Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಪ್ರಕರಣ ರದ್ದು: ನ್ಯಾಯಮೂರ್ತಿಗಳಿಗೆ ಸಾಷ್ಟಾಂಗ ನಮಸ್ಕಾರ ಎಂದ ಡಿಕೆಶಿ

ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನಲೆ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್​ಗೆ (DK Shivakumar) ಮಂಗಳವಾರ (ಮಾ.05) ಸುಪ್ರೀಂ ಕೋರ್ಟ್​ (Supreme Court) ಬಿಗ್ ರಿಲೀಫ್ ನೀಡಿದ್ದು, ಈ ಕುರಿತು ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​, ‘ಸುಪ್ರೀಂಕೋರ್ಟ್‌ ಹಾಗೂ ನ್ಯಾಯಮೂರ್ತಿಗಳಿಗೆ ಸಾಷ್ಟಾಂಗ ನಮಸ್ಕಾರ ಎಂದಿದ್ದಾರೆ.

ಇಡಿ ಪ್ರಕರಣ ರದ್ದು: ನ್ಯಾಯಮೂರ್ತಿಗಳಿಗೆ ಸಾಷ್ಟಾಂಗ ನಮಸ್ಕಾರ ಎಂದ ಡಿಕೆಶಿ
ಡಿಕೆ ಶಿವಕುಮಾರ್​
Follow us
Anil Kalkere
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 05, 2024 | 3:55 PM

ಬೆಂಗಳೂರು, ಮಾ.05: ಇಡಿ ಪ್ರಕರಣದಲ್ಲಿ(ED Case) ಬಿಗ್ ರಿಲೀಫ್ ವಿಚಾರವಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar)​, ‘ಸುಪ್ರೀಂಕೋರ್ಟ್‌ ಹಾಗೂ ನ್ಯಾಯಮೂರ್ತಿಗಳಿಗೆ ಸಾಷ್ಟಾಂಗ ನಮಸ್ಕಾರ ಎಂದಿದ್ದಾರೆ. ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ‘ಸುಪ್ರೀಂ ರಿಲೀಫ್ ನೀಡಿದ ಮಾಹಿತಿ ಸಿಕ್ಕಿದ್ದು, ಕಷ್ಟದ ಜೀವನದ ದೊಡ್ಡ ಸಂತೋಷದ ಇವತ್ತು. ವಕೀಲರುಗಳಿಂದ ಫೋನಿನ ಸುರಿಮಳೆ ಬರುತ್ತಿದೆ. ನಾನೇನೂ ತಪ್ಪು ಮಾಡಿಲ್ಲ. ಇಡಿ ಅಧಿಕಾರಿಗಳಿಂದ ಕ್ರಮ ಆಗಿದ್ದು ತಪ್ಪು ಎನ್ನುವ ಮಾಹಿತಿ ಗೊತ್ತಾಗ್ತಿದೆ. ಈಗಲೂ ಸಿಬಿಐನವರು ಏನೇನು ಮಾಡ್ತಿದ್ದಾರೆಂದು ಸದ್ಯದಲ್ಲೇ ಹೇಳುವೆ ಎಂದರು.

ಈಗಲೂ ಸಿಬಿಐನವರು ನನ್ನ ಸುತ್ತಮುತ್ತಲಿನವರಿಗೆ ಕಿರುಕುಳ ನೀಡ್ತಿದ್ದಾರೆ

‘ಸುರ್ಜೇವಾಲ ಸೇರಿದಂತೆ ಎಲ್ಲರೂ ಸುಪ್ರೀಂಕೋರ್ಟ್‌ನಲ್ಲಿ ಇದ್ದರು. ಸುಪ್ರೀಂಕೋರ್ಟ್‌ನ ತೀರ್ಪಿನ ಮುಂದೆ ಮತ್ತೇನಿದೆ. ಜೈಲಿಗೆ ಹೋಗುವಾಗಲೂ ಆತ್ಮವಿಶ್ವಾಸದಿಂದಲೇ ಹೋಗಿದ್ದೆ, ಈಗಲೂ ಅದೇ ಆತ್ಮ ವಿಶ್ವಾಸದಲ್ಲಿದ್ದೇನೆ. ಸಿಬಿಐನವರು ಈಗಲೂ ನನ್ನ ಸುತ್ತಮುತ್ತಲಿನವರಿಗೆ ಕಿರುಕುಳ ನೀಡುತ್ತಿದ್ದಾರೆ. ಆದರೆ, ಯಾರೂ ಕೂಡ ವಿರೋಧಿಗಳಿಲ್ಲ, ಎಲ್ಲ‌ಾ ಪ್ರಕೃತಿಯ ನಿಯಮ ಎಂದಿದ್ದಾರೆ. ಇದೇ ವೇಳೆ ಕಲ್ಲು ಕಡಿದ್ರೆ ಆಕೃತಿ, ಪೂಜಿಸಿದ್ರೆ ಸಂಸ್ಕೃತಿ ಎಂಬ ಗಾದೆ ಮಾತು ಹೇಳಿದ್ದಾರೆ.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಘಟನೆ ವಿವರ

ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ನಿವಾಸದಲ್ಲಿ 2018 ಆಗಸ್ಟ್ ತಿಂಗಳಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಪ್ರಮಾನದ ನಗದು ಪತ್ತೆಯಾಗಿತ್ತು. ಆಗ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಅನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಇದರ ವಿರುದ್ಧ ಡಿಕೆ ಶಿವಕುಮಾರ್  ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Tue, 5 March 24

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ