
ಬೆಂಗಳೂರು, ಜ.26: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ (Siddaramaiah) ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಮೂಲದ ಪರಶುರಾಮ್ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ತಮ್ಮ KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ. ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ.
ಇದನ್ನೂ ಓದಿ: Republic Day 2024: ಗಣರಾಜ್ಯೋತ್ಸವ: ಭಗವಂತ ರಾಮನಿಗೆ ಪ್ರಿಯವಾದ ಬಣ್ಣದ ಧಿರಿಸಿನಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ
ಈ ಬಾರಿ 132 ಸಾಧಕರು ಪದ್ಮ ಪ್ರಶಸ್ತಿಗಳಿಗೆ ಆಯ್ಕೆ
ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರಪತಿಗಳು ಪದ್ಮಪ್ರಶ್ತಿಗಳನ್ನು ಘೋಷಿಸಿದ್ದಾರೆ. 5 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 110 ಪದ್ಮಶ್ರೀ ಸೇರಿದಂತೆ ಒಟ್ಟು 132 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಈ ಪೈಕಿ ಕರುನಾಡಿನ 9 ಸಾಧಕರಿಗೆ ಪದ್ಮಶ್ರೀ ಲಭಿಸಿದೆ. ಇನ್ನು ಕರ್ನಾಟಕದ 9 ಸಾಧಕರಿಗೆ ಪದ್ಮಶ್ರೀ, ಒಬ್ಬರಿಗೆ ಪದ್ಮಭೂಷಣ ಸಿಕ್ಕಿದೆ.
ಕರ್ನಾಟಕದ ಪದ್ಮಶ್ರೀ ಪುರಸ್ಕೃತರು?
ಪದ್ಮವಿಭೂಷಣ (ಕರ್ನಾಟಕ)
ಇನ್ನು ಕರ್ನಾಟಕದ ಸೀತಾರಾಜಮ್ ಜಿಂದಾಲ್ ವ್ಯಾಪಾರ ಮತ್ತು ಉದ್ಯಮ ಕ್ಷೇತ್ರದ ಸಾಧನೆಗಾಗಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:46 am, Fri, 26 January 24