ಯುಬಿ ಸಿಟಿಯ ಕಿಂಗ್ ಫಿಶರ್ ಟವರ್ ಸೇರಿ 11 ಕಡೆ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ

ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳಲ್ಲಿ ಸೇರಿದಂತೆ 11 ಸ್ಥಳಗಳಲ್ಲಿ ಇಡಿ ದಾಳಿ ನಡೆದಿದೆ.

ಯುಬಿ ಸಿಟಿಯ ಕಿಂಗ್ ಫಿಶರ್ ಟವರ್ ಸೇರಿ 11 ಕಡೆ  ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: ಆಯೇಷಾ ಬಾನು

Updated on:Jun 24, 2024 | 2:31 PM

ಬೆಂಗಳೂರು, ಜೂನ್.24: ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ನಡೆಯುತ್ತಿದೆ. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಾಳಿ ನಡೆಸಿದೆ.

ಸೈಟ್ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಹಲವು ದೂರುಗಳು ದಾಖಲಾದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಡುಗೆ ಸಹಾಯಕಿ ಹುದ್ದೆಗೆ ₹50 ಸಾವಿರ ಲಂಚ!

ಅಡುಗೆ ಸಹಾಯಕಿ ಹುದ್ದೆಗೆ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಸದಸ್ಯೆ ವಿರುದ್ಧ ಆರೋಪ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಮುಂಡಗೋಡು ಪಟ್ಟಣ ಪಂಚಾಯಿತಿ ಸದಸ್ಯೆ ಬಿ.ಬಿ.ಜಾನ್ ಮಲ್ಲನ್ನವರ್, ಮಾರಿಕಾಂಬನಗರದ ಸರ್ಕಾರಿ ಶಾಲೆ ಅಡುಗೆ ಸಹಾಯಕಿ ನೇಮಕಾತಿಗಾಗಿ ಲಂಚಕ್ಕೆ ಕೇಳಿದ್ದಾರೆ ಎನ್ನಲಾಗ್ತಿರೋ ಫೋನ್ ಸಂಭಾಷಣೆ ಆಡಿಯೋ ವೈರಲ್ ಆಗ್ತಿದೆ.

ಇದನ್ನೂ ಓದಿ: ಕೊಪ್ಪಳದ 415 ಶಾಲಾ ಕೊಠಡಿಗಳಿಗೆ ಬೇಕಿದೆ ದುರಸ್ತಿ ಭಾಗ್ಯ!

ಪ್ರವಾಸಿಗರ ಹಲ್ಲೆ ಮಾಡಿದ ಇಬ್ಬರು ದುಷ್ಕರ್ಮಿಗಳು

ಕೊಡಗು ಜಿಲ್ಲೆಯ ಮಾದಾಪುರ ಬಳಿಯ ಕೋಟೆಬೆಟ್ಟ ರಸ್ತೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ್ದಾರೆ. ಪುತ್ತೂರಿನಿಂದ ಮಾದಾಪುರಕ್ಕೆ ಪ್ರವಾಸಿಗರು ಬಂದಿದ್ದರು. ಆಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವಾಸಿಗರ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದಿದ್ದಾರೆ. ಹಲ್ಲೆ ಮಾಡಿ ಸ್ಥಳದಲ್ಲೇ ಬೈಕ್ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಪ್ರವಾಸಿಗರು ಮಾದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:05 pm, Mon, 24 June 24