ಶಾಸಕ ದದ್ದಲ್ ನಿವಾಸದಲ್ಲಿ ಸತತ 38 ಗಂಟೆಗಳ ಕಾಲ ನಡೆದ ಇಡಿ ಕಾರ್ಯಾಚರಣೆ ಅಂತ್ಯ, ಸಿಕ್ಕಿದ್ದೇನು?

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ (Maharshi Valmiki Development Corporation)ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ವಿಲ್ಲಾ ಮತ್ತು ರಾಯಚೂರಿನ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದರು. ಇದೀಗ ಸತತ 37 ಗಂಟೆಗಳ ಶೋಧ ಕಾರ್ಯ ಮುಕ್ತಾಯಗೊಳಿಸಿದ್ದಾರೆ.

ಶಾಸಕ ದದ್ದಲ್ ನಿವಾಸದಲ್ಲಿ ಸತತ 38 ಗಂಟೆಗಳ ಕಾಲ ನಡೆದ ಇಡಿ ಕಾರ್ಯಾಚರಣೆ ಅಂತ್ಯ, ಸಿಕ್ಕಿದ್ದೇನು?
ಶಾಸಕ ದದ್ದಲ್ ನಿವಾಸದಲ್ಲಿ ಸತತ 38 ಗಂಟೆಗಳ ಕಾಲ ನಡೆದ ಇಡಿ ಕಾರ್ಯಾಚರಣೆ ಅಂತ್ಯ, ಸಿಕ್ಕಿದ್ದೇನು?
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2024 | 10:48 PM

ಬೆಂಗಳೂರು, ಜು.11: ವಾಲ್ಮೀಕಿ ಅಭಿವೃದ್ಧಿ ನಿಗಮ(Valmiki Development Corporation)ದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ವಿಲ್ಲಾ ಮತ್ತು ರಾಯಚೂರಿನ ನಿವಾಸದಲ್ಲಿ ಇಡಿ ಪರಿಶೀಲನೆ ಮುಕ್ತಾಯವಾಗಿದೆ. ಯಲಹಂಕ ಬಳಿಯ ಶ್ರೀನಿವಾಸಪುರದಲ್ಲಿರುವ ದದ್ದಲ್​ಗೆ ಸೇರಿದ ವಿಲ್ಲಾದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬರೋಬ್ಬರಿ 37 ಗಂಟೆ ಶೋಧಕಾರ್ಯದ ಬಳಿಕ ಕಾರ್ಯಾಚರಣೆ ಮುಕ್ತಾಯಗೊಳಿಸಿದ್ದಾರೆ.

ಇಡಿ ಅಧಿಕಾರಿಗಳಿಂದ ನಿರಂತರ ದಾಖಲೆ ಪರಿಶೀಲನೆ

ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ ಅವರನ್ನು ಕೂಡ ಇಡಿ ವಿಚಾರಣೆ ಒಳಪಡಿಸಿತ್ತು. ಇನ್ನು ಕಳೆದ ಎರಡು ದಿನಗಳಿಂದ ನಿರಂತರವಾಗಿ ದಾಖಲೆಗಳ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು, ದದ್ದಲ್ ವಿಲ್ಲಾದಲ್ಲಿ ಸಿಕ್ಕ ದಾಖಲೆಗಳನ್ನು ಇನೋವಾ ಕಾರಿನಲ್ಲಿ ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಕೊಂಡೊಯ್ದಿದ್ದಾರೆ. ಇತ್ತ ಇಡಿ ದಾಳಿ ಅಂತ್ಯವಾದರೂ ಕೂಡ ಶಾಸಕ ಬಸವನಗೌಡ ದದ್ದಾಲ್ ‌ಹೊರಗಡೆ ಬಾರದೆ, ಯಾವುದೇ ಪ್ರತಿಕ್ರಿಯೆ ನೀಡದೆ ಮನೆಯ ಡೋರ್ ಲಾಕ್ ಮಾಡಿಕೊಂಡು ಒಳಗಡೆ ಇದ್ದಾರೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಹಗರಣದ ಆರೋಪಿಗಳ‌ ಮತ್ತೊಂದು ಕಹಾನಿ ಬಯಲು

ಇತ್ತ ನಿನ್ನೆ ಬೆಳಗ್ಗೆ 7 ಗಂಟೆಯಿಂದ ರಾಯಚೂರಲ್ಲಿ ಪರಿಶೀಲನೆ ನಡೆಸುತ್ತಿದ್ದ ಇಡಿ ಅಧಿಕಾರಿಗಳ ದಾಳಿ ಕೂಡ ಮುಕ್ತಾಯವಾಗಿದೆ. ದದ್ದಲ್ ಮಾಜಿ ಪಿಎ ಪಂಪಣ್ಣ, ದದ್ದಲ್ ಅಳಿಯ ಚನ್ನಬಸವ ವಿಚಾರಣೆ ನಡೆಸಲಾಗಿತ್ತು. ಇದೀಗ ಯಾರನ್ನೂ ವಶಕ್ಕೆ ಪಡೆಯದೆ, ಬಸನಗೌಡ ದದ್ದಲ್ ಹಾಗೂ ಪಿಎ ಪಂಪಣ್ಣ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಇಡಿ ವಶಕ್ಕೆ ಪಡೆದು, ಬ್ಯಾಗ್​ಗಳಲ್ಲಿ ತುಂಬಿಸಿ ಕೊಂಡೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್