PM Modi Bangalore Visit: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ

ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ ಮೋದಿ ಬರುವ ಸಾಧ್ಯತೆ ಕಡಿಮೆ ಇದೆ.

PM Modi Bangalore Visit: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Dec 01, 2021 | 11:24 AM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಪ್ರವಾಸ ಮುಂದೂಡಲಾಗಿದೆ. ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ.

ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ ಮೋದಿ ಬರುವ ಸಾಧ್ಯತೆ ಕಡಿಮೆ ಇದೆ. ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಮೋದಿಯವರನ್ನು ಆಹ್ವಾನಿಸಿದ್ದರು. ಆಗ ಮೋದಿ ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದ್ದರು. ಹೀಗಾಗಿ ಅದಕ್ಕೆ ನಡೆಸಿದ ತಯಾರಿ ಬಗ್ಗೆ ಸಿಎಂ ಬೊಮ್ಮಾಯಿ ಸಭೆ ನಡೆಸಿ ವಿವರ ಪಡೆದಿದ್ದರು. ಆದ್ರೆ ಈಗ ಮೋದಿ ಬೆಂಗಳೂರಿಗೆ ಬರುವ ಸಾಧ್ಯತೆ ಕಡಿಮೆ ಇದೆ.

ಪ್ರಧಾನಿ ಆಹ್ವಾನಿಸಿದ್ದ ಸಿಎಂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು 100 ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ. ಇದೇ ವೇಳೆ ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಿದೆ. 2 ಕಾರ್ಯಕ್ರಮ ಮಾಡಿ ಬರುತ್ತೇನೆ. ಡಿಸೆಂಬರ್‌ನಲ್ಲಿ 2 ದಿನಾಂಕ ಕೊಟ್ರೆ ಬರುವುದಾಗಿ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬಸವರಾಜ ಬೊಮ್ಮಾಯಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್