AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ ಹ್ಯಾಕ್ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ 11.5ಕೋಟಿ ವಂಚನೆ ಮಾಡಿದ್ದ ಕೇಸ್​ಗೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್‌ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ ಹ್ಯಾಕ್ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
Jagadisha B
| Updated By: ಆಯೇಷಾ ಬಾನು|

Updated on: Oct 07, 2023 | 11:02 AM

Share

ಬೆಂಗಳೂರು, ಅ.07: ಬಿಟ್‌ಕಾಯಿನ್ ಹಗರಣದ (Bitcoin Case) ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು (CID Police), ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ 11.5ಕೋಟಿ ವಂಚನೆ ಮಾಡಿದ್ದ ಕೇಸ್​ಗೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್‌ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ನಂಟು ಇರುವುದು ಪತ್ತೆಯಾಗಿದೆ.

ಆರೋಪಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ 2019ರಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 11.5 ಕೋಟಿ ರೂ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಆರೋಪಿ ಶ್ರೀಕಿ ಆ ಹಣವನ್ನು ಉತ್ತರ ಭಾರತದ ಕೆಲ ವ್ಯಕ್ತಿಗಳ ಖಾತೆಗೆ ಹಾಕಿದ್ದ. ಈ ಬಗ್ಗೆ ಪೊಲೀಸರಿಗೆ ಗೊತ್ತಾಗುವಷ್ಟರಲ್ಲೇ ಹವಾಲ ಮೂಲಕ ಹಣ ವರ್ಗಾವಣೆ ಮಾಡಲಾಗಿತ್ತು. ಆರೋಪಿಗಳು ಬೆಂಗಳೂರಿಗೆ ಹವಾಲ ರೂಪದಲ್ಲಿ ಹಣ ತಲುಪಿಸಿದ್ದರು. ಪಂಜಾಬ್ ಮೂಲದ ಆರೋಪಿ ಹರ್ವಿಂದರ್ ಸಿಂಗ್, ಹವಾಲ ಮೂಲಕ ಹಣ ವರ್ಗಾವಣೆ ಮಾಡೊಕೆ ಸಹಾಯ ಮಾಡಿದ್ದ. ಆದರೆ ಎಸ್​ಐಟಿ ತನಿಖೆ ವೇಳೆ ಬಿಟ್ ಕಾಯಿನ್ ಕೇಸ್​ಗೂ ಹರ್ಮಿಂದರ್ ಸಿಂಗ್ ಗೂ ಸಂಬಂಧ ಇಲ್ಲ ಎಂಬುದು ಬೆಳಕಿಗೆ ಬಂದಿತ್ತು. ಸದ್ಯ ಪ್ರಕರಣದ ತನಿಖಾ ಹಂತದಲ್ಲಿ ಮತ್ತಿಬ್ಬರ ಬಂಧನವಾಗಿದೆ. ಪ್ರಕರಣದಲ್ಲಿ ಸದ್ಯ ಬಂಧಿಸಲ್ಪಟ್ಟ ಆರೋಪಿಗಳ ಪಾತ್ರದ ಬಗ್ಗೆ ಸಿಐಡಿ, ಎಸ್​ಐಟಿಯಿಂದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಸರ್ಕಾರದ ಗ್ಯಾರಂಟಿಗೆ ಬಲಿಪಶುಗಳಾಗುತ್ತಿರುವ ಸರಕಾರಿ ಬಸ್ ನಿರ್ವಾಹಕರು: ಶಕ್ತಿ ಯೋಜನೆ ಜಾರಿ ಬಳಿಕ 300 ಜನ ಕಂಡಕ್ಟರ್ಸ್​​​ ಸಸ್ಪೆಂಡ್

ಇನ್ನು ಮತ್ತೊಂದೆಡೆ ಬಿಟ್ ಕಾಯಿನ್ ಕೇಸ್​ಗೂ ಹರ್ಮಿಂದರ್ ಸಿಂಗ್ ಗೂ ಸಂಬಂಧ ಇಲ್ಲ ಎಂಬುದು ಬೆಳಕಿಗೆ ಬಂದಿದ್ದು ಇ-ಪ್ರೊಕ್ಯೂರ್‌ಮೆಂಟ್‌ ವೆಬ್‌ಸೈಟ್ ಹ್ಯಾಕ್ ಪ್ರಕರಣದಲ್ಲಿ ಹರ್ವೀಂದರ್ ಸಿಂಗ್ ಸೇರಿದಂತೆ ಹಲವರು ಭಾಗಿಯಾಗಿರುವ ಮಾಹಿತಿ ಸಿಕ್ಕಿದೆ. ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಈ ಆರೋಪಿಗಳು ಸಹಾಯ ಮಾಡಿದ್ದರು ಎನ್ನಲಾಗುತ್ತಿದೆ. ಸದ್ಯ ಹರ್ವೀಂದರ್ ಸಿಂಗ್‌ನನ್ನು ಬಂಧಿಸಿ SIT ಹೆಚ್ಚಿನ ವಿಚಾರಣೆ ನಡೆಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ 7 ಕಡೆ SIT ದಾಳಿ

ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ 7 ಕಡೆ SIT ದಾಳಿ ನಡೆದಿದೆ. ​ಬೆಂಗಳೂರಿನ ಬೊಮ್ಮನಹಳ್ಳಿ, ಕೋರಮಂಗಲ ಸೇರಿದಂತೆ ಏಳು ಕಡೆ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಎಸ್​ಐಟಿ ಪರಿಶೀಲನೆ ನಡೆಸಿದೆ. ಈ ಹಿಂದೆ ಬಿಟ್ ಕಾಯಿನ್ ಕೇಸ್‌ನ ಬಗ್ಗೆ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ಒಟ್ಟು ಐವರಿಗೆ ಸಂಬಂಧಿಸಿದಂತೆ ಏಳು ಕಡೆ ದಾಳಿ ನಡೆದಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ