ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ

ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ
ಜಾರಿ ನಿರ್ದೇಶನಾಲಯ
Follow us
TV9 Web
| Updated By: ಆಯೇಷಾ ಬಾನು

Updated on:Oct 22, 2022 | 10:57 AM

ಬೆಂಗಳೂರು: ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಅಧಿಕಾರಿಗಳು(ಜಾರಿ ನಿರ್ದೇಶನಾಲಯ) ನಗರದ 5 ಕಡೆ ದಾಳಿ ಮಾಡಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಸಿಐಡಿ ಸೈಬರ್ ಕ್ರೈಂ ವಿಭಾಗದಲ್ಲಿ 18 FIR ದಾಖಲಾಗಿದ್ದವು. ಕೇಸ್ ಆಧಾರದ ಮೇಲೆ ತನಿಖೆ ನಡೆಸಿದಾಗ ಎಲ್ಲಾ ಲೋನ್ ಆ್ಯಪ್ ಗಳ ಮೂಲ ಚೀನಾವೆಂದು ಪತ್ತೆಯಾಗಿತ್ತು. ಭಾರತೀಯ ಮೂಲದ ಉದ್ಯೋಗಿಗಳನ್ನೇ ಕಂಪನಿ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಚೀನಿ ಲೋನ್ ಆ್ಯಪ್​ಗಳ ಮೇಲೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 100 ಕೋಟಿ ಮುಟ್ಟುಗೋಲು

ಮತ್ತೊಂದು ಚೀನಿ ಕಂಪನಿಯ ಮೇಲೆ ಇಡಿ ದಾಳಿ

ಕೆಲ ತಿಂಗಳ ಹಿಂದೆ ಉದ್ಯೋಗದ ಭರವಸೆ ಕೊಟ್ಟು ಯುವಕರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ಚೀನಾ ಮೂಲದ ‘ಕೀಪ್​ಶೇರ್’ ಆ್ಯಪ್​ಗೆ ಸೇರಿದ 12 ಕೇಂದ್ರಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ₹ 5.88 ಕೋಟಿ ನಗದು ಹಾಗೂ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಆ್ಯಪ್​ ವಿರುದ್ಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಾರ್ಟ್​ಟೈಮ್ ಕೆಲಸ ಕೊಡುವುದಾಗಿ ಯುವಕರನ್ನು ಆಕರ್ಷಿಸುತ್ತಿದ್ದ ‘ಕೀಪ್​ಶೇರ್’ ಆ್ಯಪ್, ಸಾಕಷ್ಟು ಜನರನ್ನು ವಂಚಿಸಿತ್ತು. ಚೀನಾ ಮೂಲದ ವ್ಯಕ್ತಿಗಳು ಭಾರತೀಯರನ್ನೇ ನಿರ್ದೇಶಕರನ್ನಾಗಿಸಿ ಭಾರತದ ವಿವಿಧೆಡೆ ಒಂದಿಷ್ಟು ಕಚೇರಿಗಳನ್ನು ತೆರೆದಿದ್ದರು. ಈ ಕಚೇರಿಗಳ ಟೆಲಿಕಾಲರ್​ಗಳು ಯುವಕರಿಗೆ ಗಾಳ ಹಾಕಿ ಅವರ ಮಾಹಿತಿ ಸಂಗ್ರಹಿಸಿ, ಉದ್ಯೋಗಕ್ಕಾಗಿ ಹಣದ ಬೇಡಿಕೆ ಇಡುತ್ತಿದ್ದರು. ಸಾಕಷ್ಟು ಮೊತ್ತ ಸಂಗ್ರಹವಾಗುತ್ತಿದ್ದಂತೆ ಕಂಪನಿಯೇ ನಾಪತ್ತೆಯಾಗುತ್ತಿತ್ತು. ಇದರ ಜೊತೆಗೆ ಹೂಡಿಕೆ ಆ್ಯಪ್​ಗಳ ಹೆಸರಿನಲ್ಲಿಯೂ ಸಾರ್ವಜನಿಕರಿಂದ ದಾಖಲೆಗಳು ಹಾಗೂ ಹಣ ಸಂಗ್ರಹಿಸಿರುವ ಬಗ್ಗೆಯೂ ತನಿಖೆ ವೇಳೆ ತಿಳಿದುಬಂದಿತ್ತು.

Published On - 10:50 am, Sat, 22 October 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ