ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಾಹಿತಿ ನೀಡಲು ನಿರಾಕರಿಸಿದ ಜಿ-ಮೇಲ್ ಕಂಪನಿ

ಡಿಸೆಂಬರ್​ನಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಶಾಲೆಗಳಿಗೆ ಕೆಲ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು. ಈ ಸಂಬಂಧ VPN ಹಾಗೂ IP ಅಡ್ರೆಸ್ ಪತ್ತೆ ಮಾಡಿ ನಗರ ಪೊಲೀಸರು ಈ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಇಂಟರ್ ಪೋಲ್ ಗೆ ಪತ್ರ ಬರೆದು ಜಿ-ಮೇಲ್​ಗೆ ಮಾಹಿತಿ ನೀಡಲು ಕೇಳಿಕೊಂಡಿದ್ದು ಜಿ-ಮೇಲ್ ಕಂಪನಿ ಮಾಹಿತಿ ನೀಡಲು ನಿರಾಕರಿಸಿದೆ.

ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಾಹಿತಿ ನೀಡಲು ನಿರಾಕರಿಸಿದ ಜಿ-ಮೇಲ್ ಕಂಪನಿ
ಜಿ-ಮೇಲ್
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Feb 18, 2024 | 10:52 AM

ಬೆಂಗಳೂರು, ಫೆ.18: ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರಿಗೆ (Bengaluru Police) ಹಿನ್ನಡೆಯಾಗಿದೆ. ಇ-ಮೇಲ್ (E-Mail) ಬೆದರಿಕೆ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಕ್ಕೆ ಜಿ-ಮೇಲ್ (G-Mail)​​ ಕಂಪನಿ ನಿರಾಕರಿಸಿದೆ. ಜಿ-ಮೇಲ್ ಕಂಪನಿಗೆ ಮಾಹಿತಿ ನೀಡಲು ಇಂಟರ್​ ಪೋಲ್ ಸೂಚನೆ ನೀಡಿತ್ತು. ಆದರೆ ಇಂಟರ್ ಪೋಲ್ ನೋಟಿಸ್​ಗೂ ಕ್ಯಾರೇ ಎನ್ನದೆ ಜಿ-ಮೇಲ್ ಕಂಪನಿ ಮಾಹಿತಿ ನೀಡಲು ನಿರಾಕರಿಸಿದೆ. ಬಳಕೆದಾರರ ಮಾಹಿತಿ ಗೌಪ್ಯವಾಗಿಡುವುದು ನಮ್ಮ ಕರ್ತವ್ಯ. ಮಾಹಿತಿ ನೀಡಲ್ಲ ಎಂದಿದೆ. ಇದರಿಂದ ಬಾಂಬ್ ಬೆದರಿಕೆ ಪ್ರಕರಣ ಸಂಬಂಧ ತನಿಖೆ ನಡೆಸಲು ಪೊಲೀಸರಿಗೆ ಸಮಸ್ಯೆ ಎದುರಾಗಿದೆ.

ಡಿಸೆಂಬರ್​ನಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ನಗರ ಹಾಗೂ ಗ್ರಾಮಾಂತರ ಸೇರಿ ಒಟ್ಟು 70 ಶಾಲೆಗಳಿಗೆ ಕಿಡಿಗೇಡಿಗಳೂ ಬಾಂಬ್ ಬೆದರಿಕೆ ಹಾಕಿ ಇ-ಮೇಲ್ ಮಾಡಿದ್ದರು. ಈ ಸಂಬಂಧ ಆಯಾ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಸಂಬಂಧ ವಿಪಿಎನ್ ಹಾಗೂ ಐಪಿ ಅಡ್ರೆಸ್ ಪತ್ತೆ ಮಾಡಿದ್ದ ನಗರ ಪೊಲೀಸರು ಈ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಇಂಟರ್ ಪೋಲ್ ಗೆ ಪತ್ರ ಬರೆದಿದ್ದರು.

ಪೊಲೀಸರ ಪತ್ರಕ್ಕೆ ಸ್ಪಂದಿಸಿದ ಇಂಟರ್ ಪೋಲ್, ಜಿ-ಮೇಲ್ ಕಂಪನಿಗೆ ಮಾಹಿತಿ ನೀಡಲು ನೋಟಿಸ್ ನೀಡಿತ್ತು. ಆದರೆ ಇಂಟರ್ ಪೋಲ್ ನೋಟಿಸ್​ಗೂ ಕ್ಯಾರೇ ಎನ್ನದ ಜಿ-ಮೇಲ್ ಕಂಪನಿ ಮಾಹಿತಿ ನೀಡಲು ನಿರಾಕರಿಸಿದೆ. 2022ರಲ್ಲಿ ಕೂಡ ಮಾಹಿತಿ ನೀಡುವಂತೆ ಇಂಟರ್ ಪೋಲ್ ನೋಟಿಸ್ ನೀಡಿತ್ತು. ಆಗ ಕೂಡ ಮಾಹಿತಿ ನೀಡಲು ನಿರಾಕರಿಸಿತ್ತು. ಬಳಕೆದಾರರ ಮಾಹಿತಿಯನ್ನ ಗೌಪ್ಯವಾಗಿಡುವುದು ಕಂಪನಿಯ ಕರ್ತವ್ಯ. ಹೀಗಾಗಿ ಯಾವುದೇ ಮಾಹಿತಿ ನೀಡೋದಿಲ್ಲ ಎಂದು ಜಿ-ಮೇಲ್ ಕಂಪನಿ ಉತ್ತರಿಸಿದೆ.

ಇದನ್ನೂ ಓದಿ: ಬಾಂಬ್ ಬೆದರಿಕೆ ಕರೆಗಳು ಬಂದರೆ ಭಯ ಪಡಬೇಡಿ, ಈ ಕೆಲಸವನ್ನು ಮೊದಲು ಮಾಡಿ

ಬಳಕೆದಾರರ ವೈಯಕ್ತಿಕ ಮಾಹಿತಿ ಗೋಪ್ಯವಾಗಿಡುವುದು ಕಂಪನಿಯ ಧ್ಯೇಯ. ಯಾವುದೇ ಕಾರಣಕ್ಕೂ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಮಾಹಿತಿ ಹಂಚಿಕೆ ಸಂಬಂಧ ಯಾವುದೇ ಕಾನೂನುಗಳು ಕಂಪನಿಗೆ ಅನ್ವಯವಾಗುವುದಿಲ್ಲ ಎಂದು ಜಿ-ಮೇಲೆ ಕಂಪನಿ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

ಈ ಹಿಂದೆ 2022ರ ಏಪ್ರಿಲ್ 8ರಂದು ನಗರದ 16 ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿತ್ತು. ಈ ಪ್ರಕರಣಗಳ ತನಿಖೆ ನಡೆಸಿದ್ದ ಪೊಲೀಸರು, ವಿದೇಶದಿಂದ ಇ–ಮೇಲ್ ಬಂದಿದ್ದನ್ನು ಪತ್ತೆ ಮಾಡಿ ಕಂಪನಿಯಿಂದ ಮಾಹಿತಿ ಕೋರಿದ್ದರು. ಅವಾಗಲೂ ಕಂಪನಿಯಿಂದ ಯಾವುದೇ ಉತ್ತರ ಬಂದಿರಲಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ