ಬೆಂಗಳೂರು, ಜೂನ್.29: ಕುಡಿದ ಅಮಲಿನಲ್ಲಿ ಕಟ್ಟಡದಿಂದ ತಳ್ಳಿ ಯುವಕನ ಕೊಲೆ (Murder) ಮಾಡಲಾಗಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಸ್ನೇಹಿತನೇ ತನ್ನ ಜೊತೆಗಿದ್ದ ಸ್ನೇಹಿತನ ಕೊಲೆ ಮಾಡಿದ್ದಾನೆ. ವಿಶಾಲ್ ಯಾದವ್ ಕೊಲೆಯಾದ ಯುವಕ. ಅಭಿಷೇಕ್ ಕೊಲೆ ಆರೋಪಿ. ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ತಲಘಟ್ಟಪುರದ ಅಂಜನಾಪುರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ರಾತ್ರಿ ನಿರ್ಮಾಣ ಹಂತದ ಕಟ್ಟಡದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು ಗಲಾಟೆ ವೇಳೆ ಅಭಿಷೇಕ್ ತನ್ನ ಸ್ನೇಹಿತ ವಿಶಾಲ್ನನ್ನು ತಳ್ಳಿದ್ದು ಕಟ್ಟಡದಿಂದ ಕೆಳಗೆ ಬಿದ್ದ ವಿಶಾಲ್ ಯಾದವ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಘಟನೆ ಬಳಿಕ ಆರೋಪಿ ಸ್ನೇಹಿತ ಅಭಿಷೇಕ್ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕಲಬುರಗಿ ನಗರದ ವಾರ್ಡ್ ನಂಬರ್ 44ರ ವಿದ್ಯಾನಗರದಲ್ಲಿ ಮನೆ ಮುಂಭಾಗ ಆಟವಾಡ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕ ಸಂಚೀತ್(6) ಮೇಲೆ ಬೀದಿನಾಯಿಗಳು ದಿಢೀರ್ ದಾಳಿ ನಡೆಸಿದ್ದು ಬಾಲಕನ ತೊಡೆ ಭಾಗಕ್ಕೆ ಗಾಯಗಳಾಗಿವೆ. ಗಾಯಗೊಂಡ ಬಾಲಕನನ್ನ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೀದಿನಾಯಿಗಳು ಅಟ್ಟಹಾಸದಿಂದ ಜನರು ಆತಂಕಕ್ಕಿಡಾಗಿದ್ದಾರೆ. ಬೀದಿನಾಯಿಗಳನ್ನು ನಿಯಂತ್ರಿಸದ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಡೆಂಗ್ಯೂ ಹೆಚ್ಚಳ: ಎರಡು ತಿಂಗಳಲ್ಲಿ 150ಕ್ಕೂ ಹೆಚ್ಚು ಕೇಸ್ ಪತ್ತೆ, ಫ್ರಿಡ್ಜ್ಗಳಿಂದ ಅಪಾಯ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಚ್.ಹೊಸೂರು ಗ್ರಾಮದಲ್ಲಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ಮೃತಪಟ್ಟಿವೆ. ಕಳೆದ ಎರಡು ದಿನದ ಹಿಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮೂರು ಹಸುಗಳ ಮೃತಪಟ್ಟಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ