರ್​​ಸ್​​​ಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ಎಎಸ್​ಐ ತಮ್ಮ ಬಳಿ ಇದ್ದ ಸರ್ವಿಸ್ ಪಿಸ್ತೂಲ್ ತೋರಿಸಿ ಬೆದರಿಸಿ ಆರೋಪಿಗಳು ತಪ್ಪಿಸಿಕೊಳ್ಳದಂತೆ ಲಾಕ್ ಮಾಡಿದ್ದಾರೆ. ಬಳಿಕ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು ನೈಜೀರಿಯಾದವರ ತಂಡದ ಸಹಿತ ಇತರ ಡ್ರಗ್ ಪೆಡ್ಲರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ಇದನ್ನೂ ಓದಿ
Image
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Image
ಹೈಟೆಕ್ ಆಗಲಿದೆ ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣ!
Image
250 ಕೋಟಿ ರೂ. ಬಾಕಿ ಕೊಡದ ಸರ್ಕಾರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್
Image
ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ಜನರಿಂದಲೂ ವಿರೋಧ!

ದಾಳಿ ವೇಳೆ 4.50 ಕೋಟಿರೂಪಾಯಿಗೂ ಅಧಿಕ ಮೌಲ್ಯದ 2.8 ಕೆಜಿ ಎಂಡಿಎಂ ಎ ಕ್ರಿಸ್ಟಲ್, 200 ಗ್ರಾಂ ಹೈಡ್ರೋ ಗಾಂಜಾ, ಎರಡು ಲಕ್ಷ ರೂ. ನಗದು, ಏಳು ಮೊಬೈಲ್​ಗಳು, ವೇಯಿಂಗ್ ಮಷೀನ್ ಮತ್ತು ಮಹಿಳೆಯರ ಕೆಲ ಹೊಸ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ನೆಲೆಸಿರುವುದು ತನಿಖೆ ವೇಳೆ ಗೊತ್ತಾಗಿದೆ‌.

ಇದನ್ನೂ ಓದಿ: ಹೈಟೆಕ್ ಆಗಲಿದೆ ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣ: 40 ಎಕರೆಯಲ್ಲಿ ಬಹುಮಾದರಿ ಟ್ರಾನ್ಸ್​ಪೋರ್ಟ್ ಹಬ್

ಈ ಗ್ಯಾಂಗ್​​ನಲ್ಲಿ ಇದ್ದ ಒರ್ವ ವಿದೇಶಿ ಪ್ರಜೆ ತಪ್ಪಿಸಿಕೊಂಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಈ ಜಾಲಕ್ಕೆ ಹೊರ ರಾಜ್ಯದಿಂದ ಡ್ರಗ್ಸ್ ಪೂರೈಕೆ ಆಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಆ ಕುರಿತು ಪೊಲೀಸರು ತನಿಖೆ ನಡೆಸುತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ