ದುರ್ಗಾ ದೇವಿ ಮೂರ್ತಿ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ

Traffic Advisory: ನವರಾತ್ರಿಯ ಕೊನೆ ದಿನ ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ.

ದುರ್ಗಾ ದೇವಿ ಮೂರ್ತಿ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ
ಬೆಂಗಳೂರು ಟ್ರಾಫಿಕ್​
Follow us
|

Updated on: Oct 11, 2024 | 7:36 AM

ಬೆಂಗಳೂರು, ಅಕ್ಟೋಬರ್​ 11: ನವರಾತ್ರಿಯ (Navaratri) ಕೊನೆ ದಿನ ದುರ್ಗದೇವಿ (Durgadevi) ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು (Bengaluru) ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ.

ರವಿವಾರ (ಅ.13) ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಗಾ ದೇವಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಅಂದು ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 04:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧಿಸಿದ ರಸ್ತೆಗಳು

  1.  ಕೆನ್ಸಿಂಗ್‌ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್‌ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
  2. ತಿರುವಳ್ಳವರ್ ಪ್ರತಿಮೆ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣ್ಣಸ್ವಾಮಿ ಮೊದಲಿಯರ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.

ಇದನ್ನೂ ಓದಿ: ಖಾಸಗಿ ಬಸ್​​ಗಳ ಟಿಕೆಟ್ ದರ ದುಪ್ಪಟ್ಟು, ಪ್ರಯಾಣಿಕರು ಕಂಗಾಲು; ನಿಮ್ಮೂರಿಗೆ ಎಷ್ಟು ನೋಡಿ

ಪರ್ಯಾಯ ಮಾರ್ಗ

  1. ಕ್ಲಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್‌ನಿಂದ ಗುರುದ್ವಾರ ಜಂಕ್ಷನ್​ಲ್ಲಿ ಬಲ ತಿರುವು ಪಡೆದು ಗಂಗಾಧರ ಚೆಟ್ಟಿ ರಸ್ತೆ – ಡಿಕನ್ಸನ್ ರಸ್ತೆಯಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ – ವೀಲರ್ ರಸ್ತೆ ಕಡೆಗೆ ಹೋಗಬಹುದಾಗಿದೆ.
  2. ತಿರುವಳ್ಳವ‌ರ್ ಪ್ರೇಮ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಶೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕನ್ಸನ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರ್ಸ್ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿದೆ.

ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು:

ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ – ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್ ಅನ್ನು ದಿನಾಂಕ: ಶನಿವಾರದಿಂದ ರವಿವಾರ ರಾತ್ರಿಯವರೆಗೆ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್