AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಲಮಂಡಳಿ ನಿವೃತ್ತ ಮುಖ್ಯ ಎಂಜಿನಿಯರ್ ಆಸ್ತಿ ಮುಟ್ಟುಗೋಲು

ಲೋಕಾಯುಕ್ತ ಪೊಲೀಸರು ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿ ತನಿಖೆ ನಡೆಸುವಂತೆ ವಿನಂತಿಸಿ ಪತ್ರ ಬರೆದಿದ್ದರು.

ಬೆಂಗಳೂರು ಜಲಮಂಡಳಿ ನಿವೃತ್ತ ಮುಖ್ಯ ಎಂಜಿನಿಯರ್ ಆಸ್ತಿ ಮುಟ್ಟುಗೋಲು
ಜಾರಿ ನಿರ್ದೇಶನಾಲಯ
TV9 Web
| Edited By: |

Updated on: Oct 21, 2021 | 11:11 PM

Share

ಬೆಂಗಳೂರು: ಬೆಂಗಳೂರು ಜಲ ಮಂಡಳಿ (BWSSB) ನಿವೃತ್ತ ಮುಖ್ಯ ಎಂಜಿನಿಯರ್​ ಎಸ್.ಎಂ.ಬಸವರಾಜ್ ಅವರಿಗೆ ಸೇರಿದ ₹ 7.48 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 2018ರಲ್ಲಿ ಇವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿ ತನಿಖೆ ನಡೆಸುವಂತೆ ವಿನಂತಿಸಿ ಪತ್ರ ಬರೆದಿದ್ದರು.

ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ₹ 7.48 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. 3.41 ಕೆಜಿ ಚಿನ್ನ, ವಜ್ರದ ಆಭರಣಗಳು, 2 ನಿವೇಶನಗಳು, ವಾಣಿಜ್ಯ ಸಂಕೀರ್ಣ ಹಾಗೂ ಬೆಂಗಳೂರು ಮತ್ತು ಮೈಸೂರಿನಲ್ಲಿ ಆರು ವಸತಿ ಗೃಹಗಳು ಇದರಲ್ಲಿ ಸೇರಿವೆ. ಎಸ್.ಎಂ.ಬಸವರಾಜ್ ಅವರು ತನ್ನ ಅತ್ತೆ ಮತ್ತು ಕುಟುಂಬದ ಇತರ ಕುಟುಂಬದ ಸದಸ್ಯರ ಹೆಸರಲ್ಲಿಯೂ ಸ್ಥಿರ ಮತ್ತು ಚರಾಸ್ತಿಗಳನ್ನು ಖರೀದಿ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಬೆಂಗಳೂರು, ಮೈಸೂರಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.

ಎಸಿಬಿ ಬಲೆಗೆ ಕಂಪ್ಯೂಟರ್ ಆಪರೇಟರ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿ.ವಿ.ಪುರ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ನರೇಂದ್ರ ಕೆರೆ ಹೂಳೆತ್ತುವ ಕಾಮಗಾರಿ ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಓಂಕಾರಪ್ಪ ಎಂಬುವವರಿಂದ ನರೇಂದ್ರ ₹ 5 ಸಾವಿರ ಲಂಚ ಪಡೆಯುತ್ತಿದ್ದರು. ಎಸಿಬಿ ಎಸ್​ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಇದನ್ನೂ ಓದಿ: ಲಂಚ ಕೇಳಿದರೆ ಪೊಲೀಸರಿಗೆ ದೂರು ಕೊಡಿ: ಗೃಹ ಸಚಿವ ಆರಗ ಜ್ಞಾನೇಂದ್ರ ಇದನ್ನೂ ಓದಿ: ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!