AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇ.ಡಿ, ತನ್ನ ಗಮನಕ್ಕೆ ಬರುವ ಪ್ರತಿಯೊಂದು ಪ್ರಕರಣವನ್ನೂ ತನಿಖೆ ಮಾಡುವ ಸೂಪರ್ ಪೊಲೀಸ್ ಸಂಸ್ಥೆ ಅಲ್ಲ’: ಕರ್ನಾಟಕ ಹೈಕೋರ್ಟ್​

ಇ.ಡಿ ತನ್ನ ಗಮನಕ್ಕೆ ಬರುವ ಪ್ರತಿಯೊಂದು ಪ್ರಕರಣವನ್ನು ತನಿಖೆ ಮಾಡಲು ಸೂಪರ್ ಪೊಲೀಸ್ ಸಂಸ್ಥೆಯಲ್ಲ ಎಂದು ತಿಳಿಸಿರುವ ಕರ್ನಾಟಕ ಹೈಕೋರ್ಟ್, ಶಾಸಕ ಕೆ.ವೈ. ನಂಜೇಗೌಡ ವಿರುದ್ಧದ ಕೋಮುಲ್ ಪ್ರಕರಣದ ಇಡಿ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ. ಇ.ಡಿ.ಯು ತನ್ನ ವ್ಯಾಪ್ತಿಯನ್ನು ಮೀರಿ ಖಾಸಗಿ ದೂರು ದಾಖಲಿಸಲು ಮುಂದಾಗಿರುವುದನ್ನೂ ಹೈಕೋರ್ಟ್ ತೀವ್ರವಾಗಿ ಆಕ್ಷೇಪಿಸಿದೆ.

'ಇ.ಡಿ, ತನ್ನ ಗಮನಕ್ಕೆ ಬರುವ ಪ್ರತಿಯೊಂದು ಪ್ರಕರಣವನ್ನೂ ತನಿಖೆ ಮಾಡುವ ಸೂಪರ್ ಪೊಲೀಸ್ ಸಂಸ್ಥೆ ಅಲ್ಲ': ಕರ್ನಾಟಕ ಹೈಕೋರ್ಟ್​
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on: Nov 08, 2026 | 11:36 AM

Share

ಬೆಂಗಳೂರು, ನವೆಂಬರ್​​ 08: ತನ್ನ ಗಮನಕ್ಕೆ ಬರುವ ಪ್ರತಿಯೊಂದು ಪ್ರಕರಣವನ್ನೂ ತನಿಖೆ ಮಾಡುವ ‘ಸೂಪರ್ ಪೊಲೀಸ್’ ಸಂಸ್ಥೆ ಜಾರಿ ನಿರ್ದೇಶನಾಲಯದ (ED) ಅಲ್ಲ ಎಂದು ಕರ್ನಾಟಕ ಹೈಕೋರ್ಟ್​​ ಹೇಳಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ನಿಗದಿಪಡಿಸಿರುವ ಕಾನೂನು ಪ್ರಕ್ರಿಯೆಯನ್ನು ಬದಿಗೊತ್ತಿ, ಸ್ವತಂತ್ರವಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಅಡಿಪಾಯ ಹಾಕುವ ಅಧಿಕಾರ ಇ.ಡಿಗೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪಿಎಂಎಲ್‌ಎ ಅಡಿಯಲ್ಲಿ ಇ.ಡಿ.ಗೆ ಇರುವ ಅಧಿಕಾರಗಳು ‘ಮೂಲಭೂತ ಅಧಿಕಾರಗಳಲ್ಲ, ಬದಲಿಗೆ ಇತರ ತನಿಖಾ ಸಂಸ್ಥೆಗಳ ಕ್ರಮಗಳ ಮೇಲೆ ಅವಲಂಬಿತವಾಗಿರುವ ಅಧಿಕಾರಗಳು’ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಆಧಾರವಾಗಿರುವ ಮೂಲ ಅಪರಾಧ ಅಥವಾ ಕಾಯ್ದೆಯ ಶೆಡ್ಯೂಲ್‌ನಲ್ಲಿರುವ ಅಪರಾಧವೇ ಅಸ್ತಿತ್ವದಲ್ಲಿಲ್ಲದಿದ್ದರೆ, ಪಿಎಂಎಲ್‌ಎ ಅಡಿಯಲ್ಲಿನ ವಿಚಾರಣೆಯೂ ಮುಂದುವರಿಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಹಲವು ಅರ್ಜಿದಾರರ ವಿರುದ್ಧ ಇ.ಡಿ. ಆರಂಭಿಸಿದ್ದ ಪ್ರಕರಣದ ಮಾಹಿತಿ ವರದಿ ಹಾಗೂ ಅದರ ಆಧಾರದ ಮೇಲೆ ಕೈಗೊಂಡಿದ್ದ ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ರದ್ದುಗೊಳಿಸುವ ವೇಳೆ ನ್ಯಾಯಾಲಯ ಈ ರೀತಿ ಹೇಳಿದೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (ಕೋಮುಲ್)ದಲ್ಲಿ ಸಿಬ್ಬಂದಿ ನೇಮಕಾತಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇ.ಡಿ. ನಡೆಸಿದ್ದ ತನಿಖೆಯಿಂದ ಈ ಅರ್ಜಿಗಳು ಉದ್ಭವಿಸಿದ್ದವು. ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಹಾಗೂ ಅವರೊಂದಿಗೆ ಸಂಬಂಧ ಹೊಂದಿರುವ ಕೆಲವರು ಸಲ್ಲಿಸಿದ್ದ ಅರ್ಜಿಗಳ ಪರವಾಗಿ ವಕೀಲ ಮಯಾಂಕ್ ಜೈನ್ ವಾದ ಮಂಡಿಸಿದ್ದರು. ಇ.ಡಿ. ದಾಖಲಿಸಿದ್ದ ಇಸಿಐಆರ್, ಪಿಎಂಎಲ್‌ಎ ಅಡಿಯಲ್ಲಿನ ಮುಂದಿನ ಪ್ರಕ್ರಿಯೆಗಳು ಹಾಗೂ ಖಾಸಗಿ ದೂರನ್ನು ಅರ್ಜಿದಾರರು ಪ್ರಶ್ನಿಸಿದ್ದರು.

‘ಇ.ಡಿ ಅಧಿಕಾರ ಇತರ ತನಿಖಾ ಸಂಸ್ಥೆಗಳ ಕ್ರಮಗಳ ಮೇಲೆ ಅವಲಂಬಿತ’

ಅಕ್ರಮ ಹಣ ವರ್ಗಾವಣೆ ಅಪರಾಧಕ್ಕೆ ಸಂಬಂಧಿಸಿದ ವಿಚಾರಣೆಯು ಕಾಯ್ದೆಯಡಿ ನಿಗದಿಪಡಿಸಿರುವ ಮೂಲ ಅಪರಾಧದ ಅಸ್ತಿತ್ವದಿಂದ ಪ್ರತ್ಯೇಕವಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಕೀಲ ಮಯಾಂಕ್ ಜೈನ್ ಮಂಡಿಸಿದ ವಾದಗಳನ್ನು ಪರಿಗಣಿಸಿದ ನ್ಯಾಯಾಲಯ, ಶೆಡ್ಯೂಲ್ಡ್ ಅಪರಾಧಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಕಾನೂನು ಜಾರಿ ಸಂಸ್ಥೆಯು ಎಫ್‌ಐಆರ್ ಅಥವಾ ಅಧಿಕೃತ ಕ್ರಿಮಿನಲ್ ದೂರು ದಾಖಲಿಸಿದ ನಂತರವಷ್ಟೇ ಪಿಎಂಎಲ್‌ಎ ಅಡಿಯಲ್ಲಿ ಇ.ಡಿ.ಯ ಪಾತ್ರ ಆರಂಭವಾಗುತ್ತದೆ ಎಂದು ಹೇಳಿದೆ. ಇ.ಡಿ.ಯ ಅಧಿಕಾರಗಳು ಮೂಲಭೂತವಾಗಿರದೆ, ಇತರ ತನಿಖಾ ಸಂಸ್ಥೆಗಳ ಕ್ರಮಗಳ ಮೇಲೆ ಅವಲಂಬಿತವಾಗಿವೆ. ಕೇವಲ ಅಕ್ರಮ ಹಣ ವರ್ಗಾವಣೆಯ ಶಂಕೆಯ ಆಧಾರದ ಮೇಲೆ ಇ.ಡಿ. ಸ್ವಯಂಪ್ರೇರಿತವಾಗಿ ತನಿಖೆ ಆರಂಭಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅರುಣ್ ಹೇಳಿದ್ದಾರೆ.

ಇದನ್ನೂ ಓದಿ:  ಮಾಲೂರು ಕೈ ಶಾಸಕ ಕೆ.ವೈ.ನಂಜೇಗೌಡ ವಿರುದ್ಧದ ಇಡಿ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಇ.ಡಿ.ಯು ತನ್ನ ವ್ಯಾಪ್ತಿಯನ್ನು ಮೀರಿ ಖಾಸಗಿ ದೂರು ದಾಖಲಿಸಲು ಮುಂದಾಗಿರುವುದನ್ನೂ ಹೈಕೋರ್ಟ್ ತೀವ್ರವಾಗಿ ಆಕ್ಷೇಪಿಸಿದೆ. ಪಿಎಂಎಲ್‌ಎ ಸೆಕ್ಷನ್ 66(2) ಅಡಿಯಲ್ಲಿ ಹಂಚಿಕೊಂಡ ಮಾಹಿತಿಯ ಆಧಾರದ ಮೇಲೆ ಸಂಬಂಧಪಟ್ಟ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳದಿದ್ದಾಗ, ಇ.ಡಿ. ಸ್ವತಃ ಖಾಸಗಿ ದೂರು ದಾಖಲಿಸಿರುವುದನ್ನು ನ್ಯಾಯಾಲಯ ಪ್ರಶ್ನಿಸಿದೆ. ಇತರ ಕಾನೂನುಗಳ ಉಲ್ಲಂಘನೆಗೆ ಸಂಬಂಧಿಸಿದ ಮಾಹಿತಿ ತನಿಖೆಯ ವೇಳೆ ಇ.ಡಿ.ಗೆ ಲಭ್ಯವಾದರೆ, ಪಿಎಂಎಲ್‌ಎ ಸೆಕ್ಷನ್ 66(2) ಅಡಿಯಲ್ಲಿ ಆ ಮಾಹಿತಿಯನ್ನು ಸಂಬಂಧಪಟ್ಟ ತನಿಖಾ ಸಂಸ್ಥೆಗೆ ಹಂಚಿಕೊಳ್ಳಬೇಕು. ಆ ಅಪರಾಧಗಳ ತನಿಖೆಯನ್ನು ಇ.ಡಿ. ಸ್ವತಃ ವಹಿಸಿಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಕಾನೂನಿನಡಿ ನೀಡಿರುವ ಅಧಿಕಾರಗಳನ್ನು ನಿಗದಿತ ರೀತಿಯಲ್ಲಿಯೇ ಬಳಸಬೇಕು. ಸಂವಿಧಾನದ ಅಧಿಕಾರ ವಿಭಜನೆ ಮತ್ತು ನಿಯಂತ್ರಣ ವ್ಯವಸ್ಥೆಯು ಯಾವುದೇ ಒಂದು ಸಂಸ್ಥೆ ಸರ್ವೋಚ್ಚ ಅಧಿಕಾರ ಹೊಂದಲು ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ