ಬೆಂಗಳೂರು: ಕುಡಿದ ಅಮಲಿನಲ್ಲಿ ಕಟ್ಟಡದಿಂದ ತಳ್ಳಿ ಸ್ನೇಹಿತನ ಕೊಲೆ, ಆರೋಪಿ ಪರಾರಿ

ಕುಡಿದ ಅಮಲಿನಲ್ಲಿ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿದ್ದು ಓರ್ವ ಸ್ನೇಹಿತ ತನ್ನ ಸ್ನೇಹಿತನನ್ನೇ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಘಟನೆ ಬಳಿಕ ಆರೋಪಿ ಸ್ನೇಹಿತ ಅಭಿಷೇಕ್ ಪರಾರಿಯಾಗಿದ್ದಾನೆ.

ಬೆಂಗಳೂರು: ಕುಡಿದ ಅಮಲಿನಲ್ಲಿ ಕಟ್ಟಡದಿಂದ ತಳ್ಳಿ ಸ್ನೇಹಿತನ ಕೊಲೆ, ಆರೋಪಿ ಪರಾರಿ
ಸಾವು
Follow us
| Updated By: ಆಯೇಷಾ ಬಾನು

Updated on: Jun 29, 2024 | 1:10 PM

ಬೆಂಗಳೂರು, ಜೂನ್.29: ಕುಡಿದ ಅಮಲಿನಲ್ಲಿ ಕಟ್ಟಡದಿಂದ ತಳ್ಳಿ ಯುವಕನ ಕೊಲೆ‌ (Murder) ಮಾಡಲಾಗಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಸ್ನೇಹಿತನೇ ತನ್ನ ಜೊತೆಗಿದ್ದ ಸ್ನೇಹಿತನ ಕೊಲೆ‌ ಮಾಡಿದ್ದಾನೆ. ವಿಶಾಲ್ ಯಾದವ್ ಕೊಲೆಯಾದ ಯುವಕ. ಅಭಿಷೇಕ್ ಕೊಲೆ ಆರೋಪಿ. ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ತಲಘಟ್ಟಪುರದ ಅಂಜನಾಪುರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು.

ನಿನ್ನೆ ರಾತ್ರಿ ನಿರ್ಮಾಣ ಹಂತದ ಕಟ್ಟಡದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು ಗಲಾಟೆ ವೇಳೆ ಅಭಿಷೇಕ್ ತನ್ನ ಸ್ನೇಹಿತ ವಿಶಾಲ್​ನನ್ನು ತಳ್ಳಿದ್ದು ಕಟ್ಟಡದಿಂದ ಕೆಳಗೆ ಬಿದ್ದ ವಿಶಾಲ್ ಯಾದವ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಘಟನೆ ಬಳಿಕ ಆರೋಪಿ ಸ್ನೇಹಿತ ಅಭಿಷೇಕ್ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಾಲಕನ ಮೇಲೆ ಬೀದಿನಾಯಿಗಳ ದಾಳಿ

ಕಲಬುರಗಿ ನಗರದ ವಾರ್ಡ್ ನಂಬರ್​ 44ರ ವಿದ್ಯಾನಗರದಲ್ಲಿ ಮನೆ ಮುಂಭಾಗ ಆಟವಾಡ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕ ಸಂಚೀತ್(6) ಮೇಲೆ ಬೀದಿನಾಯಿಗಳು ದಿಢೀರ್​ ದಾಳಿ ನಡೆಸಿದ್ದು ಬಾಲಕನ ತೊಡೆ ಭಾಗಕ್ಕೆ ಗಾಯಗಳಾಗಿವೆ. ಗಾಯಗೊಂಡ ಬಾಲಕನನ್ನ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೀದಿನಾಯಿಗಳು ಅಟ್ಟಹಾಸದಿಂದ ಜನರು ಆತಂಕಕ್ಕಿಡಾಗಿದ್ದಾರೆ. ಬೀದಿನಾಯಿಗಳನ್ನು ನಿಯಂತ್ರಿಸದ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಡೆಂಗ್ಯೂ ಹೆಚ್ಚಳ: ಎರಡು ತಿಂಗಳಲ್ಲಿ 150ಕ್ಕೂ ಹೆಚ್ಚು ಕೇಸ್ ಪತ್ತೆ, ಫ್ರಿಡ್ಜ್​ಗಳಿಂದ ಅಪಾಯ

ವಿದ್ಯುತ್ ತಂತಿ ತಗುಲಿ ಮೂರು ಹಸುಗಳು ಸಾವು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಚ್​.ಹೊಸೂರು ಗ್ರಾಮದಲ್ಲಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ಮೃತಪಟ್ಟಿವೆ. ಕಳೆದ ಎರಡು ದಿನದ ಹಿಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮೂರು ಹಸುಗಳ ಮೃತಪಟ್ಟಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್