Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda Awards 2023: ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರ ಹೆಸರು ಪ್ರಕಟ

ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ 2023: ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡಲ್ಪಡುವ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರ ಹೆಸರು ಪ್ರಕಟಗೊಂಡಿದೆ.

Kempegowda Awards 2023: ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರ ಹೆಸರು ಪ್ರಕಟ
ಪ್ರಸಕ್ತ ಸಾಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರು
Follow us
Rakesh Nayak Manchi
|

Updated on:Jun 26, 2023 | 9:03 PM

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡಲ್ಪಡುವ ಪ್ರಸಕ್ತ ಸಾಲಿನ (2023) ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ (Kempegowda International Awards 2023) ದೇಶದ ಪ್ರತಿಷ್ಟಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜಿರೋಧ ಸಂಸ್ಥಾಪಕ ನಿತಿನ್ ಕಾಮತ್ ಅವರು ಭಾಜನರಾಗಿದ್ದಾರೆ. ಅಲ್ಲದೆ, ಜಯದೇವ ಹೃದ್ರೋಗ ಸಂಸ್ಥೆಗೂ ಪ್ರಶಸ್ತಿ ಒಲಿದು ಬಂದಿದೆ. ಕುಮಾರಕೃಪಾ ಹಳೇ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಶಸ್ತಿ ವಿಜೇತರ ಹೆಸರನ್ನು ಘೋಷಿಸಿದರು.

ಜೂನ್ 27 ರಂದು ನಡೆಯಲಿರುವ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕುದುರೆ ಮೇಲೆ ಕುಳಿತಿರುವ ಕೆಂಪೇಗೌಡರ ಪ್ರತಿಮೆಯನ್ನು ಒಳಗೊಂಡಿದೆ. ಬಿಎಲ್ ಶಂಕರ್ ನೇತೃತ್ವದಲ್ಲಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಸರ್ಕಾರ ಈ ಹಿಂದೆ ನಡೆದುಕೊಂಡು ಬಂದಂತೆ ಮುಂದುವರಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿ ಒಂದು ಸಮಿತಿ ರಚನೆ ಮಾಡಿದ್ದೆವು. ಅದರಂತೆ ಈ ಬಾರಿ ಒಂದು ಸಂಸ್ಥೆ ಮತ್ತು ಇಬ್ಬರು ಸಾಧಕರಿಗೆ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಜಯದೇವ ಹೃದ್ರೋಗ ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಯುವಕ ಜಿರೋಧ ಸಂಸ್ಥಾಪಕ ನಿತಿನ್ ಕಾಮತ್ ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಮಹಿಳೆಯರಿಗೂ ಪ್ರಶಸ್ತಿ ಕೊಡಬೇಕು ಎನ್ನುವ ನಿಟ್ಟಿನಲ್ಲಿ  ಕ್ರೀಡಾಪಟು ಅದಿತಿ ಅಶೋಕ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: Narendra Modi: ನೈಲ್ ಪ್ರಶಸ್ತಿಯೂ ಸೇರಿ 9 ವರ್ಷದಲ್ಲಿ ಪ್ರಧಾನಿ ಮೋದಿಗೆ 13 ದೇಶಗಳಿಂದ ಸಿಕ್ಕ ಅಗ್ರಮಾನ್ಯ ಪ್ರಶಸ್ತಿಗಳ ಪಟ್ಟಿ

ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಆಚರಿಸುವಂತೆ ಡಿಕೆ ಶಿವಕುಮಾರ್ ಅವರು ಈಗಾಗಲೇ ಸೂಚಿಸಿದ್ದಾರೆ. ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಆಚರಣೆಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Mon, 26 June 23