ಬೆಂಗಳೂರು: ಬೆಂಗಳೂರು ಜಲ ಮಂಡಳಿ (BWSSB) ನಿವೃತ್ತ ಮುಖ್ಯ ಎಂಜಿನಿಯರ್ ಎಸ್.ಎಂ.ಬಸವರಾಜ್ ಅವರಿಗೆ ಸೇರಿದ ₹ 7.48 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 2018ರಲ್ಲಿ ಇವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿ ತನಿಖೆ ನಡೆಸುವಂತೆ ವಿನಂತಿಸಿ ಪತ್ರ ಬರೆದಿದ್ದರು.
ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ₹ 7.48 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. 3.41 ಕೆಜಿ ಚಿನ್ನ, ವಜ್ರದ ಆಭರಣಗಳು, 2 ನಿವೇಶನಗಳು, ವಾಣಿಜ್ಯ ಸಂಕೀರ್ಣ ಹಾಗೂ ಬೆಂಗಳೂರು ಮತ್ತು ಮೈಸೂರಿನಲ್ಲಿ ಆರು ವಸತಿ ಗೃಹಗಳು ಇದರಲ್ಲಿ ಸೇರಿವೆ. ಎಸ್.ಎಂ.ಬಸವರಾಜ್ ಅವರು ತನ್ನ ಅತ್ತೆ ಮತ್ತು ಕುಟುಂಬದ ಇತರ ಕುಟುಂಬದ ಸದಸ್ಯರ ಹೆಸರಲ್ಲಿಯೂ ಸ್ಥಿರ ಮತ್ತು ಚರಾಸ್ತಿಗಳನ್ನು ಖರೀದಿ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಬೆಂಗಳೂರು, ಮೈಸೂರಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಎಸಿಬಿ ಬಲೆಗೆ ಕಂಪ್ಯೂಟರ್ ಆಪರೇಟರ್
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿ.ವಿ.ಪುರ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ನರೇಂದ್ರ ಕೆರೆ ಹೂಳೆತ್ತುವ ಕಾಮಗಾರಿ ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಓಂಕಾರಪ್ಪ ಎಂಬುವವರಿಂದ ನರೇಂದ್ರ ₹ 5 ಸಾವಿರ ಲಂಚ ಪಡೆಯುತ್ತಿದ್ದರು. ಎಸಿಬಿ ಎಸ್ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಇದನ್ನೂ ಓದಿ: ಲಂಚ ಕೇಳಿದರೆ ಪೊಲೀಸರಿಗೆ ದೂರು ಕೊಡಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಇದನ್ನೂ ಓದಿ: ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್ಡಿಎ