AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್​​ ಪ್ರಕರಣ: ತನಿಖೆಗಾಗಿ ಖುದ್ದು ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿ ಪ್ರದೇಶಗಳ ಮೇಲೆ ಇಡಿ ದಾಳಿ ಬೆನ್ನಲ್ಲೇ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಚಿವರ ಮನೆಯಲ್ಲಿ ನಗದು ಮತ್ತು ವಿದೇಶಿ ಕರೆನ್ಸಿ ಪತ್ತೆಯಾಗಿದ್ದ ಹಿನ್ನೆಲೆ, ಪ್ರಕರಣದ ಪರಿಶೀಲನೆಗೆ ಇಡಿ ನಿರ್ದೇಶಕ ರಾಹುಲ್ ನವೀನ್ ನೇತೃತ್ವದ ತಾಂತ್ರಿಕ ತಂಡ ಬೆಂಗಳೂರಿಗೆ ಆಗಮಿಸಿದ್ದು, ಪ್ರಮುಖ ಕಡತಗಳನ್ನು ಪರಿಶೀಲಿಸಲಿದೆ. ಜೊತಗೆ ಕೆಪಿಎಸ್ಸಿ ಹಗರಣ, ಮೂಡಾ ಕೇಸ್ ಮತ್ತು ವಾಲ್ಮೀಕಿ ಪ್ರಕರಣಗಳ ಸಂಬಂಧವೂ ಮಾಹಿತಿ ಕಲೆಗೆ ಮುಂದಾಗಿದೆ.

ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್​​ ಪ್ರಕರಣ: ತನಿಖೆಗಾಗಿ ಖುದ್ದು ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್
ಸಚಿವ ಸತೀಶ್ ಜಾರಕಿಹೊಳಿImage Credit source: Satish Jarkiholi Facebook
ಪ್ರದೀಪ್​ ಚಿಕ್ಕಾಟಿ
| Edited By: |

Updated on:Sep 13, 2026 | 9:43 AM

Share

ಬೆಂಗಳೂರು, ಸೆಪ್ಟೆಂಬರ್​​ 13: ಸಚಿವ ಸತೀಶ್ ಜಾರಕಿಹೊಳಿ ಮೇಲೆ ದಾಳಿ ಕೇಸ್ ಸಂಬಂಧ ಇಡಿ ನಿರ್ದೇಶಕ ರಾಹುಲ್ ಖುದ್ದಾಗಿ ಪರಿಶೀಲನೆ ನಡೆಸಲಿದ್ದು, ನಿನ್ನೆಯೇ ದೆಹಲಿಯಿಂದ ಬೆಂಗಳೂರಿಗೆ ಇಡಿಯ ನಿರ್ದೇಶಕರ ನೇತೃತ್ವದ ತಾಂತ್ರಿಕ ಸಮಿತಿ ತಂಡ ಆಗಮಿಸಿದೆ. ಇವರು 2 ದಿನ ಬೆಂಗಳೂರಿನಲ್ಲೇ ಉಳಿಯಲಿದ್ದು, ಹಿರಿಯ ಅಧಿಕಾರಿಗಳಿಂದ ಇಂದು ಮತ್ತು ನಾಳೆ ದಾಖಲೆಗಳ ಪರಿಶೀಲನೆ ನಡೆಯಲಿದೆ. ಜಾರಕಿಹೊಳಿ ಅವರ ನಿವಾಸದಲ್ಲಿ 3.3 ಕೋಟಿ ರೂಪಾಯಿ ನಗದು ಮತ್ತು ವಿದೇಶಿ ಕರೆನ್ಸಿ ಪತ್ತೆಯಾಗಿದ್ದ ಹಿನ್ನೆಲೆ ಯಾವುದೇ ಕ್ಷಣದಲ್ಲಿ ಇಡಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕುತೂಹಲ ಮೂಡಿಸಿದ ಇಡಿ ತಂಡಡ ನಡೆ

ಇಡಿ ತನಿಖೆ ನಡೆಸುತ್ತಿರುವ ಪ್ರಕರಣಗಳ ಪರಿಶೀಲನೆ ಸಂಬಂಧ ಸ್ವತಃ ಇಡಿ ನಿರ್ದೇಶಕರೇ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿರೋದೀಗ ಭಾರಿ ಕುತೂಹಲ ಮೂಡಿಸಿದೆ. ಸತೀಶ್​​ ಜಾರಕೊಹೊಳಿ ಪ್ರಕರಣ ಸಂಬಂಧ ವಿದೇಶಿ ಹೂಡಿಕೆ, ಗಣಿ ಕಂಪನಿಗಳಲ್ಲಿ ಪಾಲುದಾರಿಕೆಯ ಬಗ್ಗೆ ತಾಂತ್ರಿಕ ತಂಡ ಮಾಹಿತಿ ಕಲೆಹಾಕಲಿದೆ. ಫೆಮಾ ಕಾಯ್ದೆ ಉಲ್ಲಂಘನೆ ಸ್ವರೂಪದ ಬಗ್ಗೆಯೂ ಕಡತಗಳ ಪರಿಶೀಲನೆ ನಡೆಯಲಿದೆ. ಇವುಗಳ ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ಕಿಕ್ ಬ್ಯಾಕ್, ಗುತ್ತಿಗೆ ಕಂಪನಿಯಿಂದ ಹಣ ಪಡೆದ ಆರೋಪಗಳ ಸಂಬಂಧವೂ ದಾಖಲೆಗಳ ಪರಿಶೀಲನೆ ನಡೆಸಲಿದೆ. ಜೊತೆಗೆ ಕೆಪಿಎಸ್ಸಿ ಹಗರಣ, ಮೂಡಾ ಕೇಸ್ ಮತ್ತು ವಾಲ್ಮೀಕಿ ಪ್ರಕರಣಗಳ ಪ್ರಗತಿಯನ್ನೂ ಸಹ ರಾಹುಲ್ ನವೀನ್ ಖುದ್ದಾಗಿ ಪರಿಶೀಲಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಇಡಿ ಅಧಿಕಾರಿಗಳಿಗೆ ದೂರು ಕೊಟ್ಟವರು ಯಾರೆಂದು ಗೊತ್ತಿದೆ; ಸಿಎಂಗೆ ಹೇಳಿದ್ದೇನೆ ಎಂದ ಸಚಿವ ಸತೀಶ್​ ಜಾರಕಿಹೊಳಿ

ಈ ಹಿಂದೆ ವಾಲ್ಮೀಕಿ ನಿಗಮ ಹಗರಣ ಸಂಬಂಧ ರಾಜ್ಯ ಸರ್ಕಾರದ ಎಸ್‌ಐಟಿ ವರದಿಯಲ್ಲಿ ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ಸಿಕ್ಕಿತ್ತಾದರೂ, ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ (ED) ನಡೆಸಿದ ಪ್ರತ್ಯೇಕ ತನಿಖೆಗಳಲ್ಲಿ ನಾಗೇಂದ್ರ ಅವರೇ ಈ ಹಗರಣದ ಮುಖ್ಯ ಸೂತ್ರಧಾರಿ ಎಂದು ಆರೋಪಿಸಿ, ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಹೀಗಾಗಿ ಸಚಿವ ಸತೀಶ್​​ ಜಾರಹೊಳಿ​ ಅವರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳ ನಡೆ ಭಾರಿ ಕುತೂಹಲ ಮೂಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:35 am, Sun, 13 September 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್