Bengaluru: 20 ಲಕ್ಷ ರೂ. ಲಂಚ ಪಡೆದು ಸಿಕ್ಕಿಬಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿ; ಇ.ಡಿಯಿಂದ ಹಣ ಜಪ್ತಿ

ದೆಹಲಿ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಮೂಲಕ ದಿಲೀಪ್ ಬಿಲ್ಡ್‌ಕಾನ್ ಪ್ರೈವೇಟ್ ಲಿಮಿಟೆಡ್‌ನ ಅಧಿಕಾರಿಗಳಿಂದ ಅಕೀಲ್ ಅಹ್ಮದ್ ಹಣ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಅಕೀಲ್ ಮತ್ತು ಹಣವನ್ನು ವಶಕ್ಕೆ ಪಡೆದಿದ್ದರು.

Bengaluru: 20 ಲಕ್ಷ ರೂ. ಲಂಚ ಪಡೆದು ಸಿಕ್ಕಿಬಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿ; ಇ.ಡಿಯಿಂದ ಹಣ ಜಪ್ತಿ
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: Feb 23, 2023 | 8:07 AM

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ಲಂಚ ಪಡೆದು ಸಿಕ್ಕಿ ಬಿದ್ದಿದ್ದು ಜಾರಿ ನಿರ್ದೇಶನಾಲಯದ(ಇ.ಡಿ.) ಅಧಿಕಾರಿಗಳು 20 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದಾರೆ. ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿ ಅಕೀಲ್ ಅಹಮದ್ ಅವರ ಕಚೇರಿಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪತ್ತೆಯಾದ ₹20 ಲಕ್ಷ ಮೊತ್ತದ ಹಣವನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಭಾರತೀಯ ದಂಡ ಸಂಹಿತೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ ದಾಖಲಿಸಿದ ಎಫ್‌ಐಆರ್‌ನ ಆಧಾರದ ಮೇಲೆ ಇಡಿ ಪಿಎಂಎಲ್‌ಎ ಅಡಿಯಲ್ಲಿ ತನಿಖೆಯನ್ನು ಆರಂಭಿಸಿತ್ತು. ತನಿಖೆಯ ಸಂದರ್ಭದಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ)ದ ಬೆಂಗಳೂರು ಪ್ರಾದೇಶಿಕ ಅಧಿಕಾರಿ ಅಕೀಲ್ ಅಹ್ಮದ್, ಬೆಂಗಳೂರಿನ ದಿಲೀಪ್ ಬಿಲ್ಡ್‌ಕಾನ್ ಪ್ರೈವೇಟ್ ಲಿಮಿಟೆಡ್‌ನ (ಡಿಬಿಎಲ್) ಜನರಲ್ ಮ್ಯಾನೇಜರ್ ರತ್ನಾಕರನ್ ಸಜಿಲಾಲ್ ಅವರಿಂದ ಕಾನೂನುಬಾಹಿರವಾಗಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ. ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ಯಾಕೇಜ್ 1 ಮತ್ತು 2ರ ಯೋಜನೆಗೆ ಅನುಮತಿ ನೀಡಲು ಅಕೀಲ್ ಅವರು ರತ್ನಾಕರನ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರಿದ ಅನಧಿಕೃತ ಶೆಡ್​ ತೆರವು ಕಾರ್ಯಾಚರಣೆ; 20 ಕೋಟಿ ರೂ. ಮೌಲ್ಯದ ಆಸ್ತಿ ಮರುವಶ

ಘಟನೆ ಹಿನ್ನೆಲೆ

ಡಿಸೆಂಬರ್ 2022ರಲ್ಲಿ ದೆಹಲಿ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಮೂಲಕ ದಿಲೀಪ್ ಬಿಲ್ಡ್‌ಕಾನ್ ಪ್ರೈವೇಟ್ ಲಿಮಿಟೆಡ್‌ನ ಅಧಿಕಾರಿಗಳಿಂದ ಅಕೀಲ್ ಅಹ್ಮದ್ ಹಣ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಅಕೀಲ್ ಮತ್ತು ಹಣವನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ತನಿಖೆ ನಡೆಸಿದ ಇಡಿ ಸದ್ಯ 20 ಲಕ್ಷ ರೂ. ಜಪ್ತಿ ಮಾಡಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:07 am, Thu, 23 February 23

Web contact

TV9 Kannada

Read More
Follow Us