ಬುದ್ಧಿವಾದ ಹೇಳಿದ್ದೇ ತಪ್ಪಾಗಿ ಹೋಯ್ತು: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ರಸ್ತೆಯಲ್ಲಿ ಮದ್ಯಪಾನ ಮಾಡಬೇಡಿ ಎಂದು ಬುದ್ಧಿವಾದ ಹೇಳಿದಕ್ಕೆ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕೆ.ಆರ್.ಪುರದ ಟಿ.ಸಿ.ಪಾಳ್ಯದಲ್ಲಿ ನಡೆದಿದೆ.
ಬೆಂಗಳೂರು: ರಸ್ತೆಯಲ್ಲಿ ಮದ್ಯಪಾನ ಮಾಡಬೇಡಿ ಎಂದು ಬುದ್ಧಿವಾದ ಹೇಳಿದಕ್ಕೆ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕೆ.ಆರ್.ಪುರದ ಟಿ.ಸಿ.ಪಾಳ್ಯದಲ್ಲಿ ನಡೆದಿದೆ.
ಕಾರಿನಲ್ಲಿ ಕುಳಿತು ಮದ್ಯಪಾನ ಮಾಡುತ್ತಾ ಕೂಗಾಟ ನಡೆಸುತ್ತಿದ್ದ ಯುವಕರ ಗುಂಪಿಗೆ ಬುದ್ಧಿ ಹೇಳಿದ ತಂದೂರ್ ರೆಸ್ಟೋರೆಂಟ್ ಮಾಲೀಕ ದೇವೇಂದ್ರ ಪಾಟಿಯಾರ್ ಮೇಲೆ ಏಕಾಏಕಿ ಶ್ರೀಕಾಂತ್ ಗೌಡ ಮತ್ತು ಆತನ ಸಹಚರರು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸದ್ಯ ಆರೋಪಿಗಳಲ್ಲೋಬ್ಬನಾದ ಶ್ರೀಕಾಂತ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದವರಿಗಾಗಿ ಹುಡುಕುತ್ತಿದ್ದಾರೆ.
ಬಿಎಂಟಿಸಿ ಡ್ರೈವರ್ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು
Published On - 2:38 pm, Sun, 20 December 20